Homeಮುಖಪುಟದೆಹಲಿಯಲ್ಲಿ ವಿರೋಧ; ತೆಲಂಗಾಣದಲ್ಲಿ ಪರ - ಅದಾನಿ ಬಗ್ಗೆ ಕಾಂಗ್ರೆಸ್‌ನ ದ್ವಂದ್ವ ನಿಲುವು

ದೆಹಲಿಯಲ್ಲಿ ವಿರೋಧ; ತೆಲಂಗಾಣದಲ್ಲಿ ಪರ – ಅದಾನಿ ಬಗ್ಗೆ ಕಾಂಗ್ರೆಸ್‌ನ ದ್ವಂದ್ವ ನಿಲುವು

- Advertisement -
- Advertisement -

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿಯ ಅದಾನಿ ಗ್ರೂಪ್ ಮತ್ತು ತೆಲಂಗಾಣದ ಕಾಂಗ್ರೆಸ್ ಸರ್ಕಾರ ನಡುವೆ ನಡೆದ ಒಪ್ಪಂದವನ್ನು ವಿರೋಧಿಸುವ ಘೋಷವಾಕ್ಯವಿರುವ ಟಿ-ಶರ್ಟ್ ಧರಿಸಿ ರಾಜ್ಯದ ವಿಧಾನಸಭೆಯ ಅಧಿವೇಶನದ ಮೊದಲ ದಿನ ಹಾಜರಾಗಲು ಯತ್ನಿಸಿದ ಬಿಆರ್‌ಎಸ್‌ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ ಮತ್ತು ಮಾಜಿ ಸಚಿವ ಟಿ.ಹರೀಶ್ ರಾವ್ ಸೇರಿದಂತೆ ಪಕ್ಷದ ಹಲವು ಶಾಸಕರು ಮತ್ತು ಎಂಎಲ್‌ಸಿಗಳನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿಯಲ್ಲಿ ವಿರೋಧ

ಗನ್ ಪಾರ್ಕ್ ಬಳಿಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ಬಿಆರ್‌ಎಸ್ ಶಾಸಕರು ಮತ್ತು ಎಂಎಲ್‌ಸಿಗಳು ನಂತರ ವಿಧಾನಸಭೆಯತ್ತ ತೆರಳುತ್ತಿದ್ದಾಗ ಪೊಲೀಸರು ತಡೆದಿದ್ದಾರೆ. ಪೊಲೀಸರು ಅವರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು. ಬಿಆರ್‌ಎಸ್ ಶಾಸಕರು ಧರಿಸಿದ್ದ ಟೀ ಶರ್ಟ್‌ಗಳಲ್ಲಿ ಅದಾನಿ-ರೇವಂತ್ ಭಾಯ್ ಭಾಯಿ ಎಂಬ ಘೋಷಣೆಯನ್ನು ಬರೆಯಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗನ್ ಪಾರ್ಕ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್, “ದೇಶದ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಅದಾನಿಯನ್ನು ಟೀಕಿಸುತ್ತಿದೆ. ಆದರೆ, ತೆಲಂಗಾಣದಲ್ಲಿ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಮತ್ತು ಅದಾನಿ ಒಂದಾಗಿದ್ದಾರೆ. ರೇವಂತ್ ರೆಡ್ಡಿ ಮತ್ತು ಅದಾನಿ ನಡುವಿನ ಸ್ನೇಹ ಸಂಬಂಧವನ್ನು ಈಗ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಬಹಿರಂಗಪಡಿಸುತ್ತೇವೆ” ಎಂದು ಹೇಳಿದ್ದಾರೆ. ದೆಹಲಿಯಲ್ಲಿ ವಿರೋಧ

ನಂತರ ತೆಲಂಗಾಣ ಭವನದಲ್ಲಿ ಜಮಾಯಿಸಿದ ಬಿಆರ್‌ಎಸ್ ಶಾಸಕರು ಮತ್ತು ಎಂಎಲ್‌ಸಿಗಳು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಜಗದೀಶ್ ರೆಡ್ಡಿ, ಇದೇ ಮೊದಲ ಬಾರಿಗೆ ಶಾಸಕರನ್ನು ವಿಧಾನಸಭೆಯ ಸದನಕ್ಕೆ ಬಿಡಲಿಲ್ಲ ಎಂದು ಆರೋಪಿಸಿದ್ದಾರೆ. “ಶಾಸಕರು ಯಾವ ರೀತಿಯ ಡ್ರೆಸ್ ಧರಿಸಬೇಕು ಎಂಬುದನ್ನು ರಾಜ್ಯ ವಿಧಾನಸಭಾಧ್ಯಕ್ಷರು ತಿಳಿಸಬೇಕೆ. ಅದಾನಿ-ರೇವಂತ್ ವಿರೋಧಿಸಿ ಟೀಶರ್ಟ್ ಧರಿಸುವುದರಲ್ಲಿ ತಪ್ಪೇನು” ಎಂದು ಅವರು ಪ್ರಶ್ನಿಸಿದ್ದಾರೆ.

ಎಐಸಿಸಿ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಅದಾನಿ ವಿರುದ್ಧ ಮಾತನಾಡುತ್ತಿದ್ದಾರೆ. ಆದರೆ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ರಾಜ್ಯದಲ್ಲಿ ಅದಾನಿಯನ್ನು ಬೆಂಬಲಿಸುತ್ತಿದ್ದಾರೆ ಎಂದು ಜಗದೀಶ್ ರೆಡ್ಡಿ ಹೇಳಿದ್ದಾರೆ. ಇದೇ ವಿಷಯವನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ಒಳಗೆ ಬಿಡಲಾಯಿತು. ಆದರೆ ಬಿಆರ್‌ಎಸ್ ನಾಯಕರು ಅದಾನಿ ಟಿ-ಶರ್ಟ್ ಧರಿಸಿ ಕಾಣಿಸಿಕೊಂಡಾಗ ಸ್ಪೀಕರ್ ಅವರನ್ನು ವಿಧಾನಸಭೆಯೊಳಗೆ ಬಿಡಲಿಲ್ಲ ಎಂದು ಅವರು ನೆನಪಿಸಿಕೊಂಡಿದ್ದಾರೆ.

ರಾಜ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಮಧುಸೂದನ ಚಾರಿ ಮಾತನಾಡಿ, ಶಾಸಕರಿಗೆ ಅಧಿವೇಶನಕ್ಕೆ ಹಾಜರಾಗಲು ಅವಕಾಶ ನೀಡದಿರುವುದು ಅವರ ಹಕ್ಕುಗಳನ್ನು ಹತ್ತಿಕ್ಕುವ ಕೆಲಸವಲ್ಲದೆ ಮತ್ತೇನೂ ಅಲ್ಲ. ಪರಿಷತ್ ಸಭಾಪತಿ ಹಾಗೂ ವಿಧಾನಸಭಾಧ್ಯಕ್ಷರು ಯಾವುದೇ ಒತ್ತಡಕ್ಕೆ ಮಣಿಯದೆ ಮುಕ್ತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿರಿಯಾದಲ್ಲಿರುವ ಎಲ್ಲಾ ಭಾರತೀಯರು ಸುರಕ್ಷಿತ: ಅಧಿಕಾರಿಗಳ ಸ್ಪಷ್ಟನೆ

ಸಿರಿಯಾದಲ್ಲಿರುವ ಎಲ್ಲಾ ಭಾರತೀಯರು ಸುರಕ್ಷಿತ: ಅಧಿಕಾರಿಗಳ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...