Homeಮುಖಪುಟಉತ್ತರ ಪ್ರದೇಶ | 180 ವರ್ಷ ಹಳೆಯ ಮಸೀದಿಯನ್ನು ಭಾಗಶಃ ಕೆಡವಿದ ಜಿಲ್ಲಾಡಳಿತ

ಉತ್ತರ ಪ್ರದೇಶ | 180 ವರ್ಷ ಹಳೆಯ ಮಸೀದಿಯನ್ನು ಭಾಗಶಃ ಕೆಡವಿದ ಜಿಲ್ಲಾಡಳಿತ

- Advertisement -
- Advertisement -

ಉತ್ತರ ಪ್ರದೇಶದ ಫತೇಪುರ್‌ನಲ್ಲಿರುವ ಸುಮಾರು 180 ವರ್ಷ ಹಳೆಯ ನೂರಿ ಜಾಮಾ ಮಸೀದಿಯ ಒಂದು ಭಾಗವನ್ನು ಮಂಗಳವಾರ (ಡಿ.10) ಜಿಲ್ಲಾಡಳಿತ ಕೆಡವಿದೆ.

ಮಸೀದಿಯು ಪಕ್ಕದ ಬಂದಾ-ಫತೇಪುರ್ ರಸ್ತೆಯನ್ನು ಆಕ್ರಮಿಸಿಕೊಂಡಿತ್ತು. ಭಾಗಶಃ ಕೆಡವುವ ಮುನ್ನ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ. ತೆರವು ಕಾರ್ಯಾಚರಣೆ ವಿರುದ್ದ ಮಸೀದಿ ಸಮಿತಿ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ ನಡುವೆಯೇ ಈ ಬೆಳವಣಿಗೆ ನಡೆದಿದೆ.

“ಮಸೀದಿ ಸಮಿತಿ ಹೈಕೋರ್ಟ್‌ಗೆ ಅರ್ಜಿ ಹಾಕಿದೆ. ಆದರೆ, ಇನ್ನೂ ವಿಚಾರಣೆಗೆ ಪಟ್ಟಿಯಾಗಿಲ್ಲ. ಕೆಡವಲಾಗಿರುವ ಮಸೀದಿ ಕಟ್ಟಡವನ್ನು ಕಳೆದ ಮೂರು ವರ್ಷಗಳಲ್ಲಿ ನಿರ್ಮಿಸಲಾಗಿದೆ. ಮಸೀದಿಯ ಮುಖ್ಯ ಕಟ್ಟಡ ಯಥಾಸ್ಥಿತಿಯಲ್ಲಿದೆ” ಎಂದು ಫತೇಪುರ್ ಜಿಲ್ಲಾ ಹೆಚ್ಚುವರಿ ಮ್ಯಾಜಿಸ್ಟ್ರೇಟ್ (ಹಣಕಾಸು ಮತ್ತು ಕಂದಾಯ) ಅವಿನಾಶ್ ತ್ರಿಪಾಠಿ ಹೇಳಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ರಸ್ತೆಯನ್ನು ಅತಿಕ್ರಮಿಸಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸುವುದಾಗಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಕಳೆದ ಆಗಸ್ಟ್‌ನಲ್ಲಿ ವ್ಯಾಪಾರಿಗಳು, ಮನೆ ಮಾಲೀಕರು ಮತ್ತು ಮಸೀದಿ ಸಮಿತಿ ಸೇರಿದಂತೆ 139 ಜನರಿಗೆ ನೋಟಿಸ್ ನೀಡಿತ್ತು. ರಸ್ತೆಯನ್ನು ಅಭಿವೃದ್ದಿ ಮಾಡಿ, ಚರಂಡಿ ನಿರ್ಮಿಸಲು ಅತಿಕ್ರಮಣ ತೆರವು ಮಾಡಲಾಗಿದೆ” ಎಂದು ಅವಿನಾಶ್ ತ್ರಿಪಾಠಿ ತಿಳಿಸಿದ್ದಾರೆ.

“ಎಲ್ಲಾ ಕಟ್ಟಡಗಳ ಅತಿಕ್ರಮಣ ಭಾಗವನ್ನು ಗುರುತಿಸಿ ನೋಟಿಸ್ ನೀಡಲಾಗಿತ್ತು. ಕಳೆದ ಸೆಪ್ಟೆಂಬರ್‌ನಲ್ಲಿ ಅವುಗಳನ್ನು ತೆರವುಗೊಳಿಸಲಾಗಿದೆ. ಮಸೀದಿ ಸಮಿತಿ ಕೂಡ ಮಸೀದಿಗೆ ಹೊಂದಿಕೊಂಡಿರುವ ಅಂಗಡಿಗಳ ಅತಿಕ್ರಮಣ ಭಾಗವನ್ನು ತೆರವುಗೊಳಿಸಿದೆ. ಮಸೀದಿಯ ಅತಿಕ್ರಮಣ ಭಾಗವನ್ನು ತೆರವು ಮಾಡುವುದಾಗಿ ಸಮಿತಿ ಭರವಸೆ ನೀಡಿತ್ತು. ಅವರು ತೆರವು ಮಾಡಿಲ್ಲ. ಹಾಗಾಗಿ, ಜಿಲ್ಲಾಡಳಿತ ತೆರವು ಮಾಡಿದೆ” ಎಂದು ಅವಿನಾಶ್ ತ್ರಿಪಾಠಿ ಹೇಳಿದ್ದಾರೆ.

“ಮಸೀದಿಯ ಅತಿಕ್ರಮಣ ಭಾಗವನ್ನು ಕೆಡವಿದ ಸಂದರ್ಭ ಪಿಡಬ್ಲ್ಯುಡಿ ಪೊಲೀಸರ ಸಹಾಯ ಕೋರಿತ್ತು. ಕಾನೂನು ಸುವ್ಯವಸ್ಥೆ ಕಾಪಾಡಲು ಸ್ಥಳದಲ್ಲಿ ಪೊಲೀಸರನ್ನು ನೇಮಕ ಮಾಡಲಾಗಿತ್ತು. ಮಸೀದಿ ಕೆಡವುವ ಸಂದರ್ಭದಲ್ಲಿ ಯಾವುದೇ ಪ್ರತಿಭಟನೆ ನಡೆದಿಲ್ಲ” ಎಂದು ಅವಿನಾಶ್ ತ್ರಿಪಾಠಿ ಹೇಳಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವಿವರಿಸಿದೆ.

ಮಸೀದಿ ಸಮಿತಿ ಹೇಳಿದ್ದೇನು?

ತೆರವು ಕಾರ್ಯಾಚರಣೆಗೆ ತಡೆ ಕೋರಿ ಮಸೀದಿ ಸಮಿತಿಯು ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಹೈಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 13ಕ್ಕೆ ನಿಗದಿಪಡಿಸಿತ್ತು. ಆದರೆ, ನ್ಯಾಯಾಲಯದ ವಿಚಾರಣೆಗೆ ಮೊದಲೇ ಮಸೀದಿಯನ್ನು ಭಾಗಶಃ ಕೆಡವಲಾಗಿದೆ. ಮಸೀದಿಯು 180 ವರ್ಷಗಳಷ್ಟು ಹಳೆಯದಾಗಿದೆ. ಹಿಂಬದಿಯ ಗೋಡೆಗಳನ್ನು ಕೆಡವುದರಿಂದ ಮುಖ್ಯ ಕಟ್ಟಡಕ್ಕೆ ಹಾನಿಯಾಗಲಿದೆ. ನ್ಯಾಯಾಲಯದ ವಿಚಾರಣೆಗಾಗಿ ಕಾಯುವಂತೆ ನಾವು ಮನವಿ ಮಾಡಿದ್ದೆವು, ಆದರೆ, ಜಿಲ್ಲಾಡಳಿತ ನಮ್ಮ ಮಾತನ್ನು ಕೇಳಲಿಲ್ಲ ಎಂದು ಮಸೀದಿಯ ಉಸ್ತುವಾರಿ ಹೇಳಿದ್ದಾರೆ.

ಇದನ್ನೂ ಓದಿ : ವಿಹೆಚ್‌ಪಿ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ವಿವಾದಾತ್ಮಕ ಭಾಷಣ : ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...