Homeದಲಿತ್ ಫೈಲ್ಸ್ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; 'ಎನ್‌ಎಚ್‌ಆರ್‌ಸಿ'ಗೆ ದೂರು

ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು

- Advertisement -
- Advertisement -

ದಲಿತ ಯುವಕ ಪುಲಿ ಸಾಗರ್ ವಿರುದ್ಧ ಆಂಧ್ರಪರ್ದೇಶದ ರಾಜಮಹೇಂದ್ರವರಂ ಪೊಲೀಸರ ದೌರ್ಜನ್ಯದ ಬಗ್ಗೆ ವೈಎಸ್‌ಆರ್‌ ಕಾಂಗ್ರೆಸ್‌ ನಿಯೋಗ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.

ಸಂಸದರಾದ ಎಂ ಗುರುಮೂರ್ತಿ, ಗೊಲ್ಲ ಬಾಬು ರಾವ್, ಪಿಲ್ಲಿ ಸುಭಾಷ್ ಚಂದ್ರ ಬೋಸ್ ಮತ್ತು ಮಾಜಿ ಸಂಸದರಾದ ಮಾರ್ಗಣಿ ಭರತ್ ಮತ್ತು ಗೋರಂಟ್ಲ ಮಾಧವ್ ಸೇರಿದಂತೆ ವೈಎಸ್‌ಆರ್‌ಸಿಪಿ ನಾಯಕರ ನಿಯೋಗವು ರಾಷ್ಟ್ರೀಯ ಎಸ್‌ಸಿ ಆಯೋಗದ ಅಧ್ಯಕ್ಷ ಕಿಶೋರ್ ಮಕ್ವಾನಾ ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಅಧ್ಯಕ್ಷೆ ವಿಜಯ ಭಾರತಿ ಸಯಾನಿ ಅವರನ್ನು ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.

ವೈಎಸ್‌ಆರ್‌ಸಿಪಿ ನಿಯೋಗದ ಜತೆಗಿದ್ದ ದಲಿತ ಯುವಕ ಆಯೋಗಕ್ಕೆ ತಮಗಾದ ಸಂಕಷ್ಟವನ್ನು ವಿವರಿಸಿದರು. ಸಾಗರ್ ಬಿ.ಎಸ್‌ಸಿ ಮತ್ತು ಬಿ.ಎಡ್. ಪದವಿ ಪಡೆದಿದ್ದಾರೆ.

ಟಿಡಿಪಿ ಶಾಸಕ ಆದಿರೆಡ್ಡಿ ಶ್ರೀನಿವಾಸ್ ಅವರ ಪ್ರವಾಹ ಪರಿಹಾರದ ಹಕ್ಕುಗಳನ್ನು ಪ್ರಶ್ನಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಅವರನ್ನು ಪ್ರಕಾಶ್ ನಗರ ಪೊಲೀಸ್ ಠಾಣೆಗೆ ಕರೆಸಲಾಯಿತು ಎಂದು ಪುಲಿ ಕೃಪಾ ಆನಂದ್ ಸಾಗರ್ ಹೇಳಿದರು. ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಬಟ್ಟೆ ಬಿಚ್ಚಿಸಿ ಮಹಿಳಾ ಕಾನ್‌ಸ್ಟೆಬಲ್‌ಗಳ ಕಾವಲಿರುವ ಸೆಲ್‌ನಲ್ಲಿ ಬಂಧಿಸಿದ್ದಾರೆ. ಇನ್‌ಸ್ಪೆಕ್ಟರ್ ಎಸ್‌ಕೆ ಬಾಜಿ ತನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಾಗರ್ ಹೇಳಿಕೊಂಡಿದ್ದಾರೆ.

“ಕೃಷ್ಣನಗರ, ಬ್ರದರೆನ್ ಚರ್ಚ್ ಪ್ರದೇಶಗಳು ಪ್ರವಾಹಕ್ಕೆ ಸಿಲುಕಿದ್ದು, ಯಾವುದೇ ಅಭಿವೃದ್ಧಿ ಆಗಿಲ್ಲ ಎಂದು ರಾಜಾಜಿನಗರ ಶಾಸಕರು ಮಾಡಿರುವ ಪೋಸ್ಟ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿದ ನಂತರ ಪ್ರಕಾಶ್ ನಗರ ಪೊಲೀಸ್ ಠಾಣೆಗೆ ಕರೆಸಲಾಯಿತು” ಎಂದು ಸಾಗರ್ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

“ಠಾಣೆಗೆ ಬಂದ ಮೇಲೆ, ನನಗೆ ಚಿತ್ರಹಿಂಸಡ ನೀಡಲಾಯಿತು. ಅಮಾನುಷವಾಗಿ ಥಳಿಸಿ ವಿವಸ್ತ್ರಗೊಳಿಸಲಾಯಿತು. ಈ ವೇಳೆ ಶಾಸಕ ಆದಿರೆಡ್ಡಿ ಶ್ರೀನಿವಾಸ್ ಹಿಂಬಾಲಕರು ಬಂದರು, ಪೋಲೀಸ್ ಠಾಣೆಯಲ್ಲಿ ನನ್ನನ್ನು ಅರೆಬೆತ್ತಲೆ ಭಂಗಿಯಲ್ಲಿ ನೋಡಿ, ನಗುತ್ತಾ ಠಾಣೆಯಿಂದ ಹೊರಟು ಹೋದರು. ಈ ಕ್ರಮಗಳು ಸ್ವಾತಂತ್ರ್ಯದ ಘನತೆಯ ಹಕ್ಕನ್ನು ತೀವ್ರವಾಗಿ ಉಲ್ಲಂಘಿಸುತ್ತವೆ ಮತ್ತು ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆ, ನಾಗರಿಕ ಮತ್ತು ರಾಜಕೀಯ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ಹೇಳಿದ್ದಾರೆ.

“ಸಿ.ಐ ಸೇರಿದಂತೆ ಪೊಲೀಸ್ ಅಧಿಕಾರಿಗಳು ನನ್ನ ಜಾತಿಯನ್ನು ಗುರಿಯಾಗಿಸಿಕೊಂಡು ಅಸಂಸದೀಯ ಭಾಷೆ ಬಳಸಿ, ಎರಲಂಜಕೊಡಕ, ಭಡ್ಕೋ, ಸೇರಿದಂತೆ ಹಲವು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬೆಳಿಗ್ಗೆ 11:30 ರಿಂದ ರಾತ್ರಿ 09:18 ರವರೆಗೆ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರವಾಗಿ ಬಂಧಿಸಲಾಯಿತು. ನಾನು ಸಂಜೆ 05:00 ಗಂಟೆಯವರೆಗೆ ನನ್ನ ಬಂಧನದ ಬಗ್ಗೆ ಯಾರಿಗೂ ತಿಳಿಸಲು ಅವರು ನನಗೆ ಅವಕಾಶ ನೀಡಲಿಲ್ಲ, ಇದು ನನ್ನ ಹಕ್ಕಿನ ಉಲ್ಲಂಘನೆಯಾಗಿದೆ, ನಂತರ ನನ್ನ ವಕೀಲರು ಪೊಲೀಸ್ ಠಾಣೆಗೆ ಬಂದರು” ಎಂದು ತಮ್ಮ ದೂರಿನಲ್ಲಿ ಸಾಗರ್ ವಿವರಿಸಿದ್ದಾರೆ.

ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ವೈಎಸ್‌ಆರ್‌ಸಿಪಿ ಮುಖಂಡರು, ಪೊಲೀಸರ ದರ್ಪವನ್ನು ಖಂಡಿಸಿದರು.

“ಜೀವಿಸುವ ಹಕ್ಕು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಸಾಗರ್ ಅವರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯು ಪ್ರಜಾಪ್ರಭುತ್ವ ಸಮಾಜದಲ್ಲಿ ಸ್ವೀಕಾರಾರ್ಹವಲ್ಲ” ಎಂದು ವೈಎಸ್‌ಆರ್‌ಸಿಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ; ಹಿರಿಯ ಸಾಹಿತಿ ದೇವನೂರ ಮಹಾದೇವರಿಗೆ ವೈಕಂ ಪ್ರಶಸ್ತಿ – ತಮಿಳನಾಡು ಸರ್ಕಾರ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...