Homeಮುಖಪುಟ'ಒಬ್ಬ ವ್ಯಕ್ತಿಗಾಗಿ 142 ಕೋಟಿ ಜನರನ್ನು ಕಡೆಗಣಿಸಲಾಗಿದೆ' : ಪ್ರಿಯಾಂಕಾ ಗಾಂಧಿ

‘ಒಬ್ಬ ವ್ಯಕ್ತಿಗಾಗಿ 142 ಕೋಟಿ ಜನರನ್ನು ಕಡೆಗಣಿಸಲಾಗಿದೆ’ : ಪ್ರಿಯಾಂಕಾ ಗಾಂಧಿ

- Advertisement -
- Advertisement -

ಲೋಕಸಭೆಯಲ್ಲಿ ಇಂದು(ಡಿ.13)ಚೊಚ್ಚಲ ಭಾಷಣ ಮಾಡಿದ ವಯನಾಡ್ ಸಂಸದೆ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅದಾನಿ ವಿಷಯವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ದ ಗುಡುಗಿದರು.

ಕೇಂದ್ರದ ಬಿಜೆಪಿ ಸರ್ಕಾರವು ಭಾರತೀಯ ಜನತೆಯ ವೆಚ್ಚದಲ್ಲಿ ಕೈಗಾರಿಕೋದ್ಯಮಿ ಗೌತಮ್ ಅದಾನಿ ಕಡೆಗೆ ಅನಗತ್ಯ ಒಲವು ತೋರುತ್ತಿದೆ ಎಂದು ಆರೋಪಿಸಿದರು. 142 ಕೋಟಿ ನಾಗರಿಕರ ಕಲ್ಯಾಣಕ್ಕಿಂತ ಒಬ್ಬ ವ್ಯಕ್ತಿಯ ಹಿತಾಸಕ್ತಿಗಳಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದರು.

“ದೇಶದ ಸಂಪತ್ತು, ವಿಮಾನ ನಿಲ್ದಾಣಗಳು ಮತ್ತು ಭೂಮಿಯನ್ನು ಒಬ್ಬ ವ್ಯಕ್ತಿಗೆ ಅನುಕೂಲವಾಗುವಂತೆ ಹಸ್ತಾಂತರಿಸಲಾಗುತ್ತಿದೆ. ಬಡ ಭಾರತೀಯರು ಸಂಕಷ್ಟದಲ್ಲಿದ್ದಾರೆ. ಸಾರ್ವಜನಿಕ ಸಂಪನ್ಮೂಲಗಳ ಈ ಘೋರ ದುರುಪಯೋಗ ಒಪ್ಪುವಂತದಲ್ಲ ಎಂದು ಪ್ರಿಯಾಂಕಾ ಹೇಳಿದರು.

ಎನ್‌ಡಿಎ ಸರ್ಕಾರವು ಭಿನ್ನಾಭಿಪ್ರಾಯವನ್ನು ಮೌನಗೊಳಿಸಲು ತನಿಖಾ ಸಂಸ್ಥೆಗಳನ್ನು ಅಸ್ತ್ರವಾಗಿ ಬಳಸುತ್ತಿದೆ ಎಂದು ಇದೇ ವೇಳೆ ಪ್ರಿಯಾಂಕಾ ಗಾಂಧಿ ಆರೋಪಿಸಿದರು. ವಿರೋಧ ಪಕ್ಷದ ನಾಯಕರ ಧ್ವನಿಯನ್ನು ಹತ್ತಿಕ್ಕಲು ಅವರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ, ಈ ಅಧಿಕಾರ ದುರ್ಬಳಕೆ ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ” ಎಂದರು.

ಎನ್‌ಡಿಎ ಸರ್ಕಾರ ತನ್ನ ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ನಂತಹ ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ ಎಂಬ ಪ್ರತಿಪಕ್ಷ ನಾಯಕರ ಆರೋಪವನ್ನು ಪ್ರಿಯಾಂಕಾ ಪುನರುಚ್ಚರಿಸಿದರು.

ಲೋಕಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಪ್ರಿಯಾಂಕಾ ಅವರು, ಸತ್ಯ ಮತ್ತು ಅಹಿಂಸೆಯ ತತ್ವಗಳಲ್ಲಿ ಬೇರೂರಿರುವ ಭಾರತದ ಸ್ವಾತಂತ್ರ್ಯ ಚಳವಳಿಯ ವಿಶಿಷ್ಟ ಸ್ವರೂಪವನ್ನು ಒತ್ತಿ ಹೇಳಿದರು.

ಭಾರದ ಸಂವಿಧಾನವನ್ನು ‘ಪರಿವರ್ತಕ ಶಕ್ತಿ’ ಎಂದು ಶ್ಲಾಘಿಸಿದ ಪ್ರಿಯಾಂಕಾ, ಸಂವಿಧಾನ ನಾಗರಿಕರಿಗೆ ತಮ್ಮ ಹಕ್ಕು ಮತ್ತು ನ್ಯಾಯವನ್ನು ಪಡೆಯಲು ಅವಕಾಶ ನೀಡಿದೆ ಎಂದರು.

“ಸಂವಿಧಾನವು ಜನರಿಗೆ ತಮ್ಮ ಹಕ್ಕು ಮತ್ತು ನ್ಯಾಯವನ್ನು ಕೇಳಿ ಪಡೆಯುವ ಅವಕಾಶ ನೀಡಿದೆ. ಅಗತ್ಯವಿದ್ದಾಗ ಸರ್ಕಾರದ ವಿರುದ್ಧ ಧ್ವನಿ ಎತ್ತುವ ಸಾಮರ್ಥ್ಯವನ್ನು ಕೊಟ್ಟಿದೆ ಎಂದು ಕೊಂಡಾಡಿದರು.ಪ್ರಜಾಪ್ರಭುತ್ವ ಮತ್ತು ಹೊಣೆಗಾರಿಕೆಯನ್ನು ಎತ್ತಿಹಿಡಿಯುವಲ್ಲಿ ಅದರ ಪಾತ್ರವನ್ನು ಒತ್ತಿ ಹೇಳಿದರು.

ಎನ್‌ಡಿಎ ಹೆಚ್ಚು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾದರೆ, ಅದು ಖಂಡಿತವಾಗಿಯೂ ಸಂವಿಧಾನದ ಅಂಶಗಳನ್ನು ಬದಲಾಯಿಸುತ್ತದೆ. ಬಡ ಜನರು ಮತ್ತು ಬುಡಕಟ್ಟು ಜನಾಂಗದವರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂದು ಪ್ರಿಯಾಂಕಾ ಗಾಂಧಿ ತಿಳಿಸಿದರು.

ರೈತರ ಸಂಕಷ್ಟದ ಬಗ್ಗೆ ಸರ್ಕಾರ ನಿರಾಸಕ್ತಿ ತೋರುತ್ತಿದೆ ಎಂದ ಪ್ರಿಯಾಂಕಾ, “ದೇಶದ ರೈತರು ಅಳುತ್ತಿದ್ದಾರೆ, ಆದರೆ ಸರ್ಕಾರ ಅವರ ಬಗ್ಗೆ ಕಾಳಜಿ ವಹಿಸುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಸ್ತುತ ಸವಾಲುಗಳನ್ನು ಎದುರಿಸುವ ಬದಲು ಬಿಜೆಪಿ ಹಳೆಯ ವಿಷಯಗಳನ್ನು ಕೆದಕುತ್ತಿದೆ ಎಂದು ವಯನಾಡ್ ಸಂಸದೆ ಟೀಕಿಸಿದರು.ಬಿಜೆಪಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ದೂಷಿಸುವ ಕೆಲಸ ಮಾಡುತ್ತಿದೆ. ಈಗ ದೇಶಕ್ಕೆ ಅಗತ್ಯವಿರುವ ಬದಲಾವಣೆಗಳನ್ನು ಜಾರಿಗೆ ತರಲು ಅದು ಏನನ್ನೂ ಮಾಡಿಲ್ಲ” ಎಂದು ಪ್ರಿಯಾಂಕಾ ಕಿಡಿಕಾರಿದರು.

ಇದನ್ನೂ ಓದಿ : ದೆಹಲಿ ಚುನಾವಣೆ | ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...