Homeಮುಖಪುಟಸಂಸತ್ ಅಧಿವೇಶನ - ಮುಂದುವರಿದ ವಿಪಕ್ಷಗಳ ಪ್ರತಿಭಟನೆ

ಸಂಸತ್ ಅಧಿವೇಶನ – ಮುಂದುವರಿದ ವಿಪಕ್ಷಗಳ ಪ್ರತಿಭಟನೆ

- Advertisement -
- Advertisement -

ಚಳಿಗಾಲದ ಅಧಿವೇಶನ ಪ್ರಾರಂಭವಾದ ನಂತರ ಸಂಸತ್ತಿನ ಹೊರಗೆ ವಿಪಕ್ಷಗಳು ನಡೆಸುತ್ತಿರುವ ಸರಣಿ ಪ್ರತಿಭಟನೆ ಬುಧವಾರ ಕೂಡಾ ಮುಂದುವರೆದಿದೆ. ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಆವರಣದಲ್ಲಿ ವಿನೂತನ ಪ್ರತಿಭಟನಾ ಪ್ರದರ್ಶನ ನಡೆಸಿದ್ದು, ಬಿಜೆಪಿ ಸಂಸದರಿಗೆ ಕೆಂಪು ಗುಲಾಬಿ ಮತ್ತು ತ್ರಿವರ್ಣ ಧ್ವಜವನ್ನು ನೀಡಿದರು. ಅದಾನಿ ವಿವಾದ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಚರ್ಚೆಗಾಗಿ ವಿಪಕ್ಷಗಳು ಒತ್ತಾಯಿಸುತ್ತಿವೆ. ಸಂಸತ್ ಅಧಿವೇಶನ

ಸಂಸತ್ತಿಗೆ ಆಗಮಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಖುದ್ದು ಗುಲಾಬಿ ಮತ್ತು ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. ಸಂಸತ್ ಅಧಿವೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಸತ್ತಿನ ಮುಂದೆ ತಮ್ಮ ಕಾರಿನಿಂದ ಕೆಳಗಿಳಿದ ರಾಜನಾಥ್ ಸಿಂಗ್ ಅವರ ಮುಂದೆ ಇತರ ಕಾಂಗ್ರೆಸ್ ನಾಯಕರ ಜೊತೆಯಲ್ಲಿ ತೆರಳಿದ ರಾಹುಲ್ ಗಾಂಧಿ ಅವರು, ಸದನದ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಆಡಳಿತ ಪಕ್ಷವನ್ನು ಒತ್ತಾಯಿಸಿದರು. ಸಂಸತ್ತಿನ ಅಧಿವೇಶನಗಳಲ್ಲಿ ಅದಾನಿ ಸಮಸ್ಯೆ ಸೇರಿದಂತೆ ಪ್ರಮುಖ ವಿಷಯಗಳನ್ನು ಚರ್ಚಿಸಬೇಕು ಎಂದು ಪ್ರತಿಪಕ್ಷ ನಾಯಕರು ಈ ಮೂಲಕ ಆಡಳಿತರೂಢ ಸಂಸದರಿಗೆ ಸೂಚಿಸಿದ್ದಾರೆ.

ಮಂಗಳವಾರ ಸಂಸದರು ಕಡು ನೀಲಿ ಬಣ್ಣದ ‘ಜೋಲಾ(ಬ್ಯಾಗ್‌)’ಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದರು. ಈ ಬ್ಯಾಗ್‌ನ ಒಂದು ಬದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಅವರ ವ್ಯಂಗ್ಯಚಿತ್ರಗಳು ಹಾಗೂ ಮತ್ತೊಂದು ಬದಿಯಲ್ಲಿ ‘ಮೋದಿ-ಅದಾನಿ ಭಾಯಿ-ಭಾಯ್’ ಎಂದು ಬರೆಯಲಾಗಿತ್ತು.

ಸೋಮವಾರ, ಅದಾನಿ ವಿವಾದಕ್ಕೆ ಸಂಬಂಧಿಸಿದಂತೆ ಕೆಲವು ಇಂಡಿಯಾ ಒಕ್ಕೂಟದ ಪಕ್ಷಗಳ ನಾಯಕರು ಸಂಸತ್‌ ಕಟ್ಟಡದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಾಹುಲ್ ಗಾಂಧಿ ಅವರು ಮೋದಿ ಮತ್ತು ಅದಾನಿ ಮುಖವಾಡಗಳನ್ನು ಧರಿಸಿರುವ ಕಾಂಗ್ರೆಸ್ ಸದಸ್ಯರ ಜೊತೆಗೆ ಅಣಕು ‘ಸಂದರ್ಶನ’ ನಡೆಸಿದ್ದರು.

ಇದನ್ನೂ ಓದಿ: ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು

ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...