Homeಮುಖಪುಟಧನಕರ್ ವಿರುದ್ಧದ ಅವಿಶ್ವಾಸ ನಿರ್ಣಯ ವೇಳೆ ತೀವ್ರ ವಾಗ್ವಾದ - ರಾಜ್ಯಸಭೆ ಅಧಿವೇಶನ ಡಿಸೆಂಬರ್ 16...

ಧನಕರ್ ವಿರುದ್ಧದ ಅವಿಶ್ವಾಸ ನಿರ್ಣಯ ವೇಳೆ ತೀವ್ರ ವಾಗ್ವಾದ – ರಾಜ್ಯಸಭೆ ಅಧಿವೇಶನ ಡಿಸೆಂಬರ್ 16 ಕ್ಕೆ ಮುಂದೂಡಿಕೆ

- Advertisement -
- Advertisement -

ರಾಜ್ಯಸಭಾ ಸ್ಪೀಕರ್ ಜಗದೀಪ್ ಧನಕರ್ ವಿರುದ್ಧದ ಅವಿಶ್ವಾಸ ನಿರ್ಣಯದ ಕುರಿತು ಆಡಳಿತರೂಢ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದದ ನಂತರ ರಾಜ್ಯಸಭೆಯನ್ನು ಡಿಸೆಂಬರ್ 16 ಕ್ಕೆ ಶುಕ್ರವಾರ ಮುಂದೂಡಲಾಗಿದೆ. ಪ್ರತಿಪಕ್ಷಗಳು ಪ್ರಸ್ತಾವನೆಯ ಮೇಲೆ ಚರ್ಚೆಗೆ ಒತ್ತಾಯಿಸುತ್ತಿದ್ದಂತೆ ಕೋಲಾಹಲ ಉಂಟಾಗಿದ್ದು, ಆದರೆ ಆಡಳಿತರೂಢ ಪಕ್ಷಗಳು ಆಕ್ಷೇಪಿಸಿದವು. ಈ ವೇಳೆ ಸದನದಲ್ಲಿ ಗೊಂದಲ ಉಂಟಾಗಿ ಕಲಾಪ ಮುಂದೂಡಿಕೆಗೆ ಕಾರಣವಾಯಿತು.

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರನ್ನು ‘ಅತ್ಯಂತ ಪಕ್ಷಪಾತಿ’ ಎಂದು ಆರೋಪಿಸಿರುವ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಅವಿಶ್ವಾಸ ನಿರ್ಣಯದ ನೋಟಿಸ್ ಅನ್ನು ಮಂಡಿಸಿವೆ. ಗದ್ದಲದ ನಡುವೆಯೇ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಧನಕರ್ ಅವಕಾಶ ನೀಡಿದ್ದಾರೆ. ಧನಕರ್ ವಿರುದ್ಧದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಡಳಿತರೂಢ ಪೀಠದಿಂದ ಸಂಸದರಿಗೆ ಮಾತನಾಡಲು ಹೆಚ್ಚಿನ ಸಮಯಾವಕಾಶ ನೀಡುವ ಮೂಲಕ ಸಭಾಪತಿಗಳು ಒಲವು ತೋರುತ್ತಿದ್ದಾರೆ ಎಂದು ಆರೋಪಿಸಿದ ಖರ್ಗೆ, ಕಾಂಗ್ರೆಸ್‌ಗೆ ಅಗೌರವ ತೋರುತ್ತಿದ್ದಾರೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಧನಕರ್ ಅವರು ಖರ್ಗೆ ಮತ್ತು ಸಭಾನಾಯಕ ಜೆಪಿ ನಡ್ಡಾ ಅವರನ್ನು ಅಧ್ಯಕ್ಷರ ಚೇಂಬರ್‌ನಲ್ಲಿ ಬಿಕ್ಕಟ್ಟನ್ನು ಪರಿಹರಿಸುವ ಪ್ರಯತ್ನದಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನಿಸಿದ್ದಾರೆ. ನಂತರ ಅವರು ಡಿಸೆಂಬರ್ 16 ಕ್ಕೆ ಕಲಾಪವನ್ನು ಮುಂದೂಡಿದ್ದಾರೆ.

ಈ ನಡುವೆ, ವಿರೋಧ ಪಕ್ಷವು ಹಂಗೇರಿಯನ್ ಅಮೆರಿಕನ್ ಉದ್ಯಮಿ ಮತ್ತು ಲೋಕೋಪಕಾರಿ ಜಾರ್ಜ್ ಸೊರೊಸ್‌ ಅವರೊಂದಿಗೆ ಪಿತೂರಿ ನಡೆಸುತ್ತಿದೆ ಎಂದು ಪ್ರತಿಪಾದಿಸಿ “ಮಾನಹಾನಿಕರ ಮತ್ತು ಅವಮಾನಕರ” ಹೇಳಿಕೆ ನೀಡಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿರುದ್ಧ ಗುರುವಾರ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಪಕ್ಷವು ದೇಶವನ್ನು ಅಸ್ಥಿರಗೊಳಿಸುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವರ ವಿರುದ್ಧ ಹಕ್ಕುಚ್ಯುತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಬೇಕು ಎಂದು ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಿದ ನೋಟಿಸ್‌ನಲ್ಲಿ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಸೊರೊಸ್‌ನೊಂದಿಗೆ ಪಿತೂರಿ ನಡೆಸುತ್ತಿದೆ ಎಂದು ಆಡಳಿತಾರೂಢ ಬಿಜೆಪಿಯು ತನ್ನ ಆರೋಪಗಳನ್ನು ಪುನರುಚ್ಚರಿಸಿದ ನಂತರ ಸಂಸತ್ತಿನ ಉಭಯ ಸದನಗಳು ಕಳೆದ ಕೆಲವು ದಿನಗಳಲ್ಲಿ ಕೋಲಾಹಲಕ್ಕೆ ಸಾಕ್ಷಿಯಾಗುತ್ತಿವೆ.

ಇದನ್ನೂ ಓದಿ: ಸಿನಿಮಾ ಥಿಯೇಟರ್ ಕಾಲ್ತುಳಿದ ಪ್ರಕರಣದಲ್ಲಿ ಬಂಧನ; ನಟ ಅಲ್ಲು ಅರ್ಜುನ್ ಮೇಲಿನ ಆರೋಪಗಳೇನು?

ಸಿನಿಮಾ ಥಿಯೇಟರ್ ಕಾಲ್ತುಳಿದ ಪ್ರಕರಣದಲ್ಲಿ ಬಂಧನ; ನಟ ಅಲ್ಲು ಅರ್ಜುನ್ ಮೇಲಿನ ಆರೋಪಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...