Homeಮುಖಪುಟಕಾಲ್ತುಳಿತ ಪ್ರಕರಣ - ನಟ ಅಲ್ಲು ಅರ್ಜುನ್‌ಗೆ ಹೈಕೋರ್ಟ್‌ ಮಧ್ಯಂತರ ಜಾಮೀನು

ಕಾಲ್ತುಳಿತ ಪ್ರಕರಣ – ನಟ ಅಲ್ಲು ಅರ್ಜುನ್‌ಗೆ ಹೈಕೋರ್ಟ್‌ ಮಧ್ಯಂತರ ಜಾಮೀನು

- Advertisement -
- Advertisement -

ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ-2 ಸಿನಿಮಾದ ಮೊದಲ ಪ್ರದರ್ಶನದ ವೇಳೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ಸೂಪರ್‌ಸ್ಟಾರ್ ಅಲ್ಲು ಅರ್ಜುನ್ ಅವರಿಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ ನಂತರ, ಕೆಳ ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಹಾಗಾಗಿ ಅವರು ತೆಲಂಗಾಣ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಕಾಲ್ತುಳಿತ ಪ್ರಕರಣ

ಇದಕ್ಕೂ ಮುನ್ನ ಮೃತ ಮಹಿಳೆ ರೇವತಿಯ ಪತಿ ಭಾಸ್ಕರ್ ಪ್ರತಿಕ್ರಿಯಿಸಿ, ತಮ್ಮ ಪತ್ನಿಯ ಸಾವಿಗೆ ನಟನ ತಪ್ಪಿಲ್ಲ, ಅಗತ್ಯವಿದ್ದರೆ ಪ್ರಕರಣವನ್ನು ಹಿಂಪಡೆಯಲು ಸಿದ್ಧ ಎಂದು ಹೇಳಿದ್ದಾರೆ. ಅಲ್ಲು ಅರ್ಜುನ್ ಬಂಧನದ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದು ಅವರು ಹೇಳಿದ್ದಾರೆ. ಬಿಡುಗಡೆಯಾದ ಮೇಲೆ 50,000 ರೂಪಾಯಿಗಳ ವೈಯಕ್ತಿಕ ಬಾಂಡ್ ನೀಡುವಂತೆ ಮತ್ತು ವಿಚಾರಣಾ ನ್ಯಾಯಾಲಯದಲ್ಲಿ ನಿಯಮಿತ ಜಾಮೀನಿಗಾಗಿ ಹೊಸ ಅರ್ಜಿಯನ್ನು ಸಲ್ಲಿಸುವಂತೆ ಹೈಕೋರ್ಟ್ ಕೇಳಿದೆ.ಕಾಲ್ತುಳಿತ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಟನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) 3(5) ಜೊತೆಗಿನ ಸೆಕ್ಷನ್ 105(B) ಮತ್ತು 118(1) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಈ ಸೆಕ್ಷನ್‌ಗಳು ಅನ್ವಯವಾಗುವುದಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ. ನಟ ಅಲ್ಲು ಅರ್ಜುನ್ ಅವರು ಘಟನೆಗೆ ಪ್ರಾಥಮಿಕವಾಗಿ ಹೊಣೆಗಾರರಾಗಲು ಸಾಧ್ಯವಿಲ್ಲ ಎಂದು ತೆಲಂಗಾಣ ಹೈಕೋರ್ಟ್‌ನ ನ್ಯಾಯಮೂರ್ತಿ ಜುವ್ವಾಡಿ ಶ್ರೀದೇವಿ ಹೇಳಿದ್ದಾರೆ. ಅಗತ್ಯ ಅನುಮತಿಯನ್ನು ಪಡೆದುಕೊಂಡ ನಂತರ ಅವರು ಕಾರ್ಯಕ್ರಮಕ್ಕೆ ಹಾಜರಾಗಿದ್ದರು ಎಂದು ತಿಳಿಸಿದ್ದಾರೆ.

ಜೀವನ ಮತ್ತು ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಒತ್ತಿಹೇಳಿದ ನ್ಯಾಯಮೂರ್ತಿ, ನಟನಾಗಿರುವ ಕಾರಣಕ್ಕೆ ಅರ್ಜುನ್ ಅವರಿಂದ ಈ ಹಕ್ಕುಗಳನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಸೂಚಿಸಿದರು. “ಈ ಭೂಮಿಯ ಪ್ರಜೆಯಾಗಿ, ಅವರಿಗೂ ಬದುಕುವ ಮತ್ತು ಸ್ವಾತಂತ್ರ್ಯದ ಹಕ್ಕಿದೆ” ಎಂದು ನ್ಯಾಯಮೂರ್ತಿ ಶ್ರೀದೇವಿ ಹೇಳಿದ್ದು, ಈ ಪರಿಸ್ಥಿತಿಯಲ್ಲಿ ನ್ಯಾಯಾಂಗ ಬಂಧನವು ಅನಗತ್ಯವಾಗಿದೆ ಎಂದು ಹೇಳಿದ್ದಾರೆ. ಸಂತ್ರಸ್ತರ ಕುಟುಂಬದ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ ನ್ಯಾಯಾಲಯವು, ಉದ್ದೇಶ ಅಥವಾ ಸ್ಪಷ್ಟ ಪುರಾವೆಗಳಿಲ್ಲದೆ ಗಂಭೀರ ಆರೋಪಗಳನ್ನು ವಿಧಿಸುವುದು ಅನ್ಯಾಯವಾಗಿದೆ ಎಂದು ಒತ್ತಿಹೇಳಿದೆ.

ಈ ನಡುವೆ, ಅಲ್ಲು ಅರ್ಜುನ್ ಬಂಧನದ ವಿರುದ್ಧ ತೆಲಂಗಾಣದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಬಿಆರ್‌ಎಸ್ ನಾಯಕ ಕೆಟಿ ರಾಮರಾವ್ ಟೀಕಿಸಿದ್ದಾರೆ. ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಇದು ಆಡಳಿತಗಾರರ ಅಭದ್ರತೆಯ ಪರಾಕಾಷ್ಠೆ. ಅಲ್ಲು ಅರ್ಜುನ್ ಅವರನ್ನು ಸಾಮಾನ್ಯ ಕ್ರಿಮಿನಲ್ ಎಂದು ಪರಿಗಣಿಸಬೇಕು. ವಿಶೇಷವಾಗಿ, ಅವರು ನೇರವಾಗಿ ಜವಾಬ್ದಾರರಲ್ಲದ ಕಾರಣಕ್ಕಾಗಿ ಅವರನ್ನು ಆರೋಪಿ ಎಂದು ಕರೆಯುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಕೆಟಿಆರ್ ಹೇಳಿಕೆಯ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ರೇವಂತ್ ರೆಡ್ಡಿ, ನಟನ ಬಂಧನದಲ್ಲಿ ತಮ್ಮ ಅಥವಾ ತಮ್ಮ ಸರ್ಕಾರದ ಯಾವುದೇ ಪಾತ್ರವಿಲ್ಲ. ಅವರ ಬಂಧನದಲ್ಲಿ ಯಾವುದೇ ರಾಜಕೀಯ ಕಾರಣವನ್ನು ಹುಡುಕಬೇಕಾಗಿಲ್ಲ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಅವರು ಹೇಳಿದ್ದಾರೆ.

ಶುಕ್ರವಾರ ನಟ ಅಲ್ಲು ಅರ್ಜುನ್ ಅನ್ನು ಹೈದರಾಬಾದ್ ಥಿಯೇಟರ್‌ನ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಂಧಿಸಲಾಯಿತು. ಅಲ್ಲಿ ಅವರ ‘ಪುಷ್ಪಾ 2: ದಿ ರೂಲ್’ ಚಲನಚಿತ್ರವನ್ನು ಪ್ರದರ್ಶಿಸಲಾಗುತ್ತಿತ್ತು. ಘಟನೆಯಲ್ಲಿ ಕಳೆದ ವಾರ ಒಬ್ಬ ಮಹಿಳೆ ಸಾವನ್ನಪ್ಪಿ, ಆಕೆಯ ಪುತ್ರನಿಗೆ ಗಂಭೀರವಾಗಿ ಗಾಯಗಳಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಅಲ್ಲು ಅರ್ಜುನ್ ಅವರನ್ನು ಜುಬಿಲಿ ಹಿಲ್ಸ್‌ನಲ್ಲಿರುವ ಅವರ ಮನೆಯಿಂದ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು.

ಇದನ್ನೂ ಓದಿ: ಅಜಿತ್‌ ಪವಾರ್‌ಗೆ ಹಣಕಾಸು ಖಾತೆ ಸಿಗಬೇಕು, ಇಲ್ಲವೆಂದರೆ ಮಹಾಯುತಿ ಸರ್ಕಾರಕ್ಕೆ ಅರ್ಥವಿಲ್ಲ: ಎನ್‌ಸಿಪಿ

ಅಜಿತ್‌ ಪವಾರ್‌ಗೆ ಹಣಕಾಸು ಖಾತೆ ಸಿಗಬೇಕು, ಇಲ್ಲವೆಂದರೆ ಮಹಾಯುತಿ ಸರ್ಕಾರಕ್ಕೆ ಅರ್ಥವಿಲ್ಲ: ಎನ್‌ಸಿಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...