ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ರಾಜ್ಯಸಭೆಯ ಸ್ಪೀಕರ್, ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿರು ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಆಕ್ರೋಶ ವ್ಯಕ್ತಪಡಿಸಿದ್ದು, “ವಿಪಕ್ಷಗಳು ಪೀಠದ ಘನತೆಗೆ ಅಗೌರವ” ತೋರಿದ್ದಾರೆ ಎಂದು ಹೇಳಿದ್ದಾರೆ. ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ಅಧ್ಯಕ್ಷರ ಅಧಿಕಾರವನ್ನು ಪದೇ ಪದೇ ಕಡೆಗಣಿಸುತ್ತಿವೆ ಎಂದು ರಿಜಿಜು ಆರೋಪಿಸಿದರು, ಮೇಲ್ಮನೆಯಲ್ಲಿ ಎನ್‌ಡಿಎ ಬಹುಮತವನ್ನು ಹೊಂದಿದೆ ಎಂದು ಪ್ರತಿಪಾದಿಸಿದರು. ಎನ್‌ಡಿಎಗೆ ಬಹುಮತವಿದೆ
“ಕಾಂಗ್ರೆಸ್ ಪಕ್ಷ ಮತ್ತು ಅವರ ಮೈತ್ರಿಕೂಟವು ಸ್ಪೀಕರ್ ನಿರ್ದೇಶನವನ್ನು ಅನುಸರಿಸದೆ ನಿರಂತರವಾಗಿ ತಪ್ಪಾಗಿ ವರ್ತಿಸುತ್ತಿದೆ. ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ವಿನಮ್ರ ಹಿನ್ನೆಲೆಯಿಂದ ಬಂದವರು. ಅವರು ರೈತರು ಮತ್ತು ಜನರ ಕಲ್ಯಾಣಕ್ಕಾಗಿ ನಿರಂತರ ಕೆಲಸ ಮಾಡಿದ್ದಾರೆ. ನಾವು ಅವರನ್ನು ಗೌರವಿಸುತ್ತೇವೆ ಮತ್ತು ಅವರ ರೀತಿಯನ್ನು ಸಂತೋಷಪಡುತ್ತೇವೆ. ಅವರು ಸದನಕ್ಕೆ ಮಾರ್ಗದರ್ಶನ ನೀಡುತ್ತಾರೆ’’ ಸಚಿವ ರಿಜಿಜು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಅವಿಶ್ವಾಸ ನಿರ್ಣಯ ಮಂಡನೆಯ ನೋಟಿಸ್‌ಗೆ ಸಹಿ ಹಾಕಿದ 60 ಸಂಸದರನ್ನು ರಿಜಿಜು ಅವರು ಖಂಡಿಸಿದ್ದು, ಎನ್‌ಡಿಎ ಬಹುಮತ ಹೊಂದಿದ್ದು, ಸಭಾಪತಿ ಮೇಲೆ ನಮಗೆಲ್ಲ ನಂಬಿಕೆ ಇದೆ ಎಂದು ಅವರು ಹೇಳಿದ್ದಾರೆ. ಎನ್‌ಡಿಎಗೆ ಬಹುಮತವಿದೆ
ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಮಂಗಳವಾರ ರಾಜ್ಯಸಭೆಯಲ್ಲಿ ಅವಿಶ್ವಾಸ ನಿರ್ಣಯವನ್ನು ಸಲ್ಲಿಸಿದೆ. ರಾಜ್ಯಸಭಾ ಸ್ಪೀಕರ್ ದಂಖರ್ ಅವರು “ಪಕ್ಷಪಾತ” ನಡೆಸುತ್ತಾರೆ ಎಂದು ವಿಪಕ್ಷಗಳು ನೋಟೀಸ್‌ನಲ್ಲಿ ಉಲ್ಲೇಖಿಸಿವೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ (ಟಿಎಂಸಿ), ಆಮ್ ಆದ್ಮಿ ಪಕ್ಷ (ಎಎಪಿ), ಸಮಾಜವಾದಿ ಪಕ್ಷ (ಎಸ್‌ಪಿ), ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಎಡಪಕ್ಷಗಳು ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸೇರಿದಂತೆ ಪಕ್ಷಗಳ 70 ಕ್ಕೂ ಹೆಚ್ಚು ಸಂಸದರು ಇದಕ್ಕೆ ಸಹಿ ಹಾಕಿದ್ದಾರೆ.
ಸಂಸತ್ತಿನ ಚರ್ಚೆಗಳನ್ನು ಧಂಖರ್ ಅವರು “ಅತ್ಯಂತ ಪಕ್ಷಪಾತಿ”ಯಗಿ ನಿಭಾಯಿಸುತ್ತಿದ್ದಾರೆ. ಹಾಗಾಗಿ ಈ ನಿರ್ಣಯವನ್ನು ಮಂಡಿಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. “ಇಂಡಿಯಾ ಒಕ್ಕೂಟಕ್ಕೆ ಸೇರಿದ ಎಲ್ಲಾ ಪಕ್ಷಗಳಿಗೆ ರಾಜ್ಯಸಭೆಯ ಅಧ್ಯಕ್ಷರ ವಿರುದ್ಧ ಔಪಚಾರಿಕವಾಗಿ ಅವಿಶ್ವಾಸ ನಿರ್ಣಯವನ್ನು ಸಲ್ಲಿಸುವುದನ್ನು ಬಿಟ್ಟು ಬೇರೆ ಆಯ್ಕೆಗಳಿಲ್ಲ” ಎಂದು ರಮೇಶ್ ಎಕ್ಸ್‌ನಲ್ಲಿ ಹೇಳಿದ್ದಾರೆ.
ಧಂಖರ್ ಅವರು ವಿಶೇಷವಾಗಿ ಕಾಂಗ್ರೆಸ್ ಅಧ್ಯಕ್ಷ, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣಗಳಿಗೆ ಆಗಾಗ್ಗೆ ಅಡ್ಡಿಪಡಿಸುತ್ತಿದ್ದಾರೆ ಮತ್ತು ನಿರ್ಣಾಯಕ ವಿಷಯಗಳ ಬಗ್ಗೆ ಸಾಕಷ್ಟು ಚರ್ಚೆಯನ್ನು ನಿರಾಕರಿಸುತ್ತಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಖರ್ಗೆ ಅವರ ಭಾಷಣದ ವೇಳೆ ಮೈಕ್ರೊಫೋನ್ ಆಫ್ ಮಾಡಿದ ನಿದರ್ಶನಗಳು ಸೇರಿದಂತೆ ಸಂಸದೀಯ ನಿಯಮಗಳ ಉಲ್ಲಂಘನೆಯನ್ನು ಅವರು ಆರೋಪಿಸಿದ್ದಾರೆ.
ಅಷ್ಟೆ ಅಲ್ಲದೆ, ಧಂಖರ್ ಅವರು ಸದಸ್ಯರ ವಿರುದ್ಧ ವೈಯಕ್ತಿಕ ಟೀಕೆಗಳನ್ನು ಮಾಡುತ್ತಿದ್ದಾರೆ, ಅಂತಹ ನಡವಳಿಕೆಯು ಸಂಸತ್ತಿನ ಸಂಪ್ರದಾಯಗಳನ್ನು ಉಲ್ಲಂಘಿಸುತ್ತದೆ ಮತ್ತು ವಿವಾದಾತ್ಮಕ ಚರ್ಚೆಗಳ ಸಮಯದಲ್ಲಿ ಆಡಳಿತ ಪಕ್ಷದ ಸದಸ್ಯರ ಬಗ್ಗೆ ಅವರು ಒಲವು ಪ್ರದರ್ಶಿಸುತ್ತಾರೆ ಎಂದು ಅವರು ವಾದಿಸಿದ್ದಾರೆ.
ಇದನ್ನೂ ಓದಿ: ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು
ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು
ಇದನ್ನೂ ಓದಿ: ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು
ಇದನ್ನೂ ಓದಿ: ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು


