2ಎ ವರ್ಗದ ಅಡಿಯಲ್ಲಿ ಮೀಸಲಾತಿಗೆ ಒತ್ತಾಯಿಸಿ ಪಂಚಮಸಾಲಿ ಸಮುದಾಯದ ಸಂಘಟನೆಗಳು ಮಂಗಳವಾರ ಬೆಳಗಾವಿಯಲ್ಲಿ ನಡೆಸಿದ ಪ್ರತಿಭಟನೆ ಹಿಂಸಾಚಾರ ನಡೆದಿದೆ. ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ದಾಟಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧಕ್ಕೆ ನುಗ್ಗಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಿಂಸಾಚಾರಕ್ಕೆ ತಿರುಗಿದ
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅರವಿಂದ್ ಬೆಲ್ಲದ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಸಿಬ್ಬಂದಿ ಮೇಲೆಯೂ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಬಿಗಡಾಯಿಸಿತು. ಹಿಂಸಾಚಾರಕ್ಕೆ ತಿರುಗಿದ
ಪ್ರತಿಭಟನೆ ಕಾರಣಕ್ಕೆ ಸುವರ್ಣಸೌಧ ಸಂಕೀರ್ಣದ ಮುಂಭಾಗದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವೂ ಅಸ್ತವ್ಯಸ್ತಗೊಂಡಿತು. ಸರ್ಕಾರ ಪ್ರತಿಭಟನಾಕಾರರನ್ನು ಮಾತುಕತೆಗೆ ಆಹ್ವಾನಿಸಿದ್ದರೂ ಅವರು ಆಗಮಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. “ಇದು ಪ್ರಜಾಪ್ರಭುತ್ವ ಆಗಿರುವುದರಿಂದ, ನಾವು ಪ್ರತಿಭಟನೆಗಳನ್ನು ವಿರೋಧಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಸಮುದಾಯದ ಮುಖಂಡರ ವಿರೋಧದ ನಡುವೆಯೂ ಜಯಮೃತ್ಯುಂಜಯ ಸ್ವಾಮಿ ಪ್ರತಿಭಟನೆಯನ್ನು ಘೋಷಿಸಿದ್ದಾರೆ. 5,000 ಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳೊಂದಿಗೆ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಅವರು ಹೇಳಿದ್ದರೂ, ಬೆಳಗಾವಿ ಜಿಲ್ಲಾಡಳಿತ ಅದಕ್ಕೆ ಅನುಮತಿ ನಿರಾಕರಿಸಿದ್ದರಿಂದ ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸಲು ಅವಕಾಶ ನೀಡಿತು.
ಪ್ರತಿಭಟನೆ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕಿನ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಪ್ರತಿಭಟನೆಗಳನ್ನು ನಿಗ್ರಹಿಸಲು ರಾಜ್ಯ ಸರ್ಕಾರ “ಅಡಾಲ್ಫ್ ಹಿಟ್ಲರ್ ಮಾರ್ಗ” ವನ್ನು ಆಶ್ರಯಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಪಂಚಮಸಾಲಿ ಶ್ರೀಗಳನ್ನು ಅವಮಾನಕರವಾಗಿ ನಡೆಸಿಕೊಳ್ಳಲಾಗಿದೆ ಎಂದ ಅವರು, ಶಾಂತಿ ಕದಡಲು ಯತ್ನಿಸಿದರೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಹೇಳಿದ್ದಾರೆ. ಅವರ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳುವ ಸಂದರ್ಭದಲ್ಲಿ ಸರ್ಕಾರ ಮತ್ತು ಸಮುದಾಯದ ಕ್ಷಮೆ ಯಾಚಿಸಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಹಿಂಸಾಚಾರಕ್ಕೆ ತಿರುಗಿದ
ಇದನ್ನೂ ಓದಿ: ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು
ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು


