Homeಕರ್ನಾಟಕಬಿಜೆಪಿ ಸರ್ಕಾರ ಕೋರ್ಟ್‌ಗೆ ಸಲ್ಲಿಸಿದ್ದ ಪಂಚಮಸಾಲಿ 2ಎ ಮೀಸಲಾತಿಯ ಅಫಿಡೆವಿಟ್ ಸದನದ ಮುಂದೆ ಮಂಡಿಸುವೆ -...

ಬಿಜೆಪಿ ಸರ್ಕಾರ ಕೋರ್ಟ್‌ಗೆ ಸಲ್ಲಿಸಿದ್ದ ಪಂಚಮಸಾಲಿ 2ಎ ಮೀಸಲಾತಿಯ ಅಫಿಡೆವಿಟ್ ಸದನದ ಮುಂದೆ ಮಂಡಿಸುವೆ – ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಹಿಂದಿನ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ ಪಂಚಮಸಾಲಿ 2ಎ ಮೀಸಲಾತಿಯ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ, ಪತ್ರಿಪಕ್ಷಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ. ಬಿಜೆಪಿ ಸರ್ಕಾರ

“ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಸಲಾಗಿದೆ. ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಟಗಾರರಿಗೆ ತಿಳಿಸಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಸರ್ಕಾರ

“ಬಸವರಾಜ ಬೊಮ್ಮಾಯಿ ಅವರ ಹಿಂದಿನ ಸರ್ಕಾರ ಪಂಚಮಸಾಲಿಗಳನ್ನು 2ಎ ಸೇರಿಸಿಲ್ಲ ಬದಲಾಗಿ, ಅಲ್ಪಸಂಖ್ಯಾತ ಮುಸ್ಲಿಂರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, 3ಎ ಹಾಗೂ 3ಬಿ ಗೆ ತಲಾ ಶೇ.2 ರಂತೆ ಮೀಸಲಾತಿ ಹಂಚಿಕೆ ಮಾಡಿತ್ತು. ಇದನ್ನು ಆಕ್ಷೇಪಿಸಿ ಮುಸ್ಲಿಮರು ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು” ಎಂದು ಸಿಎಂ ಹೇಳಿದ್ದಾರೆ.

“ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ಮುಸ್ಲಿಮರ ಮೀಸಲಾತಿ ರದ್ದು ಪಡಿಸುವುದಿಲ್ಲ. ಯತಾಸ್ಥಿತಿಯನ್ನು ಮುಂದುವರಿಸಿಕೊಂಡು ಹೋಗುವುದಾಗಿ ಅಫಿಡೆವಿಡ್ ಸಲ್ಲಿಸಿದೆ. ಇದರ ಆಧಾರದ ಮೇಲೆ ಸರ್ವೋಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾದ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನ ಮುಂದೆ ಮಂಡಿಸುವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಶಾಸಕ ಅರವಿಂದ ಬೆಲ್ಲದ್ ಮಂಗಳವಾರ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ನಡೆಯಲಿದೆ. ಆದ್ದರಿಂದ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಬುಧವಾರ ಸದನದ ಮುಂದೆ ಮಂಡಿಸುವಂತೆ ಮುಖ್ಯಮಂತ್ರಿಗಳಲ್ಲಿ ಸಭಾಧ್ಯಕ್ಷರ ಮೂಲಕ ಕೋರಿದ್ದಾರೆ.

ಇದನ್ನೂ ಓದಿ: ಜಾರ್ಜ್ ಸೊರೊಸ್ ಫೌಂಡೇಶನ್ ಹಣಕಾಸು ಸಂಸ್ಥೆಯೊಂದಿಗೆ ಸೋನಿಯಾ ಗಾಂಧಿ ಸಂಪರ್ಕ ಹೊಂದಿದ್ದಾರೆ: ಬಿಜೆಪಿ ಆರೋಪ

 

ಜಾರ್ಜ್ ಸೊರೊಸ್ ಫೌಂಡೇಶನ್ ಹಣಕಾಸು ಸಂಸ್ಥೆಯೊಂದಿಗೆ ಸೋನಿಯಾ ಗಾಂಧಿ ಸಂಪರ್ಕ ಹೊಂದಿದ್ದಾರೆ: ಬಿಜೆಪಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...