ಆಗಸ್ಟ್ 5 ಮತ್ತು ಅಕ್ಟೋಬರ್ 22 ರ ನಡುವೆ ದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ 88 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಮಂಗಳವಾರ ತಿಳಿಸಿದೆ ಎಂದು ಡೈಲಿ ಸ್ಟಾರ್ ವರದಿ ಮಾಡಿದೆ. ಈ ಪ್ರಕರಣಗಳಲ್ಲಿ ಎಪ್ಪತ್ತು ಜನರನ್ನು ಬಂಧಿಸಲಾಗಿದೆ ಎಂದು ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಅವರ ಪತ್ರಿಕಾ ಕಾರ್ಯದರ್ಶಿ ಶಫೀಕುಲ್ ಆಲಂ ಹೇಳಿದ್ದಾರೆ.
“ಬಾಂಗ್ಲಾದೇಶದಲ್ಲಿ ಇಂತಹ ಹಿಂಸಾಚಾರ ಮತ್ತು ಹೇಯ ಕೃತ್ಯಗಳನ್ನು ಎಸಗುವ ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಆಲಂ ಸುದ್ದಿಗಾರರಿಗೆ ತಿಳಿಸಿದ್ದಾರೆ. ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಬಾಂಗ್ಲಾದೇಶದ ಧಾರ್ಮಿಕ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಭಾರತದ ಆತಂಕವನ್ನು ಅಲ್ಲಿನ ವಿದೇಶಾಂಗ ಕಾರ್ಯದರ್ಶಿ ಮೊಹಮ್ಮದ್ ಜಾಶಿಮ್ ಉದ್ದೀನ್ ಅವರಿಗೆ ತಿಳಿಸಿದ ಒಂದು ದಿನದ ನಂತರ ಈ ಹೇಳಿಕೆ ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಆಗಸ್ಟ್ 5 ರಂದು ಮಾಜಿ ಪ್ರಧಾನಿ ಶೇಖ್ ಹಸೀನಾ ಮತ್ತು ಅವರ ಅವಾಮಿ ಲೀಗ್ ಸರ್ಕಾರವನ್ನು ಪದಚ್ಯುತಗೊಳಿಸಿದ ನಂತರ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಉನ್ನತ ಮಟ್ಟದ ರಾಜತಾಂತ್ರಿಕ ಸಭೆಯನ್ನು ನಡೆಸಲು ಭಾರತದ ವಿದೇಶಾಂಗ ಕಾರ್ಯದರ್ಶಿ ಮಿಕ್ರಮ್ ಮಿಸ್ರಿ ಅವರು ಬುಧವಾರ ಮುಂಜಾನೆ ಢಾಕಾಗೆ ತೆರಳಿದ್ದಾರೆ.
ಹಸೀನಾ ನೇತೃತ್ವದ ಸರ್ಕಾರದ ಪತನದ ನಂತರ ಬಾಂಗ್ಲಾದೇಶದಲ್ಲಿ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವನ್ನು ರಚಿಸಲಾಗಿದೆ. ಹಸೀನಾ ಅವರು ಭಾರತಕ್ಕೆ ಪಲಾಯನ ಮಾಡಿದ ನಂತರ ನವದೆಹಲಿ ಮತ್ತು ಢಾಕಾ ನಡುವಿನ ರಾಜತಾಂತ್ರಿಕ ಸಂಬಂಧಗಳು ಹದಗೆಟ್ಟಿದೆ. ಬಾಂಗ್ಲಾದ ಸರ್ಕಾರದ ನಂತರ ಬಾಂಗ್ಲಾದೇಶದ ಹಲವಾರು ಭಾಗಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರದ ಘಟನೆಗಳು ವರದಿಯಾಗಿವೆ.
ಕಳೆದ ಕೆಲವು ವಾರಗಳಲ್ಲಿ ದೇಶದ್ರೋಹದ ಆರೋಪದ ಮೇಲೆ ಮೂವರು ಹಿಂದೂ ಸನ್ಯಾಸಿಗಳನ್ನು ಬಂಧಿಸಿದ ನಂತರ ಈ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದು, ಹಲವಾರು ಹಿಂದೂ ದೇವಾಲಯಗಳು ದಾಳಿಗೆ ಒಳಗಾಗಿವೆ ಎಂದು ವರದಿಯಾಗಿವೆ.
ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಅವರ ಪತ್ರಿಕಾ ಕಾರ್ಯದರ್ಶಿ ಶಫೀಕುಲ್ ಆಲಂ ಅವರು ಮಂಗಳವಾರ ಪ್ರತಿಕ್ರಿಯಿಸಿ, ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಬಂಧನಗಳನ್ನು ರಾಜಕೀಯ ಗುರುತುಗಳ ಆಧಾರದ ಮೇಲೆ ಮಾಡಲಾಗಿಲ್ಲ ಎಂದು ಹೇಳಿದ್ದಾಗಿ ಡೈಲಿ ಸ್ಟಾರ್ ವರದಿ ಮಾಡಿದೆ. ಆದಾಗ್ಯೂ, 88 ಪ್ರಕರಣಗಳಲ್ಲಿ ಹಿಂಸಾಚಾರವನ್ನು ನಡೆಸಿದವರು ಹಿಂದಿನ ಆಡಳಿತ ಪಕ್ಷದ ಸದಸ್ಯರು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು
ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು


