Homeಕರ್ನಾಟಕಕಲಬುರಗಿ | ಸಿಗರೇಟ್ ಬಾಕ್ಸ್ ಕದ್ದ ಆರೋಪ : ದಲಿತ ಯುವಕನ ಹತ್ಯೆ

ಕಲಬುರಗಿ | ಸಿಗರೇಟ್ ಬಾಕ್ಸ್ ಕದ್ದ ಆರೋಪ : ದಲಿತ ಯುವಕನ ಹತ್ಯೆ

- Advertisement -
- Advertisement -

ಸಿಗರೇಟ್ ಪ್ಯಾಕೆಟ್‌ಗಳಿದ್ದ ಬಾಕ್ಸ್‌ಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಖಾಸಗಿ ಬ್ಲಡ್ ಬ್ಯಾಂಕ್ ಮಾಲಕನೊಬ್ಬ ತನ್ನ ಬಳಿ ಕೆಲಸಕ್ಕಿದ್ದ ದಲಿತ ಯುವಕನನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯ ಎಂ.ಬಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗುರುವಾರ (ಡಿ.12) ಸಂಜೆ ನಡೆದಿದೆ ಎಂದು ವರದಿಯಾಗಿದೆ.

ನಗರದ ಪ್ರಗತಿ ಕಾಲೊನಿಯ ನಿವಾಸಿ ಶಶಿಕಾಂತ ಮಲ್ಲಿಕಾರ್ಜುನ ನಾಟೀಕಾರ (25) ಕೊಲೆಯಾದ ಯುವಕ. ಘಟನೆ ಸಂಬಂಧ ಬ್ಲಡ್ ಬ್ಯಾಂಕ್ ಮಾಲೀಕ ಚಂದ್ರಶೇಖರ ಮಲ್ಲಿನಾಥ ಪಾಟೀಲ, ಆದಿತ್ಯ ಮರಾಠಾ, ಓಂಪ್ರಕಾಶ್ ಘೋರವಾಡಿ, ರಾಹುಲ್ ಪಾಟೀಲ ಹಾಗೂ ಅಷ್ಪಾಕ್ ಎಂಬುವವರ ವಿರುದ್ದ ಪೊಲೀಸರು ಎಫ್‌ಐಅರ್‌ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ನಗರದ ಬಸವೇಶ್ವರ ಆಸ್ಪತ್ರೆಯ ಬಳಿ ಬ್ಲಡ್ ಬ್ಯಾಂಕ್ ನಡೆಸುತ್ತಿರುವ ಚಂದ್ರಶೇಖರ ಪಾಟೀಲ ಬಳಿ ಮೃತ ಯುವಕ ಶಶಿಕಾಂತ ಕೆಲಸ ಮಾಡುತ್ತಿದ್ದರು. ಬ್ಲಡ್ ಬ್ಯಾಂಕ್‌ನಲ್ಲಿ 1.40 ಲಕ್ಷ ರೂ. ಮೌಲ್ಯದ ಸಿಗರೇಟ್ ಬಾಕ್ಸ್‌ ಕಳವಾಗಿತ್ತು. ಶಶಿಕಾಂತ್ ಮತ್ತು ಆಕಾಶ್ ಸಿಗರೇಟ್ ಬಾಕ್ಸ್‌ಗಳನ್ನು ಕದ್ದಿದ್ದಾರೆ ಎಂದು ಆರೋಪಿಸಿ ಮಾಲೀಕ ಚಂದ್ರಶೇಖರ್, ಅಷ್ಟೂ ಹಣವನ್ನು ಕೊಡುವಂತೆ ಅವರನ್ನು ಕೂಡಿ ಹಾಕಿ ತನ್ನ ಸಹಚರರಿಂದ ಮಾರಾಣಾಂತಿಕ ಹಲ್ಲೆ ಮಾಡಿಸಿದ್ದಾರೆ ಎನ್ನಲಾಗಿದೆ.

ಬಳಿಕ ಶಶಿಕಾಂತ್ ಪೋಷಕರನ್ನು ಫೋನ್ ಮಾಡಿ ಕರೆಸಿ, ಜಾತಿ ನಿಂದನೆ ಮಾಡಿ ಬೆದರಿಸಿದ್ದಾರೆ. ಹಲ್ಲೆಗೊಳಗಾದ ಪುತ್ರ ಶಶಿಕಾಂತ್‌ ಅನ್ನು ಪೋಷಕರು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ದಾರಿ ಮಧ್ಯೆ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಪೋಷಕರು ದೂರಿನಲ್ಲಿ ಹೇಳಿದ್ದಾಗಿ ವರದಿಗಳು ವಿವರಿಸಿವೆ.

ಯುವಕನ ಸಾವಿಗೆ ಕಾರಣರಾದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಜಿಮ್ಸ್‌ ಆಸ್ಪತ್ರೆ ಬಳಿ ಶುಕ್ರವಾರ (ಡಿ.13) ಸಂಜೆ ಯುವಕನ ಶವವಿಟ್ಟು ಕುಟುಂಬ ಸದಸ್ಯರು ಮತ್ತು ದಲಿತ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

ಆರೋಪಿಗಳ ವಿರುದ್ಧ ಕೊಲೆ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಾಗಿರುವುದರಿಂದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮೃತ ಶಶಿಕಾಂತ್ ಪೋಷಕರಿಗೆ 4.12 ಲಕ್ಷ ರೂ. ಮೊತ್ತದ ಪರಿಹಾರದ ಚೆಕ್ ವಿತರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್​​  ಸೇರಿದಂತೆ ಒಟ್ಟು 7 ಮಂದಿಗೆ ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...