Homeಮುಖಪುಟಆಂಧ್ರ ಸಂಪುಟಕ್ಕೆ ಪವನ್ ಕಲ್ಯಾಣ್ ಸಹೋದರ ನಾಗಬಾಬು ಸೇರ್ಪಡೆ; ಸಿಎಂ ನಾಯ್ಡು ಘೋಷಣೆ

ಆಂಧ್ರ ಸಂಪುಟಕ್ಕೆ ಪವನ್ ಕಲ್ಯಾಣ್ ಸಹೋದರ ನಾಗಬಾಬು ಸೇರ್ಪಡೆ; ಸಿಎಂ ನಾಯ್ಡು ಘೋಷಣೆ

- Advertisement -
- Advertisement -

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಸಹೋದರ, ಚಿತ್ರ ನಿರ್ಮಾಪಕ-ನಟ ಕೆ.ನಾಗಬಾಬು ಅವರು ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸೋಮವಾರ ಪ್ರಕಟಿಸಿದ್ದಾರೆ.

ಪವನ್ ಕಲ್ಯಾಣ್ ಅವರ ಹಿರಿಯ ಸಹೋದರ ಮತ್ತು ಮೆಗಾಸ್ಟಾರ್ ಚಿರಂಜೀವಿ ಅವರ ಕಿರಿಯ ಸಹೋದರ ನಾಗಬಾಬು ಅವರು, ನಟ-ಚಲನಚಿತ್ರ ನಿರ್ಮಾಪಕರೂ ಆಗಿದ್ದಾರೆ. ಜನಸೇನೆಯ ಪ್ರಧಾನ ಕಾರ್ಯದರ್ಶಿಯಾಗಿ ಅವರು ಇತ್ತೀಚಿನ ಚುನಾವಣೆಯಲ್ಲಿ ಪಕ್ಷದ ಪರವಾಗಿ ಸಕ್ರಿಯವಾಗಿ ಪ್ರಚಾರ ಮಾಡಿದ್ದರು.

ರಾಜ್ಯಸಭೆಗೆ ಉಪಚುನಾವಣೆಗಾಗಿ ಟಿಡಿಪಿ ಇಬ್ಬರು ಅಭ್ಯರ್ಥಿಗಳನ್ನು ಹೆಸರಿಸಿದ್ದರಿಂದ ಮತ್ತು ತನ್ನ ಮೈತ್ರಿ ಪಾಲುದಾರ ಬಿಜೆಪಿಗೆ ಒಂದು ಸ್ಥಾನವನ್ನು ಬಿಟ್ಟುಕೊಟ್ಟಿದ್ದರಿಂದ, ರಾಜ್ಯ ಸಚಿವ ಸಂಪುಟದಲ್ಲಿ ಮತ್ತೊಂದು ಪಾಲುದಾರ ಜನಸೇನೆಗೆ ಅವಕಾಶ ಕಲ್ಪಿಸಲು ನಿರ್ಧರಿಸಿದೆ.

175 ಸದಸ್ಯರ ವಿಧಾನಸಭೆಯಲ್ಲಿ ಟಿಡಿಪಿ ನೇತೃತ್ವದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) 164 ಶಾಸಕರನ್ನು ಹೊಂದಿದೆ. ಟಿಡಿಪಿ 135 ಸದಸ್ಯರನ್ನು ಹೊಂದಿದ್ದರೆ, ಜನಸೇನೆ ಮತ್ತು ಬಿಜೆಪಿ ಕ್ರಮವಾಗಿ 21 ಮತ್ತು 8 ಸ್ಥಾನಗಳನ್ನು ಹೊಂದಿವೆ.

ನಾಗೇಂದ್ರ ಬಾಬು ಎಂದೂ ಕರೆಯಲ್ಪಡುವ ನಾಗಬಾಬು ಅವರು ಜನಸೇನೆಯಿಂದ ನಾಲ್ಕನೇ ಸಚಿವರಾಗಲಿದ್ದಾರೆ. ನಾಗಬಾಬು ಅವರು ವಿಧಾನಸಭೆಯ ಸದಸ್ಯರಲ್ಲದ ಕಾರಣ, ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳಲು ಸಮ್ಮಿಶ್ರವು ಅವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡುವ ಸಾಧ್ಯತೆಯಿದೆ.

ಪ್ರಸ್ತುತ, ಚಂದ್ರಬಾಬು ನಾಯ್ಡು ನೇತೃತ್ವದ ಸಂಪುಟದಲ್ಲಿ ಜನಸೇನೆಯಿಂದ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್, ನಾದೆಂಡ್ಲ ಮನೋಹರ್ ಮತ್ತು ಕಂದುಲ ದುರ್ಗೇಶ್ ಸಚಿವರಾಗಿದ್ದಾರೆ.

ರಾಜ್ಯ ಸಚಿವ ಸಂಪುಟವು ಗರಿಷ್ಠ 25 ಸದಸ್ಯರನ್ನು ಹೊಂದಬಹುದು. ಚಂದ್ರಬಾಬು ನಾಯ್ಡು ಮತ್ತು 23 ಸಚಿವರು ಜೂನ್ 12 ರಂದು ಪ್ರಮಾಣ ವಚನ ಸ್ವೀಕರಿಸಿದ್ದರು. ಟಿಡಿಪಿ ಜನಸೇನೆಯಿಂದ ಮೂವರು ಮತ್ತು ಬಿಜೆಪಿಯಿಂದ ಒಬ್ಬರನ್ನು ಸಚಿವರನ್ನಾಗಿ ಸೇರಿಸಿಕೊಂಡಿತ್ತು. ಜನಸೇನೆಯ ಒಂದು ಸ್ಥಾನ ಖಾಲಿ ಉಳಿದಿತ್ತು.

ಟಿಡಿಪಿ ಜನಸೇನೆಗೆ ಒಂದು ರಾಜ್ಯಸಭಾ ಸ್ಥಾನವನ್ನು ನೀಡಿತ್ತು ಎಂದು ವರದಿಯಾಗಿದೆ. ಆದರೆ, ನಾಗಬಾಬು ಅವರು ಸಚಿವರಾಗಲು ಉತ್ಸುಕರಾಗಿದ್ದರು. ರಾಜ್ಯಸಭಾ ಸ್ಥಾನವನ್ನು ಬಿಜೆಪಿಗೆ ಬಿಟ್ಟುಕೊಟ್ಟ ನಂತರ, ಚಂದ್ರಬಾಬು ನಾಯ್ಡು ಅವರು ನಾಗಬಾಬು ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಿದರು.

ನಾಗಬಾಬು ಅವರು 2014 ರಲ್ಲಿ ಜನಸೇನೆಯನ್ನು ಘೋಷಣೆ ಮಾಡಿದಾಗಿನಿಂದಲೂ ಪವನ್ ಕಲ್ಯಾಣ್ ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ.

ಇಬ್ಬರೂ ಮೊದಲು 2008 ರಲ್ಲಿ ತಮ್ಮ ಹಿರಿಯ ಸಹೋದರ ಚಿರಂಜೀವಿಯಿಂದ ಪ್ರಜಾರಾಜ್ಯಂ ಪಕ್ಷಕ್ಕೆ (ಪಿಆರ್‌ಪಿ) ಸಕ್ರಿಯವಾಗಿ ಕೆಲಸ ಮಾಡಿದ್ದರು. ಆದರೆ, 2009 ರ ಚುನಾವಣೆಯಲ್ಲಿ ಪಕ್ಷವು ಬೆಳೆಗೆ ಬಂದಿತು. ಎರಡು ವರ್ಷಗಳ ನಂತರ ಚಿರಂಜೀವಿ ಅದನ್ನು ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನಗೊಳಿಸಿ, ಯುಪಿಎ ಸರ್ಕಾರದಲ್ಲಿ ಸಚಿವರಾಗಿದ್ದರು.

ಇದನ್ನೂ ಓದಿ; ಲೋಕಸಭೆ | ನಾಯ್ಡು, ಪವಾರ್‌ರನ್ನು ಸ್ವಚ್ಛಗೊಳಿಸಿದ ‘ವಾಶಿಂಗ್ ಮೆಷಿನ್’ ಕುರಿತು ಚರ್ಚೆಗೆ ನಿಲುವಳಿ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...