ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ)ದ 26 ನೇ ಗವರ್ನರ್ ಆಗಿ ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಅವರನ್ನು ಸರ್ಕಾರ ಸೋಮವಾರ ನೇಮಕ ಮಾಡಿದೆ. ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯು ಮಲ್ಹೋತ್ರಾ ಅವರ ಹೆಸರನ್ನು ಅಂತಿಮಗೊಳಿಸಿದ್ದು, ಬುಧವಾರದಿಂದ ಮುಂದಿನ ಮೂರು ವರ್ಷಗಳ ಕಾಲ ಅವರು ಆರ್‌ಬಿಐ ಗವರ್ನರ್ ಆಗಿ ನೇಮಕಗೊಂಡಿದ್ದಾರೆ.
ಸಂಜಯ್ ಮಲ್ಹೋತ್ರಾ ಅವರು 1990 ರ ಬ್ಯಾಚ್ ರಾಜಸ್ಥಾನ ಕೇಡರ್ IAS ಅಧಿಕಾರಿಯಾಗಿದ್ದು, ಅವರು ಪ್ರಸ್ತುತ, ಹಣಕಾಸು ಸಚಿವಾಲಯದಲ್ಲಿ ಕಾರ್ಯದರ್ಶಿ (ಕಂದಾಯ) ಆಗಿದ್ದಾರೆ. ಹಾಲಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿಯು ಮಂಗಳವಾರ (ಡಿಸೆಂಬರ್ 10, 2024) ಕೊನೆಗೊಳ್ಳುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
26ನೇ ಆರ್‌ಬಿಐ ಗವರ್ನರ್ ಆಗಲಿರುವ ಮಲ್ಹೋತ್ರಾ ಅವರು ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಕಂಪ್ಯೂಟರ್ ಸೈನ್ಸ್‌ನಲ್ಲಿ ಎಂಜಿನಿಯರಿಂಗ್ ಪದವೀಧರರಾಗಿದ್ದು, ಅಮೆರಿಕದ ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ನೀತಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವರು ತಮ್ಮ 33 ವರ್ಷಗಳ ವೃತ್ತಿಜೀವನದಲ್ಲಿ, ವಿದ್ಯುತ್, ಹಣಕಾಸು ಮತ್ತು ತೆರಿಗೆ, ಮಾಹಿತಿ ತಂತ್ರಜ್ಞಾನ ಮತ್ತು ಗಣಿ ಸೇರಿದಂತೆ ಬಹುವಿಧದ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ.
ಈ ಹಿಂದೆ ಅವರು, ಅವರು ಹಣಕಾಸು ಸಚಿವಾಲಯದ ಅಡಿಯಲ್ಲಿ ಹಣಕಾಸು ಸೇವೆಗಳ ಇಲಾಖೆಯಲ್ಲಿ ಕಾರ್ಯದರ್ಶಿ ಹುದ್ದೆಯನ್ನು ಹೊಂದಿದ್ದರು. ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರದ ಮಟ್ಟದಲ್ಲಿ ಹಣಕಾಸು ಮತ್ತು ತೆರಿಗೆಯಲ್ಲಿ ವ್ಯಾಪಕ ಅನುಭವವನ್ನು ಹೊಂದಿದ್ದಾರೆ. ಅವರ ಪ್ರಸ್ತುತ ನಿಯೋಜನೆಯ ಭಾಗವಾಗಿ, ಅವರು ನೇರ ಮತ್ತು ಪರೋಕ್ಷ ತೆರಿಗೆಗಳಿಗೆ ಸಂಬಂಧಿಸಿದಂತೆ ತೆರಿಗೆ ನೀತಿಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ.
ಊರ್ಜಿತ್ ಪಟೇಲ್ ಅವರ ಹಠಾತ್ ನಿರ್ಗಮನದ ನಂತರ ಶಕ್ತಿಕಾಂತ್ ದಾಸ್ ಅವರನ್ನು ಡಿಸೆಂಬರ್ 12, 2018 ರಂದು ಆರ್‌ಬಿಐನ 25 ನೇ ಗವರ್ನರ್ ಆಗಿ ನೇಮಿಸಲಾಯಿತು. ಮೂರು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ ಅವರಿಗೆ ವಿಸ್ತರಣೆಯನ್ನು ನೀಡಲಾಯಿತು. ಅವರ ವಿಸ್ತೃತ ಅಧಿಕಾರಾವಧಿ ಮಂಗಳವಾರ ಕೊನೆಗೊಳ್ಳಲಿದೆ.
ಇದನ್ನೂ ಓದಿ: ಡಿಎಂಕೆ ವಿರುದ್ಧ ‘ರಾಜಪ್ರಭುತ್ವ’ ಹೇಳಿಕೆ; ಪಕ್ಷದ ಉಪ ಪ್ರಧಾನ ಕಾರ್ಯದರ್ಶಿಯನ್ನು ಅಮಾನತುಗೊಳಿಸಿದ ವಿಸಿಕೆ
ಡಿಎಂಕೆ ವಿರುದ್ಧ ‘ರಾಜಪ್ರಭುತ್ವ’ ಹೇಳಿಕೆ; ಪಕ್ಷದ ಉಪ ಪ್ರಧಾನ ಕಾರ್ಯದರ್ಶಿಯನ್ನು ಅಮಾನತುಗೊಳಿಸಿದ ವಿಸಿಕೆ


