ವಿರೋಧ ಪಕ್ಷವು ಹಂಗೇರಿಯನ್ ಅಮೆರಿಕನ್ ಉದ್ಯಮಿ ಮತ್ತು ಲೋಕೋಪಕಾರಿ ಜಾರ್ಜ್ ಸೊರೊಸ್ ಅವರೊಂದಿಗೆ ಪಿತೂರಿ ನಡೆಸುತ್ತಿದೆ ಎಂದು ಪ್ರತಿಪಾದಿಸಿ “ಮಾನಹಾನಿಕರ ಮತ್ತು ಅವಮಾನಕರ” ಹೇಳಿಕೆ ನೀಡಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿರುದ್ಧ ಕಾಂಗ್ರೆಸ್ ಗುರುವಾರ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ಪಕ್ಷವು ದೇಶವನ್ನು ಅಸ್ಥಿರಗೊಳಿಸುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವರ ವಿರುದ್ಧ ಹಕ್ಕುಚ್ಯುತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಬೇಕು ಎಂದು ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಿದ ನೋಟಿಸ್‌ನಲ್ಲಿ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಸೊರೊಸ್‌ನೊಂದಿಗೆ ಪಿತೂರಿ ನಡೆಸುತ್ತಿದೆ ಎಂದು ಆಡಳಿತಾರೂಢ ಬಿಜೆಪಿಯು ತನ್ನ ಆರೋಪಗಳನ್ನು ಪುನರುಚ್ಚರಿಸಿದ ನಂತರ ಸಂಸತ್ತಿನ ಉಭಯ ಸದನಗಳು ಕಳೆದ ಕೆಲವು ದಿನಗಳಲ್ಲಿ ಕೋಲಾಹಲಕ್ಕೆ ಸಾಕ್ಷಿಯಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮಣಿಪುರದಲ್ಲಿ ತನ್ನ ವೈಫಲ್ಯಗಳನ್ನು ಮರೆಮಾಚಲು ಕೇಂದ್ರದ ಎನ್‌ಡಿಎ ಸರ್ಕಾರವು ಸೊರೊಸ್ ಅವರನ್ನು ಗುರಾಣಿಯಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಬುಧವಾರ ಲೋಕಸಭೆಗೆ ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಮಣಿಪುರ ಇಡೀ ಮಾನವೀಯ ಬಿಕ್ಕಟ್ಟಿನಲ್ಲಿದೆ. ರಾಜ್ಯದಾದ್ಯಂತ ಜನರು ಭಯ ಮತ್ತು ಅನಿಶ್ಚಿತತೆಯಿಂದ ಬದುಕುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.
ಮೇ 2023 ರ ವೇಳೆ ರಾಜ್ಯದಲ್ಲಿ ಮೈತೇಯಿ ಮತ್ತು ಕುಕಿ-ಝೋ-ಹ್ಮಾರ್ಸ್ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆ ಪ್ರಾರಂಭವಾದಾಗಿನಿಂದ ಕನಿಷ್ಠ 258 ಜನರು ಸಾವನ್ನಪ್ಪಿದ್ದಾರೆ ಮತ್ತು 59,000 ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಕಳೆದ ನವೆಂಬರ್‌ನಲ್ಲಿ ರಾಜ್ಯದಲ್ಲಿ ಹಿಂಸಾಚಾರದಲ್ಲಿ ಏರಿಕೆ ಕಂಡುಬಂದಿದ್ದು, 22 ನವೆಂಬರ್‌ನಿಂದ ಕನಿಷ್ಠ 7 ಜನರು ಕೊಲ್ಲಲ್ಪಟ್ಟಿದ್ದಾರೆ.
ಮಣಿಪುರದ ಪರಿಸ್ಥಿತಿಯನ್ನು ಉನ್ನತ ಮಟ್ಟದಲ್ಲಿ ನಿಭಾಯಿಸಲಾಗುತ್ತಿದೆ ಎಂದು ಸಚಿವ ಪಿಯೂಷ್ ಗೋಯಲ್ ಪ್ರತಿಕ್ರಿಯಿಸಿದ್ದಾರೆ. “ಅವರು ಇದಕ್ಕೆ [ಕಾಂಗ್ರೆಸ್] ಪ್ರತಿಕ್ರಿಯಿಸಬೇಕು. ಜಾರ್ಜ್ ಸೊರೊಸ್ ಮತ್ತು ಈ ಎಲ್ಲಾ ಆಂತರಿಕ ಗೊಂದಲಗಳ ನಡುವೆ ಏನು ಸಂಬಂಧವಿದೆ ಎಂಬುದನ್ನು ರಾಷ್ಟ್ರಕ್ಕೆ ತಿಳಿಸಬೇಕು. ದೇಶದಲ್ಲಿನ ಆಂತರಿಕ ಗೊಂದಲಗಳಿಗೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಿದ್ದು, ಅವರು ವಿದೇಶಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.
ರಾಜ್ಯದ ಪರಿಸ್ಥಿತಿಗೆ ಕಾಂಗ್ರೆಸ್ “ಮಾತ್ರ ಹೊಣೆ” ಎಂದು ಗೋಯಲ್ ಹೇಳಿದ್ದಾರೆ. “ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ಅವರಿಗೆ ಏನು ಸಂಬಂಧವಿದೆ?… ಇದಕ್ಕೆ ಕಾರಣ ಕಾಂಗ್ರೆಸ್ ಪಕ್ಷ ಮತ್ತು ಜಾರ್ಜ್ ಸೊರೊಸ್ ಅವರಂತಹ ಅನುದಾನಿತ ಸಂಸ್ಥೆಗಳು ಭಾರತದ ಆರ್ಥಿಕತೆಯನ್ನು ಅಸ್ಥಿರಗೊಳಿಸುತ್ತಿವೆ” ಎಂದು ಅವರು ಹೇಳಿದ್ದಾರೆ.
ಈ ಹೇಳಿಕೆ ವಿರುದ್ಧ ಗುರುವಾರ ಬಿರ್ಲಾ ಅವರಿಗೆ ನೀಡಿದ ನೋಟಿಸ್‌ನಲ್ಲಿ ಕಾಂಗ್ರೆಸ್ ಸಂಸದ ಟಾಗೋರ್ ಅವರು, ಸಚಿವ ಗೊಗೋಯ್ ಅವರ ಟೀಕೆಗಳನ್ನು ಉಲ್ಲೇಖಿಸಿದ್ದಾರೆ. “ಸಚಿವರು ಸದನದಲ್ಲಿ ಇಂತಹ ಅವಹೇಳನಕಾರಿ ಉಲ್ಲೇಖಗಳನ್ನು ಮಾಡಲು ಅವಕಾಶ ನೀಡಿರುವುದು ತುಂಬಾ ಆಶ್ಚರ್ಯಕರವಾಗಿದೆ” ಎಂದು ಹೇಳಿದರು. ಸಚಿವರ ಈ ಟೀಕೆಗಳು “ಮಾನಹಾನಿಕರ ಮತ್ತು ಅಮಾನವೀಯ” ಎಂದು ಹೇಳಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.
ಇದನ್ನೂ ಓದಿ: ‘ಒಬ್ಬ ವ್ಯಕ್ತಿಗಾಗಿ, 142 ಕೋಟಿ ಜನರನ್ನು ಕಡೆಗಣಿಸಲಾಗಿದೆ’ : ಪ್ರಿಯಾಂಕಾ ಗಾಂಧಿ
‘ಒಬ್ಬ ವ್ಯಕ್ತಿಗಾಗಿ 142 ಕೋಟಿ ಜನರನ್ನು ಕಡೆಗಣಿಸಲಾಗಿದೆ’ : ಪ್ರಿಯಾಂಕಾ ಗಾಂಧಿ
ಇದನ್ನೂ ಓದಿ: ದಲಿತ ಯುವಕ ಆತ್ಮಹತ್ಯೆ ಪ್ರಕರಣ: ಪೊಲೀಸರ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊರಿಸುವಂತೆ ಕೋರ್ಟ್ ನಿರ್ದೇಶನ
ಇದನ್ನೂ ಓದಿ: ದಲಿತ ಯುವಕ ಆತ್ಮಹತ್ಯೆ ಪ್ರಕರಣ: ಪೊಲೀಸರ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊರಿಸುವಂತೆ ಕೋರ್ಟ್ ನಿರ್ದೇಶನ


