Homeಮುಖಪುಟಮಸೀದಿಗಳ ವಿರುದ್ಧ ನಡೆಸಲಾಗುತ್ತಿರುವ ದಾಳಿಯಲ್ಲಿ ಮಧ್ಯಪ್ರವೇಶ ಮಾಡಬೇಕಾಗಿದ್ದು ಸುಪ್ರೀಂಕೋಟ್ ಜವಾಬ್ದಾರಿ - ಸಿಪಿಐ(ಎಂ)

ಮಸೀದಿಗಳ ವಿರುದ್ಧ ನಡೆಸಲಾಗುತ್ತಿರುವ ದಾಳಿಯಲ್ಲಿ ಮಧ್ಯಪ್ರವೇಶ ಮಾಡಬೇಕಾಗಿದ್ದು ಸುಪ್ರೀಂಕೋಟ್ ಜವಾಬ್ದಾರಿ – ಸಿಪಿಐ(ಎಂ)

- Advertisement -
- Advertisement -

ಶತಮಾನಗಳಷ್ಟು ಹಳೆಯದಾದ ಮಸೀದಿಗಳನ್ನು ದೇವಾಲಯ ಎಂದು ಪ್ರತಿಪಾದಿಸುವ ಮೂಲಕ ಕೆಳ ನ್ಯಾಯಾಲಯಗಳಲ್ಲಿ ಮೊಕದ್ದಮೆ ಹೂಡಲಾಗುತ್ತಿರುವ ಮತ್ತು ಅದನ್ನು ಪರಿಗಣಿಸುತ್ತಿರುವ ಬಗ್ಗೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಪಾಲಿಟ್ ಬ್ಯೂರೋ ಸೋಮವಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ, 1991 ಅನ್ನು ಎತ್ತಿಹಿಡಿಯುವ ಮೂಲಕ ಅಂತಹ ದಾವೆಗಳನ್ನು ನಿಲ್ಲಿಸಲು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸದಿರುವುದು ದುರದೃಷ್ಟಕರ ಎಂದು ಪಕ್ಷವೂ ಹೇಳಿದೆ. ಮಸೀದಿಗಳ ವಿರುದ್ಧ

ಈ ಬಗ್ಗೆ ಪತ್ರಿಕಾ ಹೇಳಿಕೆ ಹೊರಡಿಸಿರುವ ಪಕ್ಷದ ಪಾಲಿಟ್ ಬ್ಯೂರೊ, 2019ರ ಬಾಬರಿ ಮಸೀದಿ ಒಡೆದ ವಿವಾದದ ಕುರಿತು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್‌ನ ಐವರು ಸದಸ್ಯರ ಪೀಠವು ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ-1991 ರ ಸಿಂಧುತ್ವವನ್ನು ಮತ್ತು ಅದರ ಜಾರಿಯನ್ನು ಸ್ಪಷ್ಟವಾಗಿ ಎತ್ತಿಹಿಡಿದಿದೆ. ಈ ನಿರ್ದೇಶನದ ಪ್ರಕಾರ, ಕಾಯಿದೆಯನ್ನು ಉಲ್ಲಂಘಿಸುವ ಕಾನೂನು ಪ್ರಕ್ರಿಯೆಗಳಿಗೆ ತಡೆ ಹಾಕಲು ಮಧ್ಯಪ್ರವೇಶಿಸುವುದು ಸುಪ್ರೀಂ ಕೋರ್ಟ್‌ನ ಜವಾಬ್ದಾರಿಯಾಗಿದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಾರಣಾಸಿ ಮತ್ತು ಮಥುರಾ ನಂತರ, ಸಂಭಾಲ್‌ನಲ್ಲಿ, ಕೆಳ ನ್ಯಾಯಾಲಯವು 16 ನೇ ಶತಮಾನದ ಮಸೀದಿಯ ಸಮೀಕ್ಷೆಗೆ ಆದೇಶ ನೀಡಿತು. ಅದು ಹಿಂಸಾಚಾರಕ್ಕೆ ಕಾರಣವಾಗಿದ್ದು, ನಾಲ್ವರು ಮುಸ್ಲಿಂ ಯುವಕರನ್ನು ಕೊಲ್ಲಲಾಯಿತು ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ. ಅಜ್ಮೀರ್ ಷರೀಫ್ ದರ್ಗಾಕ್ಕೆ ಸಂಬಂಧಿಸಿದಂತೆ ಅಜ್ಮೀರ್‌ನ ಸಿವಿಲ್ ನ್ಯಾಯಾಲಯದಲ್ಲಿ ಸಲ್ಲಿಸಲಾದ ಇದೇ ರೀತಿಯ ಅರ್ಜಿಯನ್ನು ಪಕ್ಷವು ಉಲ್ಲೇಖಿಸಿದೆ.

ಇಷ್ಟೆ ಅಲ್ಲದೆ, ನೆರೆಯ ಬಾಂಗ್ಲಾದೇಶದ ಪರಿಸ್ಥಿತಿಯ ಕುರಿತು, ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಪಕ್ಷವು ಪುನರುಚ್ಚರಿಸಿದೆ. ಈ ನಿಟ್ಟಿನಲ್ಲಿ ಅಲ್ಲಿನ ಆಡಳಿತವು ಇಸ್ಲಾಮಿ ಮೂಲಭೂತವಾದಿ ಶಕ್ತಿಗಳ ಚಟುವಟಿಕೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಸಿಪಿಎಂ ಹೇಳಿದೆ. ಮಸೀದಿಗಳ ವಿರುದ್ಧ

ಅದೇ ಸಮಯದಲ್ಲಿ, ಭಾರತದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಮತ್ತು ಹಿಂದುತ್ವ ಸಂಘಟನೆಗಳ ಪ್ರಯತ್ನಗಳನ್ನು ಪೊಲಿಟ್ ಬ್ಯೂರೋ ಖಂಡಿಸಿದ್ದು, “ಬಾಂಗ್ಲಾದೇಶದ ವಿಚಾರವನ್ನು ಎತ್ತಿಕೊಂಡು ಪ್ರಚೋದಿಸಲು ಅವರು ಪ್ರಯತ್ನಿಸುತ್ತಿದ್ದು, ಅಂತಹ ವಿಧಾನವು ಬಾಂಗ್ಲಾದೇಶದ ಅಲ್ಪಸಂಖ್ಯಾತರ ಹಿತಾಸಕ್ತಿಗಳಿಗೆ ಸಹಾಯವಾಗುವುದಿಲ್ಲ” ಎಂದು ಪಕ್ಷವು ಹೇಳಿದೆ.

ಎರಡೂ ದೇಶಗಳಲ್ಲಿನ ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಶಕ್ತಿಗಳು ಉಭಯ ದೇಶಗಳ ಜನರ ಹಿತಾಸಕ್ತಿಗಳಿಗೆ ಹಾನಿ ಮಾಡುವ ಎಲ್ಲಾ ರೀತಿಯ ಕೋಮುವಾದದ ವಿರುದ್ಧ ತೀವ್ರವಾಗಿ ಹೋರಾಟ ಮಾಡುವಂತೆ ಸಿಪಿಐಎಂ ಕರೆ ನೀಡಿದೆ.

ಅಷ್ಟೆ ಅಲ್ಲದೆ, ವಯನಾಡಿನಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತ ದುರಂತದ ಸಂತ್ರಸ್ತರಿಗೆ ಕೇರಳಕ್ಕೆ ಸರಿಯಾದ ನೆರವನ್ನು ನಿರಾಕರಿಸುವಲ್ಲಿ ಸರ್ಕಾರದ ನಿರ್ದಯ ಉದಾಸೀನತೆಯನ್ನು ಅದು ಕಟುವಾಗಿ ಟೀಕಿಸಿದೆ. “ತಕ್ಷಣದ ಪರಿಹಾರಕ್ಕಾಗಿ 214.68 ಕೋಟಿ ರೂ. ಮತ್ತು ಸಮಗ್ರ ಚೇತರಿಕೆ ಮತ್ತು ಪುನರ್ನಿರ್ಮಾಣಕ್ಕಾಗಿ 2,319.1 ಕೋಟಿ ರೂ.ಗಾಗಿ ಕೇರಳ ತುರ್ತು ಮನವಿ ಮಾಡಿದ್ದರೂ, ಕೇಂದ್ರವು ನಾಲ್ಕು ತಿಂಗಳು ಕಳೆದರೂ ಅನುದಾನವನ್ನು ಅನುಮೋದಿಸಲು ವಿಫಲವಾಗಿದೆ” ಎಂದು ಪಕ್ಷವೂ ಹೇಳಿದೆ.

“ಭೂಕುಸಿತವನ್ನು ‘ತೀವ್ರ ಸ್ವರೂಪದ ವಿಪತ್ತು’ ಎಂದು ವರ್ಗೀಕರಿಸಲು ನಿರಾಕರಣೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ಸಾಲವನ್ನು ಮನ್ನಾ ಮಾಡಲು ಇಷ್ಟವಿಲ್ಲದಿರುವುದು ಸಹ ತೀವ್ರವಾದ ಅನ್ಯಾಯವನ್ನು ಪ್ರತಿಬಿಂಬಿಸುತ್ತದೆ. ಜೊತೆಗೆ ಇದು ಅಮಾನವೀಯ ವಿಧಾನವಾಗಿದ್ದು, ಬಿಕ್ಕಟ್ಟಿನ ಸಮಯದಲ್ಲಿ ಫೆಡರಲ್ ಬೆಂಬಲದ ತತ್ವಗಳನ್ನು ದುರ್ಬಲಗೊಳಿಸುತ್ತದೆ” ಎಂದು ಸಿಪಿಎಂ ಹೇಳಿದೆ. ರಾಜ್ಯ ಸರ್ಕಾರ ಹೇಳಿರುವ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಪಾಲಿಟ್ ಬ್ಯೂರೋ ಕೇಂದ್ರಕ್ಕೆ ಮನವಿ ಮಾಡಿದೆ.

ಪಕ್ಷದ ಹೇಳಿಕೆಯಲ್ಲಿ, ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ರೈತರ ಮೇಲಿನ ಪೊಲೀಸರ ದಬ್ಬಾಳಿಕೆಯನ್ನು ಖಂಡಿಸಿದೆ. ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ಮತ್ತು ಇತರ ಸಂಘಟನೆಗಳ ಸುಮಾರು 150 ಮುಖಂಡರು ಮತ್ತು ಕಾರ್ಯಕರ್ತರನ್ನು ಜೈಲಿಗೆ ಹಾಕಲಾಗಿದೆ ಎಂದು ಪಕ್ಷ ತಿಳಿಸಿದೆ. ಬಂಧಿತ ರೈತರು ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಹಲವು ಕಾರ್ಯಕರ್ತರ ಗೃಹಬಂಧನ ನಡೆಯುತ್ತಿದೆ. ಹೋರಾಟದ ಮುಂಚೂಣಿಯಲ್ಲಿದ್ದ ಮಹಿಳೆಯರ ಮೇಲೆ ಪೊಲೀಸರು ನಡೆಸಿದ ಹಲ್ಲೆ ಆಘಾತಕಾರಿಯಾಗಿದೆ ಎಂದು ಪಕ್ಷವೂ ಹೇಳಿದೆ.

“…ಈ ಹೋರಾಟಕ್ಕೆ ಸಿಪಿಐ(ಎಂ) ಸಂಪೂರ್ಣ ಬೆಂಬಲ ನೀಡುತ್ತದೆ. ದಬ್ಬಾಳಿಕೆಯನ್ನು ಕೂಡಲೇ ನಿಲ್ಲಿಸಬೇಕು ಮತ್ತು ಸರಕಾರವು ನ್ಯಾಯಯುತ ಬೇಡಿಕೆಗಳನ್ನು ಒಪ್ಪಿಕೊಂಡು ಅವುಗಳನ್ನು ಜಾರಿಗೊಳಿಸಬೇಕು ಎಂದು” ಎಂದು ಪಕ್ಷ ಹೇಳಿದೆ. ನವದೆಹಲಿಯಲ್ಲಿ ನಡೆದ ಪಾಲಿಟ್‌ ಬ್ಯೂರೋ ಸಭೆಯ ನಂತರ ಈ ಹೇಳಿಕೆಯನ್ನು ನೀಡಲಾಗಿದೆ.

ಇದನ್ನೂ ಓದಿ: ‘ಪಾಶ್‌ ಕಾಯಿದೆ’ಯಡಿ ರಾಜಕೀಯ ಪಕ್ಷಗಳನ್ನು ಸೇರಿಸುವಂತೆ ಕೋರಿ ಅರ್ಜಿ; ಇಸಿಐ ಸಂಪರ್ಕಿಸುವಂತೆ ಸೂಚಿಸಿದ ಸುಪ್ರೀಂ

‘ಪಾಶ್‌ ಕಾಯಿದೆ’ಯಡಿ ರಾಜಕೀಯ ಪಕ್ಷಗಳನ್ನು ಸೇರಿಸುವಂತೆ ಕೋರಿ ಅರ್ಜಿ; ಇಸಿಐ ಸಂಪರ್ಕಿಸುವಂತೆ ಸೂಚಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...