ಬೆಲೆಕೇರಿ ಅಕ್ರಮ ಗಣಿ ಅದಿರು ಪ್ರಕರಣದಲ್ಲಿ ಅದಾನಿ ಕಂಪನಿ ವಿರುದ್ಧ ಪ್ರಕರಣ ದಾಖಲಾಗಬೇಕು. ಹಾಗೆಯೇ ಈ ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಶನಿವಾರ ಆಗ್ರಹಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹರಿಪ್ರಸಾದ್ ಅವರು, “ಬೆಲೆಕೇರಿ ಅಕ್ರಮ ಅದಿರು ಕಳ್ಳ ಸಾಗಾಣೆ ಪ್ರಕರಣದಲ್ಲಿ ಅರಣ್ಯದ ಅಧಿಕಾರಿಗಳು ಸುಮಾರು 8,05,991.083 ಟನ್ ಅಕ್ರಮ ಅದಿರನ್ನು ವಶಪಡಿಸಿಕೊಂಡಿದ್ದರು. ಆದರೆ ಈ ಅದಿರನ್ನು ಅದಾನಿ ಸಂಸ್ಥೆ ಭಾರೀ ಪ್ರಮಾಣದಲ್ಲಿ ಕಳ್ಳ ಸಾಗಾಣಿಕೆ ಮಾಡಿದೆ” ಎಂದು ಆರೋಪಿಸಿದ್ದಾರೆ. ಈ ವೇಳೆ ಲೋಕಾಯುಕ್ತ ವರದಿಯನ್ನೂ ಅವರು ಉಲ್ಲೇಖಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಅದಿರನ್ನು ವಿದೇಶಕ್ಕೆ ಕಳ್ಳಸಾಗಾಣಿಕೆ ಮಾಡುವ ಬಗ್ಗೆ ಲೋಕಾಯುಕ್ತ ತನಿಖೆಯಲ್ಲಿ ಬಹಿರಂಗವಾಗಿದೆ. ಅದಾನಿ ಎಂಟರ್‌ಪ್ರೈಸಸ್, ಸಲ್ಗಾಂವಕರ್ ಮೈನಿಂಗ್ ಇಂಡಸ್ಟ್ರಿ, ರಾಜ್ ಮಹಲ್ ಕಂಪನಿ ಮತ್ತು ಮಲ್ಲಿಕಾರ್ಜುನ ಶಿಪ್ಪಿಂಗ್ ಈ ಕೃತ್ಯವನ್ನು ಮಾಡಿದೆ. ಈ ಎಲ್ಲಾ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಸಂಸ್ಥೆ ಶಿಫಾರಸು ಮಾಡಿದೆ ಎಂದು ಅವರು ಹೇಳಿದ್ದಾರೆ.
ಈಗಾಗಲೇ ತನಿಖೆ ನಡೆಸಿರುವ ಸಿಬಿಐ ಸಲ್ಗಾಂವಕರ್ ಮೈನಿಂಗ್ ಇಂಡಸ್ಟ್ರಿ, ರಾಜ್ ಮಹಲ್ ಕಂಪನಿ ಮತ್ತು ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದೆ. ಈ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಸೇರಿದಂತೆ ಆರೋಪಿಗಳು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಇದಾದ ಬಳಿಕ ಸದ್ಯ ಶಿಕ್ಷೆಯನ್ನು ಹೈಕೋರ್ಟ್ ಅಮಾನತ್ತಿನಲ್ಲಿಟ್ಟಿದೆ. ಆದರೆ ಅದಾನಿ ಸಂಸ್ಥೆ ವಿರುದ್ಧ ಯಾವುದೇ ತನಿಖೆ ನಡೆದಿಲ್ಲ. ಈ ಬಗ್ಗೆ ನಿರಂತರವಾಗಿ ವಿಪಕ್ಷಗಳು ಬೊಟ್ಟು ಮಾಡುತ್ತಿದೆ.
ಇದನ್ನೂ ಓದಿ: ಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್
ಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್


