Homeಮುಖಪುಟಇಂದು ಮತ್ತೆ ರೈತರಿಂದ ದೆಹಲಿಗೆ ಪ್ರತಿಭಟನಾ ಮೆರವಣಿಗೆ

ಇಂದು ಮತ್ತೆ ರೈತರಿಂದ ದೆಹಲಿಗೆ ಪ್ರತಿಭಟನಾ ಮೆರವಣಿಗೆ

- Advertisement -
- Advertisement -

ಚಂಡಿಗಡ: ಪಂಜಾಬ್ ಮತ್ತು ಹರಿಯಾಣದಿಂದ ರೈತರ ಗುಂಪುವೊಂದು ಇಂದು (ಭಾನುವಾರ) ದೆಹಲಿಯತ್ತ ಮೆರವಣಿಗೆ ನಡೆಸಲಿದೆ. ಕೇಂದ್ರ ಸರ್ಕಾರವು ಶುಕ್ರವಾರದಂದು ನಡೆಸಿದ ನಮ್ಮ ಪ್ರತಿಭಟನೆಗೆ ಸರಿಯಾಗಿ ಪ್ರತಿಕ್ರಿಯೆ ನೀಡಿಲ್ಲ ಮತ್ತು ನಮ್ಮ ಜೊತೆ ಮಾತುಕತೆ ನಡೆಸಿಲ್ಲವೆಂದು ರೈತ ನಾಯಕರು ಆರೋಪಿಸಿದ್ದಾರೆ.

ದೆಹಲಿ ತಲುಪಲು ರೈತ ಹೋರಾಟಗಾರರು ಹೊಸ ಪ್ರಯತ್ನದ ನಿರೀಕ್ಷೆಯಲ್ಲಿರುವುದರಿಂದ ಪಂಜಾಬ್-ಹರಿಯಾಣ ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ರೈತ ಹೋರಾಟಗಾರರನ್ನು ತಡೆಯಲು ಮುಂಗಡವಾಗಿ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಲಾಗಿದೆ.

ಇಂದು ನಡೆಯುವ ಹೊಸತನದ ರೈತ ಪ್ರತಿಭಟನಾ ಮೆರವಣಿಗೆಯು ಶುಕ್ರವಾರದ ರೀತಿಯಲ್ಲಿಯೇ ಇರಲಿದೆ. ಶುಕ್ರವಾರದಂದು ರೈತರು ರಾಷ್ಟ್ರ ರಾಜಧಾನಿಯತ್ತ ಸಾಗಲು ಪ್ರಯತ್ನಿಸಿದರು. ಆದರೆ ಭದ್ರತಾ ಸಿಬ್ಬಂದಿ ಗಡಿಯಲ್ಲಿ ಅಶ್ರುವಾಯು ಶೆಲ್ ಗಳನ್ನು ಹಾರಿಸಿದಾಗ ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದರು.

ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರವು ನಮ್ಮ ಜೊತೆ ಮಾತುಕತೆಗೆ ಬಂದಿಲ್ಲ. 101 ರೈತರ ಗುಂಪು ಇಂದು (ಡಿ.8) ದೆಹಲಿಗೆ ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಲಿದೆ ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ

ರೈತರು ಮತ್ತು ಕಾರ್ಮಿಕರೊಂದಿಗೆ ಮಾತುಕತೆಯಾಡಬಾರದೆಂದು ಕೇಂದ್ರವು ತೀರ್ಮಾನಿಸಿದಂತೆ ಕಾಣುತ್ತದೆ. ಅವರು ನಮ್ಮನ್ನು ತಡೆಯಲು ಬಲಪ್ರಯೋಗ ಮಾಡುತ್ತಿದ್ದಾರೆ. ಶುಕ್ರವಾರದಂತೆ ನಾವು ಶಾಂತಿಯುತವಾಗಿ ಮತ್ತು ಶಿಸ್ತಿನಿಂದ ದೆಹಲಿಗೆ ಹೋಗುತ್ತೇವೆ. ನರೇಂದ್ರ ಮೋದಿ ಸರ್ಕಾರವು ಮಾತುಕತೆಯಾಡುವ ಮನಸ್ಥಿತಿಯಲ್ಲಿಲ್ಲ. ಮಧ್ಯಾಹ್ನ 12 ಗಂಟೆ ಸುಮಾರಿಗೆ 101 ರೈತರ ನಿಯೋಗವನ್ನು ಪ್ರತಿಭಟನಾ ಮೆರವಣಿಗೆಯೊಂದಿಗೆ ದೆಹಲಿಗೆ ಕಳುಹಿಸಲು ನಾವು ನಿರ್ಧರಿಸಿದ್ದೇವೆ ಎಂದು ಪಾಂಡರ್ ಹೇಳಿದರು.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಸಂಸತ್ತಿನ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಕೃಷಿ ಸಚಿವರು ಸಂಸತ್ತಿನ ದಿಕ್ಕು ತಪ್ಪಿಸುತ್ತಿದ್ದಾರೆ. ನಾವು ಎಂಎಸ್‌ಪಿ ಮೇಲೆ ಕಾನೂನು ಮೂಲಕ ಭರವಸೆ ನೀಡಬೇಕೆಂದು ಒತ್ತಾಯಿಸುತ್ತಿದ್ದೇವೆ. ಆದರೆ ಸಚಿವರು ಮೌನವಾಗಿದ್ದಾರೆ ಎಂದು ಪಂಧೇರ್ ಹೇಳಿದರು.

ಪಂಜಾಬ್‌ಗೆ ಬಿಜೆಪಿ ನಾಯಕರ ಪ್ರವೇಶವನ್ನು ರೈತರಾದ ನಾವು ವಿರೋಧಿಸುತ್ತೇವೆ ಎಂದು ಇದೇ ಸಮಯದಲ್ಲಿ ಪಂಧೇರ್ ಘೋಷಿಸಿದರು.

ಕಿಸಾನ್ ಮಜ್ದೂರ್ ಮೋರ್ಚಾ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ದಿಂದ ನಡೆಸುತ್ತಿರುವ ಈ ಪ್ರತಿಭಟನೆಯು ಈಗ 300 ನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಕೇಂದ್ರ ಸರ್ಕಾರ ಇನ್ನೂ ಹಠಮಾರಿ ಧೋರಣೆಯಲ್ಲಿಯೇ ಇದೆ. ಪಂಜಾಬ್‌ಗೆ ಬಿಜೆಪಿ ನಾಯಕರ ಪ್ರವೇಶವನ್ನು ಪ್ರತಿಭಟಿಸುವ ಮತ್ತೊಂದು ದೊಡ್ಡ ಘೋಷಣೆ ಮಾಡಿದ್ದೇವೆ. ಇಂದು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಪಂಜಾಬಿನ ಅಮೃತಸರಕ್ಕೆ ಹೋಗುತ್ತಿದ್ದಾರೆ ಎಂದು ನಾವು ಕೇಳಿದ್ದೇವೆ. ಆದರೆ ಇದು ಇನ್ನೂ ಖಚಿತವಾಗಿಲ್ಲ. ಇವರು  ರಾಜ್ಯಕ್ಕೆ ಪ್ರವೇಶಿಸುವುದನ್ನು ಪ್ರತಿಭಟಿಸುವಂತೆ ನಾವು ಪಂಜಾಬ್‌ನ ರೈತರಿಗೆ ಕರೆ ನೀಡುತ್ತೇವೆ ಎಂದು ಅವರು ಹೇಳಿದರು.

ಹರಿಯಾಣ ಭದ್ರತಾ ಸಿಬ್ಬಂದಿಯಿಂದ ಶುಕ್ರವಾರದಂದು ಬಹುಪದರದ ಬ್ಯಾರಿಕೇಡ್‌ ನಿರ್ಮಿಸಿ ನಮ್ಮ ಜಾಥಾವನ್ನು ನಿಲ್ಲಿಸಲಾಯಿತು. ನಿಷೇಧಾಜ್ಞೆಗಳ ಹೊರತಾಗಿಯೂ, ರೈತರು ಬ್ಯಾರಿಕೇಡ್ ಗಳನ್ನು ಭೇದಿಸಲು ಪ್ರಯತ್ನಿಸಿದರು. ಆದರೆ ಭದ್ರತಾ ಪಡೆಗಳು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದರಿಂದ ಪ್ರತಿರೋಧವನ್ನು ಎದುರಿಸಬೇಕಾಯಿತು.  ಪಂಜಾಬ್‌ನ ಶಂಭುವಿನ ನಮ್ಮ ಪ್ರತಿಭಟನಾ ಸ್ಥಳಕ್ಕೆ ಮರಳುವಂತೆ ಅವರು ಒತ್ತಾಯಿಸಿದರು.

ರೈತರು ಈ ಹಿಂದೆ ಫೆಬ್ರವರಿ 13 ಮತ್ತು ಫೆಬ್ರವರಿ 21 ರಂದು ದೆಹಲಿ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದ್ದರು.  ಆದರೆ ಆಗ ಗಡಿ ಕೇಂದ್ರಗಳಲ್ಲಿ ಭದ್ರತಾ ಪಡೆಗಳು ತಡೆದಿದ್ದರು.

ಎಂಎಸ್‌ಪಿ ಜೊತೆಗೆ, ರೈತರು ಕೃಷಿ ಸಾಲ ಮನ್ನಾ, ರೈತರು ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರ ಏರಿಕೆಯನ್ನು ಸ್ಥಗಿತಗೊಳಿಸುವುದು, ರೈತರ ಮೇಲಿನ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು ಮತ್ತು 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ರೈತರು ಒತ್ತಾಯಿಸುತ್ತಿದ್ದಾರೆ ಮತ್ತು 2020-21ರ ಪ್ರತಿಭಟನೆಯಲ್ಲಿ  ಸುಮಾರು 600ಕ್ಕೂ ಹೆಚ್ಚು ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ನೀಡುವುದು ರೈತ ಹೋರಾಟಗಾರರ ಬೇಡಿಕೆಗಳಲ್ಲಿ ಸೇರಿವೆ.

ಇದನ್ನೂ ಓದಿ…ಬಾಂಗ್ಲಾದೇಶದ ದಲಿತರ ಬಗ್ಗೆ ಮೌನವಾಗಿರುವ ಕಾಂಗ್ರೆಸ್, ಸಂಭಾಲ್ ಮೂಲಕ ಮುಸ್ಲಿಮರನ್ನು ಓಲೈಸುತ್ತಿದೆ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...