ಮಂಗಳವಾರ ಸಂಸತ್ತಿನ ಆವರಣದಲ್ಲಿ ಅದಾನಿ ಮತ್ತು ಮೋದಿ ಅವರ ವಿರುದ್ಧ ಹಲವಾರು ವಿರೋಧ ಪಕ್ಷದ ಸಂಸದರು ಕಪ್ಪು ‘ಜೋಲಾ’ಗಳನ್ನು (ಬ್ಯಾಗ್) ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಅವರ ವ್ಯಂಗ್ಯಚಿತ್ರಗಳನ್ನು ಮತ್ತು ಅದರ ಮುಂಭಾಗದಲ್ಲಿ ‘ಮೋದಿ ಅದಾನಿ ಭಾಯಿ ಭಾಯಿ’ ಎಂದು ಬರೆದಿರುವ ಬ್ಯಾಗ್‌ಗಳನ್ನು ಸಂಸದರು ಪ್ರದರ್ಶಿಸಿದ್ದಾರೆ. ಅದಾನಿ ಭ್ರಷ್ಟಾಚಾರ
ಚಳಿಗಾಲದ ಅಧಿವೇಶನ ಪ್ರಾರಂಭವಾದ ನಂತರ ವಿಪಕ್ಷಗಳು ಅಧಿವೇಶನಕ್ಕೆ ಮುಂಚಿತವಾಗಿ ಬೆಳಿಗ್ಗೆ ಸರಣಿ ಪ್ರತಿಭಟನೆಗಳನ್ನು ನಡೆಸುತ್ತಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್, ಡಿಎಂಕೆ, ಜೆಎಂಎಂ, ಎಡಪಕ್ಷಗಳ ಸಂಸದರು ಮಕರ ದ್ವಾರದ ಮೆಟ್ಟಿಲುಗಳ ಮುಂದೆ ಮಂಗಳವಾರ ಕೂಡಾ ಪ್ರತಿಭಟನೆ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಒಂದು ಬದಿಯಲ್ಲಿ ಮೋದಿ ಮತ್ತು ಅದಾನಿ ಅವರ ವ್ಯಂಗ್ಯ ಚಿತ್ರಗಳು ಮತ್ತು ಬ್ಯಾಗ್‌ನ ಹಿಂಭಾಗದಲ್ಲಿ ‘ಮೋದಿ ಅದಾನಿ ಭಾಯಿ ಭಾಯ್’ ಎಂದು ಬರೆದ ಕಪ್ಪು ‘ಬ್ಯಾಗ್’ಗಳನ್ನು ಅವರು ಪ್ರದರ್ಶಿಸಿದ್ದಾರೆ . ಇದೇ ವೇಳೆ ಅವರು ಮೋದಿ ಮತ್ತು ಅದಾನಿ ನಡುವಿನ ಆರೋಪದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ ಮತ್ತು ಈ ವಿಷಯದ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಿದ್ದಾರೆ. ಅದಾನಿ ಭ್ರಷ್ಟಾಚಾರ
ಇದಕ್ಕೂ ಮುನ್ನ, ವಿವಿಧ ವಿಷಯಗಳ ಬಗ್ಗೆ ಪಕ್ಷದ ನಿಲುವು ಮತ್ತು ಸಂಸತ್ತಿನಲ್ಲಿ ಮುಂದಿನ ಹಾದಿಯನ್ನು ಪರಿಶೀಲಿಸಲು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದರ ಸಭೆಯನ್ನು ರಾಹುಲ್ ಗಾಂಧಿ ಅಧ್ಯಕ್ಷತೆ ವಹಿಸಿದ್ದರು.
ಅದಾನಿ ವಿವಾದಕ್ಕೆ ಸಂಬಂಧಿಸಿದಂತೆ ಕೆಲವು ಇಂಡಿಯಾ ಒಕ್ಕೂಟದ ಪಕ್ಷಗಳ ನಾಯಕರು ಸಂಸತ್ತಿನ ಕಟ್ಟಡದಲ್ಲಿ ಪ್ರತಿಭಟನೆ ನಡೆಸಿದ ಒಂದು ದಿನದ ನಂತರ ಈ ಪ್ರತಿಭಟನೆ ನಡೆದಿದೆ. ಸೋಮವಾರ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಮತ್ತು ಗೌತಮ್ ಅದಾನಿ ಅವರ ಮುಖವಾಡಗಳನ್ನು ಧರಿಸಿರುವ ಕಾಂಗ್ರೆಸ್ ಸದಸ್ಯರೊಂದಿಗೆ ಅಣಕು ‘ಸಂದರ್ಶನ’ ನಡೆಸಿದ್ದರು.
ಸಂಸತ್ತಿನ ಆವರಣದಲ್ಲಿರುವ ಮಕರ ದ್ವಾರದ ಮೆಟ್ಟಿಲುಗಳ ಮುಂದೆ ನಿಂತು, ಲೋಕಸಭೆಯ ವಿರೋಧ ಪಕ್ಷದ ನಾಯಕ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಸೋಮವಾರ “ಮೋದಿ, ಅದಾನಿ ಏಕ್ ಹೈ” ಮತ್ತು “ನಮಗೆ ನ್ಯಾಯ ಬೇಕು” ಎಂಬ ಘೋಷಣೆಗಳನ್ನು ಕೂಗಿದ್ದರು.
ಚಳಿಗಾಲದ ಅಧಿವೇಶನ ಆರಂಭವಾದಾಗಿನಿಂದಲೂ ಅದಾನಿ ವಿಚಾರವಾಗಿ ಪ್ರತಿಪಕ್ಷಗಳ ಪ್ರತಿಭಟನೆಗಳು ಸಂಸತ್ತಿನ ಆವರಣದಲ್ಲಿ ನಡೆಯುತ್ತಿವೆ. ಅಮೆರಿಕದ ನ್ಯಾಯಾಲಯದಲ್ಲಿ ಅದಾನಿ ಮತ್ತು ಅವರ ಕಂಪೆನಿಯ ಇತರ ಅಧಿಕಾರಿಗಳ ವಿರುದ್ಧ ದೋಷಾರೋಪಣೆ ಸಲ್ಲಿಕೆಯಾದ ನಂತರ ಕಾಂಗ್ರೆಸ್ ಮತ್ತು ಇತರ ಕೆಲವು ವಿರೋಧ ಪಕ್ಷಗಳು ಈ ವಿಚಾರವನ್ನು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಒತ್ತಾಯಿಸುತ್ತಿವೆ.
ಇದನ್ನೂ ಓದಿ: ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ
ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ


