Homeಮುಖಪುಟನನ್ನ ವಿರುದ್ಧದ ಅವಹೇಳನಕಾರಿ ಹೇಳಿಕೆ ಕಡತದಿಂದ ತೆಗೆದುಹಾಕಿ - ಸ್ಪೀಕರ್‌ಗೆ ರಾಹುಲ್ ಗಾಂಧಿ ಒತ್ತಾಯ

ನನ್ನ ವಿರುದ್ಧದ ಅವಹೇಳನಕಾರಿ ಹೇಳಿಕೆ ಕಡತದಿಂದ ತೆಗೆದುಹಾಕಿ – ಸ್ಪೀಕರ್‌ಗೆ ರಾಹುಲ್ ಗಾಂಧಿ ಒತ್ತಾಯ

- Advertisement -
- Advertisement -

ಲೋಕಸಭೆಯಲ್ಲಿ ಬಿಜೆಪಿ ಸಂಸದರು ತಮ್ಮ ಬಗ್ಗೆ ಮಾಡಿರುವ ಅವಹೇಳನಕಾರಿ ಹೇಳಿಕೆಗಳನ್ನು ಕಡತದಿಂದ ತೆಗೆದುಹಾಕುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಸದನದ ಸ್ಪೀಕರ್ ಓಂ ಬಿರ್ಲಾ ಅವರನ್ನು ಒತ್ತಾಯಿಸಿದ್ದಾರೆ. ಈ ವಿಷಯವನ್ನು ಪರಿಶೀಲಿಸುವುದಾಗಿ ಸ್ಪೀಕರ್ ಭರವಸೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ತಮ್ಮ ವಿರುದ್ಧದ ಅವಹೇಳನಕಾರಿ

“ಸದನವು ಕಾರ್ಯನಿರ್ವಹಿಸಬೇಕು ಮತ್ತು ಸದನದಲ್ಲಿ ಚರ್ಚೆಯಾಗಬೇಕು ಎಂಬುದು ನಮ್ಮ ಗುರಿಯಾಗಿದೆ. ಅವರು ನನ್ನ ಬಗ್ಗೆ ಏನು ಬೇಕಾದರೂ ಹೇಳಬಹುದು, ಆದರೆ ಸದನದಲ್ಲಿ ಚರ್ಚೆ ನಡೆಯಬೇಕೆಂದು ನಾವು ಬಯಸುತ್ತೇವೆ.” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಗಾಂಧಿ ಅವರು ಸ್ಪೀಕರ್ ಬಿರ್ಲಾ ಅವರನ್ನು ಭೇಟಿಯಾದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಅದಾಗ್ಯೂ, ತಮ್ಮ ಮೇಲಿನ ಯಾವ ಟೀಕೆಗಳನ್ನು ಕಡತದಿಂದ ತೆಗೆದುಹಾಕುವಂತೆ ಅವರು ಬಯಸುತ್ತಿದ್ದಾರೆ ಎಂಬುದನ್ನು ರಾಹುಲ್ ಗಾಂಧಿ ನಿರ್ದಿಷ್ಟವಾಗಿ ಹೇಳಿಲ್ಲ. ಆದಾಗ್ಯೂ, ಸಂಸತ್ತಿನ ಚಳಿಗಾಲದ ಅಧಿವೇಶನದ ಆರಂಭದಿಂದಲೂ, ಬಿಜೆಪಿಯ ಸದಸ್ಯರು ಕಾಂಗ್ರೆಸ್ ಉನ್ನತ ನಾಯಕತ್ವವು ಭಾರತವನ್ನು “ಅಸ್ಥಿರಗೊಳಿಸಲು” ಬಿಲಿಯನೇರ್ ಲೋಕೋಪಕಾರಿ ಜಾರ್ಜ್ ಸೊರೊಸ್‌ನೊಂದಿಗೆ ಸಂಚು ರೂಪಿಸಿದೆ ಎಂದು ಪದೇ ಪದೇ ಆರೋಪಿಸುತ್ತಿದ್ದಾರೆ. ತಮ್ಮ ವಿರುದ್ಧದ ಅವಹೇಳನಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಸೆಂಬರ್ 6 ರಂದು ಪಕ್ಷದ ನಾಯಕರಾದ ಸಂಬಿತ್ ಪಾತ್ರ ಮತ್ತು ಕೆ ಲಕ್ಷ್ಮಣ್ ಅವರು ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಅವರನ್ನು “ದೇಶದ್ರೋಹಿ” ಎಂದು ಕರೆದಿದ್ದರು. ಆರ್ಗನೈಸ್ಡ್ ಕ್ರೈಮ್ ಅಂಡ್ ಕರಪ್ಷನ್ ರಿಪೋರ್ಟಿಂಗ್ ಪ್ರಾಜೆಕ್ಟ್‌(OCCRP)ಗೆ ಫ್ರೆಂಚ್ ತನಿಖಾ ಪತ್ರಿಕೋದ್ಯಮವಾದ ಮೀಡಿಯಾಪಾರ್ಟ್ ನಡೆಸಿದ ತನಿಖೆಯನ್ನು ಉಲ್ಲೇಖಿಸಿದ್ದ ಅವರು, “OCCRP ಮತ್ತು ರಾಹುಲ್ ಗಾಂಧಿ ಎರಡು ದೇಹ ಮತ್ತು ಒಂದು ಆತ್ಮ. ರಾಹುಲ್ ಗಾಂಧಿಗೆ ಭಾರತ ಮುಂದೆ ಹೋಗುವುದು ಇಷ್ಟವಿಲ್ಲ. ಭಾರತೀಯ ಸಂಸತ್ತು ಕಾರ್ಯನಿರ್ವಹಿಸುವುದನ್ನು ಅವರು ಬಯಸುವುದಿಲ್ಲ” ಎಂದು ಹೇಳಿದ್ದರು.

OCCRP ಹಲವಾರು ಅಮೆರಿಕ ಸರ್ಕಾರದ ದೇಣಿಗೆಗಳನ್ನು ಸ್ವೀಕರಿಸಿದೆ ಎಂದು ಮೀಡಿಯಾಪಾರ್ಟ್ ಇತ್ತೀಚೆಗೆ ವರದಿ ಮಾಡಿತ್ತು. OCCRP ಸಂಸ್ಥೆಯು ಅಮೆರಿಕ ಆದ್ಯತೆಯ ವಿಷಯವೆಂದು ಪರಿಗಣಿಸುವ ಕೆಲವು ದೇಶಗಳ ತನಿಖೆಗಳಿಗೆ ಖರ್ಚು ಮಾಡುತ್ತಿದೆ ಎಂದು ವರದಿ ಹೇಳಿತ್ತು. ಸಂಸ್ಥೆಯು ರಷ್ಯಾ, ವೆನೆಜುವೆಲಾ, ಮಾಲ್ಟಾ, ಸೈಪ್ರಸ್ ಮತ್ತು ಮೆಕ್ಸಿಕನ್ ಮೇಲೆ ವರದಿ ಮಾಡಿದೆ ಎಂದು ಹೇಳಿತ್ತು. ಅದಾಗ್ಯೂ, ಯಾವುದೇ ವರದಿಯಲ್ಲೂ ಭಾರತದ ಪ್ರಸ್ತಾಪವೇ ಇರಲಿಲ್ಲ.

ತನಿಖಾ ವರದಿ ಮಾಡಿರುವ ಮೀಡಿಯಾಪಾರ್ಟ್‌ನ ನಿರ್ದೇಶಕಿ ಕ್ಯಾರಿನ್ ಫೌಟೊ ಪ್ರತಿಕ್ರಿಯಿಸಿ, ಬಿಜೆಪಿಯು “ಪಿತೂರಿ ಸಿದ್ಧಾಂತ” ವನ್ನು ಪ್ರಚಾರ ಮಾಡಲು ತನ್ನ ವರದಿಯನ್ನು ವಿರೂಪಗೊಳಿಸಿದೆ ಎಂದು ಆರೋಪಿಸಿದ್ದಾರೆ. “ನಾವು ಎಂದಿಗೂ ಪ್ರಕಟಿಸದ ನಕಲಿ ಸುದ್ದಿಗಳನ್ನು ಹರಡಲು ಮೀಡಿಯಾಪಾರ್ಟ್‌ನ ಲೇಖನವನ್ನು ಬಿಜೆಪಿ ತಪ್ಪಾಗಿ ಬಳಸಿಕೊಂಡಿದೆ” ಎಂದು ಫೌಟೆಯು ಹೇಳಿರುವುದಾಗಿ ದಿ ವೈರ್ ಉಲ್ಲೇಖಿಸಿದೆ.

ಇದರ ಹೊರತಾಗಿಯೂ ಬಿಜೆಪಿ ಸಂಸದರು ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಈ ನಡುವೆ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ವಿರುದ್ಧ “ಅತ್ಯಂತ ದೂಷಣೆಯ ಭಾಷೆ” ಬಳಸಿದ್ದಕ್ಕಾಗಿ ಸಂಬಿತ್ ಪಾತ್ರಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಡಿಸೆಂಬರ್ 6 ರಂದು ಬಿರ್ಲಾ ಅವರಿಗೆ ಪತ್ರ ಬರೆದಿದ್ದರು.

ಬಿಜೆಪಿ ಸಂಸದರು ತಮ್ಮ ವಿರುದ್ಧ ಆರೋಪ ಮಾಡುವ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ. ಆದರೆ ನಾವು ಸದನವನ್ನು ನಡೆಸಲು ಬಯಸುತ್ತೇವೆ ಎಂದು ಅವರು ಹೇಳಿದ್ದಾರೆ. ಡಿಸೆಂಬರ್ 13 ರಂದು ಸಂವಿಧಾನದ ಬಗ್ಗೆ ಚರ್ಚೆ ನಡೆಸಲು ನಿರ್ಧರಿಸಲಾಗಿದೆ, “ಈ ಚರ್ಚೆ ನಡೆಯಬೇಕು” ಎಂದು ಅವರು ಪ್ರತಿಪಾದಿಸಿದ್ದಾರೆ.

ಅದಾನಿ ಗ್ರೂಪ್ ಸಂಸ್ಥಾಪಕ ಗೌತಮ್ ಅದಾನಿ ವಿರುದ್ಧದ ಹಣಕಾಸು ಅವ್ಯವಹಾರದ ಆರೋಪಗಳ ಬಗ್ಗೆ ಸದನದಲ್ಲಿ ಚರ್ಚೆ ನಡೆಸಲು ನರೇಂದ್ರ ಮೋದಿ ಸರ್ಕಾರ ಬಯಸುವುದಿಲ್ಲ ಎಂದು ಅವರು ಆರೋಪಿಸಿದ್ದಾರೆ. “ಅವರು ಸಮಸ್ಯೆಯನ್ನು ಬೇರೆಡೆಗೆ ತಿರುಗಿಸಲು ಬಯಸುತ್ತಾರೆ, ಆದರೆ ನಾವು ಈ ವಿಷಯವನ್ನು ಎತ್ತುತ್ತಲೇ ಇರುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನವೆಂಬರ್ 20 ರಂದು, ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಮತ್ತು ಇತರ ಆರು ಮಂದಿಯನ್ನು ನ್ಯೂಯಾರ್ಕ್‌ನಲ್ಲಿ ಭಾರತದಲ್ಲಿ ಸೌರ ಯೋಜನೆಗಳ ಕುರಿತಾದ ಪ್ರಕರಣದಲ್ಲಿ ದೋಷಾರೋಪಣೆ ಮಾಡಲಾಗಿದೆ. ಆದಾಗ್ಯೂ, ಅದಾನಿ ಗ್ರೂಪ್ ಆರೋಪಗಳನ್ನು ನಿರಾಕರಿಸಿದ್ದು ಅವುಗಳನ್ನು ಆಧಾರರಹಿತ ಎಂದು ಹೇಳಿದೆ. ಈ ಆರೋಪದ ನಂತರ ರಾಹುಲ್ ಗಾಂಧಿ ಅವರು ಅದಾನಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಪಂಚಮಸಾಲಿ ಸಮುದಾಯವನ್ನು ‘ಪ್ರವರ್ಗ-2ಎ’ಗೆ ಸೇರಿಸದಂತೆ ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹ; ಸಿಎಂಗೆ ಮನವಿ ಸಲ್ಲಿಕೆ

ಪಂಚಮಸಾಲಿ ಸಮುದಾಯವನ್ನು ‘ಪ್ರವರ್ಗ-2ಎ’ಗೆ ಸೇರಿಸದಂತೆ ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹ; ಸಿಎಂಗೆ ಮನವಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...