Homeಮುಖಪುಟಮುಂಬೈ | ಸರ್ಕಾರಿ ಸಾರಿಗೆ ಬಸ್ ಅಪಘಾತ: ಸಾವಿನ ಸಂಖ್ಯೆ 7ಕ್ಕೆ ಏರಿಕೆ; 42 ಮಂದಿಗೆ...

ಮುಂಬೈ | ಸರ್ಕಾರಿ ಸಾರಿಗೆ ಬಸ್ ಅಪಘಾತ: ಸಾವಿನ ಸಂಖ್ಯೆ 7ಕ್ಕೆ ಏರಿಕೆ; 42 ಮಂದಿಗೆ ಗಾಯ

- Advertisement -
- Advertisement -

ಮುಂಬೈನಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಸರ್ಕಾರಿ ಸಾರಿಗೆ ಬಸ್ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೆ ಏರಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣವೇನು ಎಂದು ಖಚಿತಪಡಿಸಿಕೊಳ್ಳಲು ವಾಹನದಲ್ಲಿ ಯಾವುದೇ ಯಾಂತ್ರಿಕ ದೋಷವಿದೆಯೇ ಎಂದು ಪರಿಶೀಲಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ರಾತ್ರಿ 9.30ರ ಸುಮಾರಿಗೆ ಕುರ್ಲಾ (ಪಶ್ಚಿಮ)ದ ಎಸ್‌ಜಿ ಬಾರ್ವೆ ಮಾರ್ಗದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗಳು ಮತ್ತು ಕೆಲವು ವಾಹನಗಳ ಮೇಲೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ 42 ಮಂದಿ ಗಾಯಗೊಂದಿದ್ದು, ಅದರನ್ನು ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರತಿಕ್ರಿಯಿಸಿದ್ದು, ಪ್ರಾಣಹಾನಿಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಗಾಯಗೊಂಡ ವ್ಯಕ್ತಿಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಅವರು ಪ್ರಾರ್ಥಿಸಿದ್ದಾರೆ. ಫಡ್ನವಿಸ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ಘೋಷಿಸಿದ್ದಾರೆ.

ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಬೃಹನ್ ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ (ಬೆಸ್ಟ್) ಸಂಸ್ಥೆಯು ಭರಿಸಲಿದೆ ಎಂದು ಅವರು ಹೇಳಿದ್ದಾರೆ.

“ಈ ದುರದೃಷ್ಟಕರ ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳೊಂದಿಗೆ ನಾವು ನಿಂತಿದ್ದೇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಸಿಎಂ ಹೇಳಿದ್ದಾರೆ. ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ತ್ವರಿತ ನೆರವು ಸಿಗುವಂತೆ ಮಾಡಲು ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಬೆಸ್ಟ್ ಬಸ್, ಪಾದಚಾರಿಗಳು ಮತ್ತು ವಾಹನಗಳ ಮೂಲಕ ಡಿಕ್ಕಿ ಹೊಡೆದ ನಂತರ, ಸೋಮವಾರ ಮೂರು ಸಾವುಗಳು ವರದಿಯಾಗಿತ್ತು. ಘಟನೆಯಲ್ಲಿ ಸಾವಿನ ಸಂಖ್ಯೆ ಏಳಕ್ಕೆ ಏರಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಅಪಘಾತದ ನಂತರ ಒಟ್ಟು 49 ಜನರನ್ನು ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಅವರಲ್ಲಿ 35 ಮಂದಿಯನ್ನು ಕುರ್ಲಾದಲ್ಲಿರುವ ಭಾಭಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಅದಾಗ್ಯೂ, ಇಬ್ಬರು ಆಸ್ಪತ್ರೆಗೆ ದಾಖಲಾದ ನಂತರ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ನಂತರ, ಆರು ಗಾಯಾಳುಗಳನ್ನು ಭಾಭಾ ಆಸ್ಪತ್ರೆಯಿಂದ ಸಿಯಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಈ ವೇಳೆ ಮತ್ತೆ ಒಬ್ಬರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.

ಒಟ್ಟು 49 ಗಾಯಾಳುಗಳ ಪೈಕಿ ಮೂವರನ್ನು ಸಮೀಪದ ಖಾಸಗಿ ಕೊಹಿನೂರ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ. ಇತರ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಗಾಯಗೊಂಡ ಇತರ ಆರು ಜನರನ್ನು ಖಾಸಗಿ ಹಬೀಬ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅವರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು ಮತ್ತು ಇತರರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತದಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ. ಅವರನ್ನು ಸೆವೆನ್ ಹಿಲ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ. ಅಲ್ಲದೆ, 35 ವರ್ಷದ ವ್ಯಕ್ತಿಯನ್ನು ಕುರ್ಲಾದ ಖಾಸಗಿ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನೆಯ ನಂತರ ಪೊಲೀಸರು ಬಸ್ ಚಾಲಕ ಸಂಜಯ್ ಮೋರೆಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದು, ಅವರ ವಿರುದ್ಧ ಕೊಲೆಗೆ ಸಮಾನವಲ್ಲದ ಅಪರಾಧದ ನರಹತ್ಯೆಯ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಅವರು ಮದ್ಯದ ಅಮಲಿನಲ್ಲಿದ್ದರೇ ಎಂಬುದನ್ನು ಪರೀಕ್ಷಿಸಲು ಅವರ ರಕ್ತದ ಮಾದರಿಗಳನ್ನು ಸಹ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದ ಐದು ಗಂಟೆಗಳ ನಂತರ ಘಟನೆ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಬೆಸ್ಟ್ ಸಂಸ್ಥೆ “ಪ್ರಾಥಮಿಕ ಮಾಹಿತಿಯ ಪ್ರಕಾರ, ಚಾಲಕ ಬಸ್ ನಿಯಂತ್ರಣ ಕಳೆದುಕೊಂಡರು” ಎಂದು ಹೇಳಿದೆ. ಘಟನೆಯಲ್ಲಿ ಹಲವಾರು ವಾಹನಗಳಿಗೂ ಡಿಕ್ಕಿಯಾಗಿದ್ದು, ಚಾಲಕನು ಬಸ್‌ ನಿಯಂತ್ರಣವನ್ನು ಕಳೆದುಕೊಂಡ ನಂತರ ಬಸ್ “ವೇಗವನ್ನು ಹೆಚ್ಚಿಸಿತು” ಎಂದು ಸಾರಿಗೆ ಸಂಸ್ಥೆ ಹೇಳಿದೆ.

ಬಸ್‌ನ ಮುಂಭಾಗದ ಭಾಗ ಮತ್ತು ವಿಂಡ್‌ಸ್ಕ್ರೀನ್‌ಗೆ ವ್ಯಾಪಕ ಹಾನಿಯಾಗಿದೆ ಮತ್ತು ಅಪಘಾತದಲ್ಲಿ ಕೆಲವು ಕಿಟಕಿ ಗಾಜುಗಳು ಸಹ ಒಡೆದು ಹೋಗಿವೆ ಎಂದು ಬೆಸ್ಟ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಂಗಳವಾರ ಮಧ್ಯರಾತ್ರಿ 12.30ರ ಸುಮಾರಿಗೆ ಕ್ರೇನ್ ಹಾಗೂ ಅರ್ತ್ ಮೂವರ್ ಯಂತ್ರದ ಸಹಾಯದಿಂದ ಬಸ್ ಅನ್ನು ಸ್ಥಳದಿಂದ ಹೊರತೆಗೆದು 1.15ರ ವೇಳೆಗೆ ಕುರ್ಲಾ ಡಿಪೋಗೆ ತರಲಾಗಿದೆ.

ಇದನ್ನೂ ಓದಿ: ಮಸೀದಿಗಳ ವಿರುದ್ಧ ನಡೆಸಲಾಗುತ್ತಿರುವ ದಾಳಿಯಲ್ಲಿ ಮಧ್ಯಪ್ರವೇಶ ಮಾಡಬೇಕಾಗಿದ್ದು ಸುಪ್ರೀಂಕೋಟ್ ಜವಾಬ್ದಾರಿ – ಸಿಪಿಐ(ಎಂ)

ಮಸೀದಿಗಳ ವಿರುದ್ಧ ನಡೆಸಲಾಗುತ್ತಿರುವ ದಾಳಿಯಲ್ಲಿ ಮಧ್ಯಪ್ರವೇಶ ಮಾಡಬೇಕಾಗಿದ್ದು ಸುಪ್ರೀಂಕೋಟ್ ಜವಾಬ್ದಾರಿ – ಸಿಪಿಐ(ಎಂ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...