Homeಮುಖಪುಟಜಾರ್ಖಂಡ್ | ಖಾಸಗಿ ಕಂಪನಿಯಲ್ಲಿ ಸ್ಥಳೀಯರಿಗೆ 75% ಮೀಸಲಾತಿ ಕಾನೂನಿಗೆ ಹೈಕೋರ್ಟ್ ತಡೆ

ಜಾರ್ಖಂಡ್ | ಖಾಸಗಿ ಕಂಪನಿಯಲ್ಲಿ ಸ್ಥಳೀಯರಿಗೆ 75% ಮೀಸಲಾತಿ ಕಾನೂನಿಗೆ ಹೈಕೋರ್ಟ್ ತಡೆ

- Advertisement -
- Advertisement -

ಜಾರ್ಖಂಡ್‌ನ ಹೇಮಂತ್ ಸೊರೆನ್ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಜಾರ್ಖಂಡ್ ಹೈಕೋರ್ಟ್ ಬುಧವಾರ ರಾಜ್ಯದ ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ 75% ಮೀಸಲಾತಿ ಜಾರಿಗೆ ತಡೆಯಾಜ್ಞೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎಂ.ಎಸ್. ರಾಮಚಂದ್ರ ರಾವ್ ಮತ್ತು ನ್ಯಾಯಮೂರ್ತಿ ದೀಪಕ್ ರೋಷನ್ ಅವರಿದ್ದ ವಿಭಾಗೀಯ ಪೀಠವು ತೀರ್ಪು ನೀಡಿದ್ದು, ಈ ವಿಷಯದ ಬಗ್ಗೆ ಪ್ರತಿಕ್ರಿಯಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿದೆ.

ಜಾರ್ಖಂಡ್ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಅಜಯ್ ಪಚೇರಿವಾಲಾ ಅವರು ಖಾಸಗಿ ಕಂಪನಿಗಳಲ್ಲಿ ಸ್ಥಳೀಯ ನಿವಾಸಿಗಳಿಗೆ 75% ರಷ್ಟು ಮೀಸಲಾತಿ ನೀಡುವ ಸಂಬಂಧ ‘ಜಾರ್ಖಂಡ್ ರಾಜ್ಯ ಖಾಸಗಿ ವಲಯದ ಸ್ಥಳೀಯ ಅಭ್ಯರ್ಥಿಯ ಉದ್ಯೋಗ ಕಾಯಿದೆ-2021’ ಅನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ಅದನ್ನು ರದ್ದು ಮಾಡುವಂತೆ ಒತ್ತಾಯಿಸಿದ್ದರು.

75% ಹುದ್ದೆಗಳನ್ನು ಸ್ಥಳೀಯರಿಗೆ ಮೀಸಲಿಡಬೇಕೆಂಬ ಕಾನೂನು ಸಮಾನತೆ, ತಾರತಮ್ಯ ಮತ್ತು ವ್ಯವಹಾರ ನಡೆಸುವ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಪಚೇರಿವಾಲಾ ನ್ಯಾಯಾಲಯದಲ್ಲಿ ವಾದಿಸಿದ್ದು, ಕಾನೂನು ಅಸಂವಿಧಾನಿಕ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ಹಿಂದೆ ಹರ್ಯಾಣ ಸರ್ಕಾರ ಜಾರಿಗೊಳಿಸಿದ ಇದೇ ರೀತಿಯ ಕಾನೂನನ್ನು ಪಂಜಾಬ್-ಹರಿಯಾಣ ಹೈಕೋರ್ಟ್ ರದ್ದುಗೊಳಿಸಿದೆ ಎಂದು ಅರ್ಜಿದಾರರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಖಾಸಗಿ ವಲಯದ ಸ್ಥಳೀಯ ಅಭ್ಯರ್ಥಿಗಳ ಜಾರ್ಖಂಡ್ ರಾಜ್ಯ ಉದ್ಯೋಗ ಮಸೂದೆ 2021 ಅನ್ನು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಅಂಗೀಕರಿಸಲಾಗಿತ್ತು. ಇದರ ಅಡಿಯಲ್ಲಿ ಖಾಸಗಿ ವಲಯದಲ್ಲಿ ಮಾಸಿಕ 40,000 ರೂ.ವರೆಗಿನ ಉದ್ಯೋಗಗಳಲ್ಲಿ ಸ್ಥಳೀಯರಿಗೆ 75% ಮೀಸಲಾತಿಯನ್ನು ಖಾತ್ರಿಪಡಿಸಲಾಗುತ್ತದೆ. “ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಪ್ರಕ್ರಿಯೆಯಲ್ಲಿ, ಸಂಬಂಧಪಟ್ಟ ಸಂಸ್ಥೆಯ ಸ್ಥಾಪನೆ, ಸಂಬಂಧಪಟ್ಟ ಜಿಲ್ಲೆಯ ಸ್ಥಳೀಯ ಅಭ್ಯರ್ಥಿಗಳು ಮತ್ತು ಸಮಾಜದ ಎಲ್ಲಾ ವರ್ಗಗಳ ಪ್ರಾತಿನಿಧ್ಯಕ್ಕೆ ಗಮನ ನೀಡಲಾಗುವುದು” ಎಂದು ಕಾಯಿದೆಯು ಖಚಿತಪಡಿಸುತ್ತದೆ.

ಸ್ಥಳೀಯ ಶಾಸಕ, ಉಪ ಅಭಿವೃದ್ಧಿ ಆಯುಕ್ತ (ಡಿಡಿಸಿ) ಮತ್ತು ಸರ್ಕಲ್ ಆಫೀಸರ್ (ಸಿಒ) ಅವರನ್ನು ಒಳಗೊಂಡಿರುವ ಗೊತ್ತುಪಡಿಸಿದ ಅಧಿಕಾರಿಯ ನೇತೃತ್ವದ ಸಮಿತಿಯ ರಚನೆಗೆ ಸಹ ಅಧಿಕಾರ ಒದಗಿಸುತ್ತದೆ. ಈ ಸಮಿತಿ ಉದ್ಯೋಗದ ಕಾರ್ಯವಿಧಾನವನ್ನು ಮೇಲ್ವಿಚಾರಣೆ ಮಾಡಲು ಮತ್ತು ಸೂಕ್ತವಾದ ಉದ್ಯೋಗದಾತರಿಗೆ ನಿರ್ದೇಶನಗಳನ್ನು ನೀಡುತ್ತದೆ.

ಮಸೂದೆಯನ್ನು ಜಾರ್ಖಂಡ್ ವಿಧಾನಸಭೆಯ ಆಯ್ಕೆ ಸಮಿತಿಯು ಕೆಲವು ಬದಲಾವಣೆಗಳೊಂದಿಗೆ ಈ ಹಿಂದೆ ಅನುಮೋದಿಸಿತ್ತು. ಇದನ್ನು ಮಾರ್ಚ್ 2021 ರಲ್ಲಿ ಬಜೆಟ್ ಅಧಿವೇಶನದಲ್ಲಿ ಮಂಡಿಸಲಾಯಿತು ಮತ್ತು ಸ್ಪೀಕರ್ ರವೀಂದ್ರ ನಾಥ್ ಮಹ್ತೋ ಅವರು ರಚಿಸಿದ ಆರು ಸದಸ್ಯರ ಆಯ್ಕೆ ಸಮಿತಿಗೆ ಪರಿಶೀಲನೆಗಾಗಿ ಉಲ್ಲೇಖಿಸಲಾಗಿತ್ತು.

ಕಾರ್ಮಿಕ ಸಚಿವ ಸತ್ಯಾನಂದ ಭೋಕ್ತಾ ಅವರ ಅಧ್ಯಕ್ಷತೆಯ ಸಮಿತಿಯು ತಿದ್ದುಪಡಿ ಮಸೂದೆಯಲ್ಲಿ “ಖಾಸಗಿ ವಲಯ” ಪದಗಳನ್ನು ಸೇರಿಸಿ, ಅದರ ಹೆಸರನ್ನು ‘ಜಾರ್ಖಂಡ್ ರಾಜ್ಯ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಮಸೂದೆ, 2021’ ಎಂಬ ಹೆಸರಿನಿಂದ ‘ಖಾಸಗಿ ವಲಯದ ಸ್ಥಳೀಯ ಅಭ್ಯರ್ಥಿಗಳ ಜಾರ್ಖಂಡ್ ರಾಜ್ಯ ಉದ್ಯೋಗ ಮಸೂದೆ, 2021’ ಎಂದು ಬದಲಾಯಿಸಿತ್ತು. ತಿದ್ದುಪಡಿ ಮಾಡಿದ ಮಸೂದೆಯು ವೇತನ ಮಿತಿಯನ್ನು ಈ ಹಿಂದೆ ಇದ್ದ 30,000 ರೂ.ಗಳಿಂದ 40,000 ರೂ.ಗೆ ಹೆಚ್ಚಿಸಿದೆ.

ಇದನ್ನೂ ಓದಿ: ‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

ಇದನ್ನೂ ಓದಿ: ‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

ಇದನ್ನೂ ಓದಿ: ‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

ಇದನ್ನೂ ಓದಿ: ‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...