Homeಮುಖಪುಟಸಿರಿಯಾ | ಮಧ್ಯಂತರ ಸರ್ಕಾರ ರಚನೆಗೆ ಕಸರತ್ತು : ಮಾಸ್ಕೋದಲ್ಲಿ ಆಶ್ರಯ ಪಡೆದ ಪದಚ್ಯುತ ಅಧ್ಯಕ್ಷ...

ಸಿರಿಯಾ | ಮಧ್ಯಂತರ ಸರ್ಕಾರ ರಚನೆಗೆ ಕಸರತ್ತು : ಮಾಸ್ಕೋದಲ್ಲಿ ಆಶ್ರಯ ಪಡೆದ ಪದಚ್ಯುತ ಅಧ್ಯಕ್ಷ ಅಸದ್

- Advertisement -
- Advertisement -

ಕಳೆದ ಭಾನುವಾರ (ಡಿ.8, 2024) ಅಧ್ಯಕ್ಷ ಬಶರ್ ಅಲ್ ಅಸಾದ್ ಪಲಾಯನಗೈದು ದೇಶ ಬಂಡುಕೋರರ (ಹೋರಾಟಗಾರರ) ವಶವಾದ ಬಳಿಕ, ಸಿರಿಯಾ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಮಧ್ಯಂತರ ಸರ್ಕಾರ ರಚನೆ ಕಸರತ್ತು ಗರಿಗೆದರಿದೆ.

ಕೆಲ ತಿಂಗಳ ಹಿಂದೆ ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆ ಉಂಟಾಗಿ ಪ್ರಧಾನಿ ಶೇಖ್ ಹಸೀನಾ ದೇಶ ಬಿಟ್ಟು ಪಲಾಯನ ಮಾಡಿದ ಬಳಿಕ ನೋಬೆಲ್ ಪುರಸ್ಕತ ಮುಹಮ್ಮದ್ ಯೂನುಸ್ ಅವರ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಿದೆ. ಅದೇ ರೀತಿಯ ಬೆಳವಣಿಗೆ ಸಿರಿಯಾದಲ್ಲಿ ನಡೆಯುವ ಸಾಧ್ಯತೆ ಇದೆ.

ಪ್ರಸ್ತುತ ಸಿರಿಯಾ ಹಯಾತ್ ತಹ್ರೀರ್ ಅಲ್-ಶಾಮ್ ಎಂಬ ಗುಂಪಿನ ವಶದಲ್ಲಿದೆ. ಭಯೋತ್ಪಾದಕ ಗುಂಪು ಅಲ್-ಖೈದಾ ಮತ್ತು ಮಿತ್ರ ಬಣಗಳ ಬೆಂಬಲಿತ ಈ ಗುಂಪನ್ನು ‘ಅಲ್-ನುಸ್ರಾ ಫ್ರಂಟ್’ ಎಂದೂ ಕರೆಯಲಾಗುತ್ತದೆ. ಬಂಡುಕೋರರ ಈ ಗುಂಪಿಗೆ ಸಿರಿಯಾದ ಪ್ರತಿಪಕ್ಷಗಳ ಬೆಂಬಲವೂ ಇದೆ ಎನ್ನಲಾಗಿದೆ.

ಬಂಡುಕೋರರ ಗುಂಪಿನ ಕಮಾಂಡರ್ ಅಬು ಮೊಹಮ್ಮದ್ ಅಲ್-ಜುಲಾನಿ ಅವರು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಮತ್ತು ಉಪಾಧ್ಯಕ್ಷ ಫೈಸಲ್ ಮೆಕ್ದಾದ್ ಅವರನ್ನು ಸೋಮವಾರ ಭೇಟಿಯಾಗಿ ಮಧ್ಯಂತರ ಸರ್ಕಾರ ರಚನೆ ಕುರಿತು ಚರ್ಚೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಬಂಡುಕೋರರ ನಿಯಂತ್ರಣದಲ್ಲಿದ್ದ ಸಣ್ಣ ಪ್ರದೇಶವೊಂದರ ಆಡಳಿತ ನಡೆಸುತ್ತಿದ್ದ ಮೊಹಮ್ಮದ್ ಅಲ್ ಬಶೀರ್ ಅವರು ಮಧ್ಯಂತರ ಸರ್ಕಾರದ ನೇತೃತ್ವ ವಹಿಸುವ ಸಾಧ್ಯತೆ ಇದೆ.

ಸಹಜ ಸ್ಥಿತಿಯತ್ತ ಸಿರಿಯಾ :

ಅಧ್ಯಕ್ಷ ಬಶರ್ ಅಲ್ ಅಸಾದ್ ಪಲಾಯನಗೈದ ಬಳಿಕ ದೇಶ ಸಹಜ ಸ್ಥಿತಿಯತ್ತ ಮರಳುತ್ತಿದೆ. ಜನರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಸರ್ಕಾರದ ಕಚೇರಿಗಳು ಕಾರ್ಯನಿರ್ವಹಿಸುತ್ತಿದೆ. ಶೀಘ್ರದಲ್ಲೇ ಮಧ್ಯಂತರ ಸರ್ಕಾರ ರಚನೆ ಬಗ್ಗೆ ನಿರ್ಧರಿಸಲಾಗುವುದು ಎಂದು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಹೇಳಿದ್ದಾರೆ.

ಹೋರಾಟಗಾರರ ಗುಂಪಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ನನ್ನ ಸರ್ಕಾರ ಇನ್ನುಮುಂದೆ ಹೋರಾಟಗಾರರ ಸರ್ಕಾರವಾಗಿ ಬದಲಾಗಲಿದೆ ಎಂದು ಜಲಾಲಿ ತಿಳಿಸಿದ್ದಾರೆ.

ಸಿರಿಯಾ ಕರೆನ್ಸಿ ಮುಂದುವರಿಕೆ

ಸಿರಿಯಾದ ಬ್ಯಾಂಕ್‌ಗಳು ಮಂಗಳವಾರದಿಂದ ಪುನಃ ಕಾರ್ಯಾರಂಭ ಮಾಡಲಿವೆ. ಕಚೇರಿಗೆ ಹಿಂದಿರುಗುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ. ಸಿರಿಯಾ ಕರೆನ್ಸಿ ಮುಂದುವರಿಯಲಿದೆ ಎಂದು ಸಿರಿಯಾ ಸೆಂಟ್ರಲ್ ಬ್ಯಾಂಕ್‌ನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.

ಇರಾಕ್ ಪ್ರವೇಶಿಸಿದ 4 ಸಾವಿರ ಸೈನಿಕರು

ಬಂಡುಕೋರರು ಅಥವಾ ಹೋರಾಟಗಾರರು ರಾಜಧಾನಿ ಡಮಾಸ್ಕಸ್ ಅನ್ನು ವಶಪಡಿಸಿಕೊಂಡ ಬಳಿಕ ಸಿರಿಯಾದ 4 ಸಾವಿರಕ್ಕೂ ಅಧಿಕ ಸೈನಿಕರು ಗಡಿದಾಟಿ ಇರಾಕ್ ಪ್ರವೇಶಿಸಿದ್ದಾರೆ ಎಂದು ಇರಾಕ್ ಸೇನಾ ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಶಸ್ತ್ರಾಸ್ತ್ರಗಳು, ಮದ್ದು ಗುಂಡುಗಳು ಮತ್ತು ಶಸ್ತ್ರ ಸಜ್ಜಿತ ವಾಹನಗಳೊಂದಿಗೆ ಸಿರಿಯಾದ ಸೈನಿಕರು ಇರಾಕ್ ಪ್ರವೇಶಿಸಿದ್ದಾರೆ. ಅವರನ್ನು ಶಿಬಿರಗಳಲ್ಲಿ ಇರಿಸಲಾಗುವುದು ಎಂದು ಇರಾಕ್‌ನ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿಗಳು ಮಾಹಿತಿ ನೀಡಿವೆ.

ಮಾಸ್ಕೋದಲ್ಲಿ ಆಶ್ರಯ ಪಡೆದ ಅಸದ್, ಕುಟುಂಬ

ದೇಶ ಬಂಡುಕೋರರ ವಶವಾದ ಬಳಿಕ ಪಲಾಯನ ಮಾಡಿರುವ ಪದಚ್ಯುತ ಅಧ್ಯಕ್ಷ ಬಶರ್ ಅಲ್ ಅಸಾದ್ ಮತ್ತು ಕುಟುಂಬ (ಪತ್ನಿ, ಮೂವರು ಮಕ್ಕಳು) ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಆಶ್ರಯ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಮಾನವೀಯ ನೆಲೆಯಲ್ಲಿ ಅಸದ್ ಮತ್ತು ಕುಟುಂಬಕ್ಕೆ ಆಶ್ರಯ ನೀಡಿದ್ದೇವೆ ಎಂದು ರಷ್ಯಾ ಅಧ್ಯಕ್ಷರ ಕಚೇರಿಯನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ದಾಳಿ ಶುರು ಮಾಡಿದ ಅಮೆರಿಕ, ಇಸ್ರೇಲ್

ಸಿರಿಯಾ ಅಧ್ಯಕ್ಷ ಸ್ಥಾನದಿಂದ ಬಶರ್ ಅಲ್ ಅಸಾದ್ ಕೆಳಗಿಳಿಯುತ್ತಿದ್ದಂತೆ ಅಮೆರಿಕ ಮತ್ತು ಇಸ್ರೇಲ್ ತಮ್ಮ ಬೇಳೆ ಬೇಯಿಸಿಕೊಳ್ಳಲು ಶುರುಮಾಡಿದೆ. ಸಿರಿಯಾದ ಪರಿಸ್ಥಿತಿಯ ಲಾಭ ಪಡೆದುಕೊಂಡು ಮರು ಸಂಘಟನೆಗೊಳ್ಳಲು  ಐಸಿಸ್‌ಗೆ ಅವಕಾಶ ನೀಡುವುದಿಲ್ಲ ಎಂದಿರುವ ಅಮೆರಿಕ ಸೋಮವಾರ (ಡಿ.9) ವೈಮಾನಿಕ ದಾಳಿ ನಡೆಸಿದೆ.

ಅಮೆರಿಕದ ಸೆಂಟ್ರಲ್ ಕಮಾಂಡ್ ಪಡೆಗಳು ಬಿ-52, ಎಫ್‌-15 ಹಾಗೂ ಎ-10 ಬಾಂಬರ್ ವಿಮಾನಗಳನ್ನು ಬಳಸಿ ಐಸಿಸ್‌ನ 75 ನೆಲೆಗಳ ಮೇಲೆ ದಾಳಿ ನಡೆಸಿದೆ.

ಮತ್ತೊಂದೆಡೆ ಇಸ್ರೇಲ್ ಕೂಡ ರಾಜಧಾನಿ ಡಮಾಸ್ಕಸ್ ಸೇರಿದಂತೆ ಸಿರಿಯಾದಾದ್ಯಂತ ವೈಮಾನಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಸುಮಾರು 100 ಕ್ಷಿಪಣಿಗಳನ್ನು ಇಸ್ರೇಲ್ ಹಾರಿಸಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : ಲೋಕಸಭೆ | ನಾಯ್ಡು, ಪವಾರ್‌ರನ್ನು ಸ್ವಚ್ಛಗೊಳಿಸಿದ ‘ವಾಶಿಂಗ್ ಮೆಷಿನ್’ ಕುರಿತು ಚರ್ಚೆಗೆ ನಿಲುವಳಿ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...