Homeಮುಖಪುಟಮುಸ್ಲಿಮರನ್ನು 'ಎರಡನೇ ದರ್ಜೆಯ' ಪ್ರಜೆಗಳನ್ನಾಗಿಸುವ ಪ್ರಯತ್ನ ನಡೆಸಲಾಗುತ್ತಿದೆ: ಅಖಿಲೇಶ್ ಯಾದವ್

ಮುಸ್ಲಿಮರನ್ನು ‘ಎರಡನೇ ದರ್ಜೆಯ’ ಪ್ರಜೆಗಳನ್ನಾಗಿಸುವ ಪ್ರಯತ್ನ ನಡೆಸಲಾಗುತ್ತಿದೆ: ಅಖಿಲೇಶ್ ಯಾದವ್

- Advertisement -
- Advertisement -

ದೇಶದ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರನ್ನು “ಎರಡನೇ ದರ್ಜೆಯ” ಪ್ರಜೆಗಳನ್ನಾಗಿ ಮಾಡುವ ಪ್ರಯತ್ನಗಳು ನಡೆಯುತ್ತಿವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶುಕ್ರವಾರ ಆರೋಪಿಸಿದ್ದು, ಅವರ ಹಕ್ಕುಗಳು ಮತ್ತು ಆಸ್ತಿಗಳನ್ನು ವ್ಯವಸ್ಥಿತವಾಗಿ ನಾಶಪಡಿಸಲಾಗುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಮುಸ್ಲಿಮರನ್ನು ‘ಎರಡನೇ ದರ್ಜೆಯ’ ಪ್ರಜೆ

ಲೋಕಸಭೆಯಲ್ಲಿ ‘ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣ’ ಕುರಿತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅಖಿಲೇಶ್ ಯಾದವ್, ಅಸಮಾನತೆಯನ್ನು ಬೆಳೆಸುವ ಮತ್ತು ತಳ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ಎತ್ತಿಹಿಡಿಯುವಲ್ಲಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಮುಸ್ಲಿಮರನ್ನು ‘ಎರಡನೇ ದರ್ಜೆಯ’ ಪ್ರಜೆ

“ಈ ಸಂವಿಧಾನವು ನಮ್ಮ ರಕ್ಷಾಕವಚ, ನಮ್ಮ ಭದ್ರತೆ, ಇದು ನಮಗೆ ಅಗತ್ಯವಿರುವಾಗ ಶಕ್ತಿಯನ್ನು ನೀಡುತ್ತದೆ. ಸಂವಿಧಾನವು ತುಳಿತಕ್ಕೊಳಗಾದ, ನಿರ್ಲಕ್ಷಿಸಲ್ಪಟ್ಟ, ದಮನಕ್ಕೊಳಗಾದ ಮತ್ತು ವಂಚಿತರ ಹಕ್ಕುಗಳ ನಿಜವಾದ ಕಾವಲುಗಾರ. ನಮ್ಮಂತಹ ಜನರಿಗೆ ಮತ್ತು ದೇಶದ ದುರ್ಬಲರಿಗೆ, ವಿಶೇಷವಾಗಿ ಪಿಡಿಎ (ಪಿಚ್ಡೆ, ದಲಿತ ಮತ್ತು ಅಲ್ಪಸಂಖ್ಯಾತ) ಸಮುದಾಯಗಳು ಸಂವಿಧಾನವನ್ನು ಉಳಿಸುವುದು ಅವರ ಜೀವನ್ಮರಣದ ವಿಷಯವಾಗಿದೆ,” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸರ್ಕಾರವು ಅಲ್ಪಸಂಖ್ಯಾತರನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿರುವ ಅವರು, ಅವರ ಹಕ್ಕುಗಳು ಮತ್ತು ಆಸ್ತಿಗಳನ್ನು ವ್ಯವಸ್ಥಿತವಾಗಿ ಕಸಿದುಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. “20 ಕೋಟಿಗೂ ಹೆಚ್ಚು ಜನರು, ವಿಶೇಷವಾಗಿ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡಲಾಗುತ್ತಿದೆ. ಅವರ ವಿರುದ್ಧದ ದೌರ್ಜನ್ಯಗಳು ದಿನೇ ದಿನೇ ಹೆಚ್ಚುತ್ತಿವೆ. ಅವರ ಆಸ್ತಿಗಳನ್ನು ಲೂಟಿ ಮಾಡಲಾಗುತ್ತಿದೆ, ಮನೆಗಳನ್ನು ಕೆಡವಲಾಗುತ್ತಿದೆ ಮತ್ತು ಆಡಳಿತಾತ್ಮಕ ಸಹಾಯದಿಂದ ಪೂಜಾ ಸ್ಥಳಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ” ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಜಾತಿ ಗಣತಿಯ ಕರೆಯನ್ನು ಪುನರುಚ್ಚರಿಸಿದ ಅವರು, ಸಾಮಾಜಿಕ ಅಂತರವನ್ನು ಕಡಿಮೆ ಮಾಡಲು ಮತ್ತು ಸಾಮಾಜಿಕ ನ್ಯಾಯವನ್ನು ಸಾಧಿಸಲು ಇದು ಅತ್ಯಗತ್ಯ ಎಂದು ಅವರು ಹೇಳಿದ್ದಾರೆ. ಜಾತಿ ಗಣತಿಯು ಜಾತಿ ವಿಭಜನೆ ಮಾಡುವುದಿಲ್ಲ, ಬದಲಾಗಿ ಅವುಗಳನ್ನು ಕಡಿಮೆ ಮಾಡುತ್ತದೆ. ಇದು ದೀರ್ಘಕಾಲದಿಂದ ವಂಚಿತರಾದವರಿಗೆ ಹಕ್ಕುಗಳು ಮತ್ತು ಸಮಾನತೆಯನ್ನು ಖಾತರಿಪಡಿಸುತ್ತದೆ ಎಂದು ಹೇಳಿದ್ದಾರೆ.

ಸಾಮಾಜಿಕ ನ್ಯಾಯಕ್ಕಾಗಿ ಮೀಸಲಾತಿಯು ಅತ್ಯಂತ ಮಹತ್ವದ ಸಾಧನವಾಗಿದ್ದು, ಆದರೆ ಅದನ್ನು ಹೊರಗುತ್ತಿಗೆ ಮತ್ತು ಗುತ್ತಿಗೆ ಆಧಾರಿತ ಉದ್ಯೋಗಗಳ ಮೂಲಕ ದುರ್ಬಲಗೊಳಿಸಲಾಗಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ದೇಶದ ಆರ್ಥಿಕ ಅಸಮಾನತೆಯ ವಿಷಯದ ಬಗ್ಗೆ ಮತ್ತು ಹಿಂದುಳಿದವರ ದುಃಸ್ಥಿತಿಯನ್ನು ಎತ್ತಿ ತೋರಿಸಿದ ಅಖಿಲೇಶ್ ಅವರು, “140 ಕೋಟಿ ಜನರಲ್ಲಿ, 82 ಕೋಟಿ ಜನರು ತಮ್ಮ ಉಳಿವಿಗಾಗಿ ಸರ್ಕಾರಿ ಪಡಿತರವನ್ನು ಅವಲಂಬಿಸಿದ್ದಾರೆ. ದೇಶವು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ ಎಂದು ಹೆಮ್ಮೆಪಡುತ್ತಿದ್ದೇವೆ, ಆದರೆ ವಾಸ್ತವವು ಸಂಪೂರ್ಣವಾಗಿ ವಿಭಿನ್ನವಾಗಿದೆ. ರಾಷ್ಟ್ರದ ಮೂರನೇ ಎರಡರಷ್ಟು ಸಂಪತ್ತು ಕೆಲವರ ಕೈಯಲ್ಲಿ ಕೇಂದ್ರೀಕೃತವಾಗಿದೆ. ಸರಕಾರಕ್ಕೆ ಧೈರ್ಯವಿದ್ದರೆ ಬಡತನ ರೇಖೆಗಿಂತ ಕೆಳಗಿರುವವರ ತಲಾ ಆದಾಯವನ್ನು ಬಹಿರಂಗಪಡಿಸಬೇಕು’’ ಎಂದರು.

ಸರ್ಕಾರ ಭಯ ಮತ್ತು ಆಡಳಿತದ ಅತಿರೇಕದ ಮೂಲಕ ಚುನಾವಣೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ. “ಉತ್ತರ ಪ್ರದೇಶ ಚುನಾವಣೆಯ ಸಂದರ್ಭದಲ್ಲಿ (ಇತ್ತೀಚಿನ ಒಂಬತ್ತು ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಗಳು), ಅನೇಕರಿಗೆ ಮತದಾನದ ಹಕ್ಕನ್ನು ನಿರಾಕರಿಸಲಾಯಿತು. ಮಹಿಳೆಯರಿಗೆ ಬೆದರಿಕೆ ಹಾಕಲಾಯಿತು ಮತ್ತು ಪೊಲೀಸ್ ಅಧಿಕಾರಿಗಳು ಬಹಿರಂಗವಾಗಿ ರಿವಾಲ್ವರ್‌ಗಳೊಂದಿಗೆ ಅವರನ್ನು ಬೆದರಿಸಿದರು. ಆದರೂ, ಆ ಧೀರ ಮಹಿಳೆಯರು ಬೆದರಿಕೆಯನ್ನು ಧಿಕ್ಕರಿಸಿ ಮತ ಚಲಾಯಿಸಿದರು. ಇದು ನಾವು ವಾಸಿಸುತ್ತಿರುವ ಪ್ರಜಾಪ್ರಭುತ್ವವೆ?” ಅವರು ಪ್ರಶ್ನಿಸಿದ್ದಾರೆ.

ಪ್ರಜಾಪ್ರಭುತ್ವದ ತತ್ವಗಳಿಗೆ ಹಿನ್ನಡೆಯಾಗುತ್ತಿದೆ ಎಂದು ಎಚ್ಚರಿಕೆ ನೀಡಿದ ಅವರು, “ಈ ವ್ಯವಸ್ಥೆಯು ಸರ್ವಾಧಿಕಾರದತ್ತ ವೇಗವಾಗಿ ಸಾಗುತ್ತಿದೆ. ಹಿಟ್ಲರ್ ಕೂಡ ದಬ್ಬಾಳಿಕೆಯನ್ನು ಸ್ಥಾಪಿಸಲು ಚುನಾಯಿತರಾದ ನಂತರ ಸಂವಿಧಾನವನ್ನು ತಿದ್ದುಪಡಿ ಮಾಡಿದ್ದ. ನಮ್ಮ ಸರ್ಕಾರವು ಅದೇ ಹಾದಿಯಲ್ಲಿ ಸಾಗುತ್ತಿದೆ” ಎಂದು ಅವರು ಹೇಳಿದ್ದಾರೆ. ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಸರ್ಕಾರ ಜಾರಿ ಮಾಡಿರುವ ಅಗ್ನಿಪಥ್ ಯೋಜನೆಯನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ | VVPAT ಸ್ಲಿಪ್‌ಗಳಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ – ಚುನಾವಣಾ ಆಯೋಗ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...