Homeಮುಖಪುಟಹೈಟಿ | ಗ್ಯಾಂಗ್‌ಸ್ಟರ್ ಮಗುವಿನ ಮೇಲೆ ವಾಮಾಚಾರ ಆರೋಪ : ಸುಮಾರು 200 ಜನರ ಹತ್ಯೆ!

ಹೈಟಿ | ಗ್ಯಾಂಗ್‌ಸ್ಟರ್ ಮಗುವಿನ ಮೇಲೆ ವಾಮಾಚಾರ ಆರೋಪ : ಸುಮಾರು 200 ಜನರ ಹತ್ಯೆ!

- Advertisement -
- Advertisement -

ಹೈಟಿ ದೇಶದ ಸಿಟಿ ಸೋಲೈಲ್ ಪ್ರದೇಶದ ಗ್ಯಾಂಗ್‌ಸ್ಟರ್ ಒಬ್ಬ ತನ್ನ ಮಗು ಅಸ್ವಸ್ಥನಾಗಲು ಕೊಳಗೇರಿ ಪ್ರದೇಶದ ಜನರು ವಾಮಾಚಾರ ಮಾಡಿದ್ದಾರೆ ಎಂದು ಆರೋಪಿಸಿ ನಡೆಸಿದ ಹತ್ಯಾಕಾಂಡದಲ್ಲಿ ಸುಮಾರು 200 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ವಾರ್ಫ್ ಜೆರೆಮಿ ಗ್ಯಾಂಗ್‌ನ ನಾಯಕ ಮೊನೆಲ್‌ ಮಿಕಾನೊ ಫೆಲಿಕ್ಸ್‌ ತನ್ನ ಮಗು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಂತೆ ಕೊಳಗೇರಿ ಪ್ರದೇಶದ ಜನ ವಾಮಾಚಾರದ ಮೂಲಕ ಮಗುವಿಗೆ ಹಾನಿ ಮಾಡಲು ಯತ್ನಿಸಿದ್ದಾರೆ ಎಂದು ಹತ್ಯಾಕಾಂಡಕ್ಕೆ ಆದೇಶಿಸಿದ್ದಾನೆ. ಆ ಬಳಿಕ ಆತನ ತಂಡ ಸುಮಾರು 110 ಜನರನ್ನು ಹತ್ಯೆ ಮಾಡಿದೆ ಎಂದು ನಾಗರಿಕ ಸಂಘಟನೆ ಶಾಂತಿ ಮತ್ತು ಅಭಿವೃದ್ಧಿ ಸಮಿತಿ (ಸಿಪಿಡಿ) ತಿಳಿಸಿದೆ.

ಕಳೆದ ಶುಕ್ರವಾರ ಮತ್ತು ಶನಿವಾರ ಗ್ಯಾಂಗ್‌ಸ್ಟರ್ ಗುಂಪು ನಡೆಸಿದ ಹತ್ಯಾಕಾಂಡದಲ್ಲಿ ಬಲಿಯಾದ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು. ಇತರರನ್ನು ರಕ್ಷಿಸಲು ಪ್ರಯತ್ನಿಸಿದ ಕೆಲವು ಯುವಕರು ಕೂಡ ಸಂಘರ್ಷದಲ್ಲಿ ಗಾಯಗೊಂಡಿದ್ದಾರೆ ಎಂದು ಸಿಪಿಡಿ ಹೇಳಿದೆ.

ಗ್ಯಾಂಗ್‌ಸ್ಟರ್ ಗುಂಪು 184 ಜನರನ್ನು ಹತ್ಯೆ ಮಾಡಿದೆ ಎಂದು ಯುಎನ್ ಹಕ್ಕುಗಳ ಆಯುಕ್ತ ವೋಲ್ಕರ್ ಟರ್ಕ್ ಹೇಳಿದ್ದಾರೆ. ಈ ಘಟನೆ ಈ ವರ್ಷದಲ್ಲಿ ಹತ್ಯೆಯಾದವರ ಸಂಖ್ಯೆಯನ್ನು 5 ಸಾವಿರಕ್ಕೆ ಏರಿಸಿದೆ ಎಂದು ತಿಳಿಸಿದ್ದಾರೆ.

ಗ್ಯಾಂಗ್‌ಸ್ಟರ್ ಗುಂಪು ನೂರಕ್ಕೂ ಹೆಚ್ಚು ಜನರನ್ನು ಕಗ್ಗೊಲೆ ಮಾಡಿದೆ. ಅವರ ದೇಹಗಳನ್ನು ವಿರೂಪಗೊಳಿಸಿ ಬೀದಿಯಲ್ಲಿ ಸುಟ್ಟು ಹಾಕಿದೆ ಎಂದು ವಿಶ್ವಾಸಾರ್ಹ ಮೂಲಗಳನ್ನು ಉಲ್ಲೇಖಿಸಿ ದಿ ಗಾರ್ಡಿಯನ್ ವರದಿ ಮಾಡಿದೆ.

ಹೈಟಿಯು ದಶಕಗಳ ಅಸ್ಥಿರತೆಯಿಂದ ಬಳಲುತ್ತಿದೆ. ಕಳೆದ ಫೆಬ್ರವರಿಯಲ್ಲಿ ಸಶಸ್ತ್ರ ಗುಂಪುಗಳು ಪ್ರಧಾನಿ ಏರಿಯಲ್ ಹೆನ್ರಿಯನ್ನು ಪದಚ್ಯುತಗೊಳಿಸಲು ರಾಜಧಾನಿ ಪೋರ್ಟ್-ಔ-ಪ್ರಿನ್ಸ್‌ನಲ್ಲಿ ಸಂಘಟಿತ ದಾಳಿಗಳನ್ನು ಪ್ರಾರಂಭಿಸಿದಾಗ ಪರಿಸ್ಥಿತಿಯು ಉಲ್ಬಣಗೊಂಡಿತ್ತು.

ಪೋರ್ಟ್-ಔ-ಪ್ರಿನ್ಸ್‌ನಲ್ಲಿ ಯುಎಸ್‌ ಮತ್ತು ಯುಎನ್‌ ಬೆಂಬಲಿತ ಕೀನ್ಯಾ ನೇತೃತ್ವದ ಪೊಲೀಸ್ ಪಡೆ ಕಾರ್ಯಾಚರಣೆ ನಡೆಸುತ್ತಿದ್ದರೂ, ಸಶಸ್ತ್ರ ಗುಂಪು ನಗರದ ಶೇ.80ರಷ್ಟು ನಿಯಂತ್ರಣ ಹೊಂದಿದೆ. ಇದರಿಂದ ಸಂಘರ್ಷ, ಹಿಂಸಾಚಾರ ನಡೆಯುತ್ತಲೇ ಇರುತ್ತದೆ.

ವಿಶ್ವಸಂಸ್ಥೆಯ ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್‌ ಅಕ್ಟೋಬರ್‌ನಲ್ಲಿ ನೀಡಿದ ಅಂಕಿ ಅಂಶಗಳ ಪ್ರಕಾರ, ಹೈಟಿಯಲ್ಲಿ 700,000 ಕ್ಕಿಂತ ಹೆಚ್ಚು ಜನರು ಆಂತರಿಕವಾಗಿ ಸ್ಥಳಾಂತರಗೊಂಡಿದ್ದಾರೆ. ಅವರಲ್ಲಿ ಅರ್ಧದಷ್ಟು ಮಕ್ಕಳು ಇದ್ದಾರೆ.

ಇದನ್ನೂ ಓದಿ : ಸಿರಿಯಾ | ಮಧ್ಯಂತರ ಸರ್ಕಾರ ರಚನೆಗೆ ಕಸರತ್ತು : ಮಾಸ್ಕೋದಲ್ಲಿ ಆಶ್ರಯ ಪಡೆದ ಪದಚ್ಯುತ ಅಧ್ಯಕ್ಷ ಅಸದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...