Homeಮುಖಪುಟಮಹಾರಾಷ್ಟ್ರ ಚುನಾವಣೆಯ ವೇಳೆ ಬಳಸಿದ 'ವೋಟ್ ಜಿಹಾದ್' ನಂತಹ ಪದಗಳ ಬಗ್ಗೆ ವಿಶ್ಲೇಷಿಸಲಾಗುತ್ತಿದೆ: ಚುನಾವಣಾ ಅಧಿಕಾರಿ

ಮಹಾರಾಷ್ಟ್ರ ಚುನಾವಣೆಯ ವೇಳೆ ಬಳಸಿದ ‘ವೋಟ್ ಜಿಹಾದ್’ ನಂತಹ ಪದಗಳ ಬಗ್ಗೆ ವಿಶ್ಲೇಷಿಸಲಾಗುತ್ತಿದೆ: ಚುನಾವಣಾ ಅಧಿಕಾರಿ

- Advertisement -
- Advertisement -

ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಕೆಲವು ರಾಜಕೀಯ ಪಕ್ಷಗಳು ಬಳಸಿದ “ವೋಟ್ ಜಿಹಾದ್” ನಂತಹ ವಿವಾದಾತ್ಮಕ ನುಡಿಗಟ್ಟುಗಳನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಪರಿಶೀಲನೆ ನಡೆಸುತ್ತಿದೆ ಎಂದು ಮಹಾರಾಷ್ಟ್ರ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಡಾ.ಕಿರಣ್ ಕುಲಕರ್ಣಿ ಅವರು ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಬುಧವಾರ ತಿಳಿಸಿದ್ದಾರೆ. ಮಹಾರಾಷ್ಟ್ರ ಚುನಾವಣೆಯ

ಮಹಾರಾಷ್ಟ್ರ ಚುನಾವಣೆಯ ಸಂದರ್ಭದಲ್ಲಿ 650 ಕ್ಕೂ ಹೆಚ್ಚು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗಿದೆ ಎಂದು ಕಾನೂನು ಜಾರಿ ಸಂಸ್ಥೆಗಳು ಖಚಿತಪಡಿಸಿಕೊಳ್ಳುತ್ತವೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರ ಚುನಾವಣೆಯ

‘ವೋಟ್ ಜಿಹಾದ್’ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಅದರ ವಿರುದ್ಧ ಮುಂದಿನ ಕ್ರಮವನ್ನು ತೆಗೆದುಕೊಳ್ಳುವ ಮೊದಲು ಕೇಂದ್ರ ಚುನವಣಾ ಆಯೋಗವು ಕಾನೂನು, ಭಾಷಾ ಮತ್ತು ಸಾಮಾಜಿಕ ಡೊಮೇನ್‌ಗಳಾದ್ಯಂತ ಅದರ ಪರಿಣಾಮಗಳನ್ನು ಎಚ್ಚರಿಕೆಯಿಂದ ವಿಶ್ಲೇಷಿಸುತ್ತಿದೆ. ನಾವು ‘ವೋಟ್ ಜಿಹಾದ್’ ನಂತಹ ಪದಗಳೊಂದಿಗೆ ಬಹಳ ಜಾಗರೂಕರಾಗಿರಬೇಕು ಏಕೆಂದರೆ ಅವು ಗಂಭೀರ ಪರಿಣಾಮಗಳನ್ನು ಹೊಂದಿವೆ.” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇದು ಸಂಪೂರ್ಣ ಅಧ್ಯಯನದ ಅಗತ್ಯವಿರುವ ಹೊಸ ನುಡಿಗಟ್ಟು. ಕಾನೂನು, ಭಾಷಾ, ಸಾಮಾಜಿಕ ಮತ್ತು ಧಾರ್ಮಿಕ ಅಂಶಗಳನ್ನು ಪರಿಗಣಿಸಬೇಕಾಗಿದೆ. ಮುಖ್ಯ ಚುನಾವಣಾ ಅಧಿಕಾರಿ ಮತ್ತು ನಾನು ಸೇರಿದಂತೆ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ಇದನ್ನು ವಿಶ್ಲೇಷಿಸುತ್ತಿದ್ದಾರೆ. ಈ ಎಲ್ಲಾ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿದ ನಂತರ ನಾವು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ” ಅವರು ಹೇಳಿದ್ದಾರೆ.

ಇಂತಹ ವಿವಾದಾತ್ಮಕ ನುಡಿಗಟ್ಟುಗಳು ಚುನಾವಣಾ ಭಾಷಣದ ಮೇಲೆ ಪರಿಣಾಮ ಬೀರಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆತುರದ ತೀರ್ಮಾನಗಳನ್ನು ತೆಗೆದುಕೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ. “ಇದು ದೀರ್ಘಾವಧಿಯ ಪ್ರಕ್ರಿಯೆಯಾಗಿದೆ. ಪದಗಳು ಮತ್ತು ಅವುಗಳ ಉಲ್ಲೇಖಗಳನ್ನು ವ್ಯಾಖ್ಯಾನಿಸಬೇಕು ಮತ್ತು ಕೂಲಂಕಷವಾಗಿ ವಿಶ್ಲೇಷಿಸಬೇಕು. ಹೊಸ ಪರಿಭಾಷೆಗೆ ಕಾನೂನು ಚೌಕಟ್ಟು ಇಲ್ಲ, ಆದ್ದರಿಂದ ನಾವು ಅಂತಹ ವಿಷಯಗಳನ್ನು ಅವುಗಳ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ನಿರ್ವಹಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಚುನಾವಣೆ ನಡೆದಿತ್ತು ಮತ್ತು ಮೂರು ದಿನಗಳ ನಂತರ ಮತಗಳನ್ನು ಎಣಿಕೆ ಮಾಡಲಾಯಿತು. ಚುನಾವಣೆ ಹಿನ್ನಲೆ ಅಕ್ಟೋಬರ್ 15 ರಂದು ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿತ್ತು.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗಾಗಿ ರಾಜ್ಯದಲ್ಲಿ ಒಟ್ಟು 659 ಪ್ರಕರಣಗಳು ದಾಖಲಾಗಿದೆ. ಈ ವರ್ಷದ ಆರಂಭದಲ್ಲಿ ನಡೆದ ಲೋಕಸಭೆ ಚುನಾವಣೆಯ ವೇಳೆ ದಾಖಲಾದ 366 ಪ್ರಕರಣಗಳಿಗಿಂತ ಇದು ಹೆಚ್ಚಾಗಿದೆ. “ನಮ್ಮ ತನಿಖಾ ಸಂಸ್ಥೆಗಳು ಲೋಕಸಭೆಯ ಪ್ರಕರಣಗಳಲ್ಲಿ ಈಗಾಗಲೇ ನ್ಯಾಯಾಲಯಗಳಲ್ಲಿ 300 ಚಾರ್ಜ್‌ಶೀಟ್‌ಗಳನ್ನು ಸಲ್ಲಿಸುವುದರೊಂದಿಗೆ ಅತ್ಯುತ್ತಮ ಕೆಲಸ ಮಾಡಿದೆ” ಎಂದು ಅವರು ಹೇಳಿದ್ದಾರೆ.

ವಿಧಾನಸಭಾ ಚುನಾವಣಾ ಪ್ರಕರಣಗಳ ಕುರಿತು ಮಾತನಾಡಿದ ಅವರು, “ನಾವು ಶ್ರದ್ಧೆಯಿಂದ ಕೆಲಸ  ಮಾಡುತ್ತಿದ್ದೇವೆ. ನಮ್ಮ ಕಾನೂನು ಜಾರಿ ಸಂಸ್ಥೆಗಳು ತನಿಖೆ ನಡೆಸುತ್ತಿವೆ ಮತ್ತು ಈ ಪ್ರಕರಣಗಳು ತಾರ್ಕಿಕ ಅಂತ್ಯವನ್ನು ತಲುಪುವುದನ್ನು ಖಚಿತಪಡಿಸಿಕೊಳ್ಳಲು ನ್ಯಾಯಾಲಯಗಳಿಗೆ ಎಲ್ಲಾ ಆರೋಪಪಟ್ಟಿಗಳನ್ನು ಸಲ್ಲಿಸಲಾಗುವುದು” ಎಂದು ಅವರು ಹೇಳಿದ್ದಾರೆ. ಆದರೆ, ಅದರ ವಿರುದ್ಧದ ಕ್ರಮದ ಸಮಯವು ನ್ಯಾಯಾಂಗವನ್ನು ಅವಲಂಬಿಸಿರುತ್ತದೆ ಎಂದು ಅವರು ಹೇಳಿದ್ದಾರೆ.

“ಇವು ಕ್ರಿಮಿನಲ್ ಪ್ರಕರಣಗಳಾಗಿದ್ದು, ಆದ್ದರಿಂದ ಅವರು ಸರಿಯಾದ ಪ್ರಕ್ರಿಯೆಯನ್ನು ಅನುಸರಿಸುತ್ತಾರೆ. ಚುನಾವಣಾ ಸಂಬಂಧಿತ ಅಪರಾಧಗಳ ಬಗ್ಗೆ ನ್ಯಾಯಾಲಯಗಳು ಗಂಭೀರವಾಗಿರುತ್ತವೆ ಮತ್ತು ನಾವು ತ್ವರಿತ ಪರಿಹಾರಕ್ಕಾಗಿ ವಿನಂತಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ. ದ್ವೇಷ ಭಾಷಣಗಳ ಪ್ರಕರಣಗಳನ್ನು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ವ್ಯವಹರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿರಿಯಾ | ಭಾರತದ 75 ನಾಗರಿಕರ ಸ್ಥಳಾಂತರ – ಕೇಂದ್ರ ಸರ್ಕಾರ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...