Homeಮುಖಪುಟಆಂತರಿಕ, ಬಾಹ್ಯ ಕಲಹ : ನಿರಾಶ್ರಿತರಾದ 1.1 ಮಿಲಿಯನ್ ಸಿರಿಯಾ ಜನತೆ

ಆಂತರಿಕ, ಬಾಹ್ಯ ಕಲಹ : ನಿರಾಶ್ರಿತರಾದ 1.1 ಮಿಲಿಯನ್ ಸಿರಿಯಾ ಜನತೆ

- Advertisement -
- Advertisement -

ಸಿರಿಯಾದಲ್ಲಿ ಇತ್ತೀಚೆಗೆ ಆಂತರಿಕ ಮತ್ತು ಬಾಹ್ಯ ಕಲಹಗಳು ಉಲ್ಬಣಗೊಂಡ ನಂತರ ತೀವ್ರ ಆಹಾರ ಮತ್ತು ಇಂಧನ ಕೊರತೆ ಸಮಸ್ಯೆ ಉಂಟಾಗಿದೆ. ಇದರಿಂದ ದೇಶದಾದ್ಯಂತ 1.1 ಮಿಲಿಯನ್‌ಗಿಂತಲೂ ಹೆಚ್ಚು ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ ಎಂದು ವಿಶ್ವ ಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಸಂಸ್ಥೆ (ಒಸಿಹೆಚ್‌ಎ) ತಿಳಿಸಿದೆ.

ವಿಶ್ವಸಂಸ್ಥೆ ಮತ್ತು ಅದರ ಪಾಲುದಾರರು ಭದ್ರತಾ ಪರಿಸ್ಥಿತಿಯನ್ನು ನೋಡಿಕೊಂಡು ಮಾನವೀಯ ಚಟುವಟಿಕೆಗಳನ್ನು ಮುಂದುವರೆಸಿದ್ದಾರೆ. ಕೆಲವು ಪಾಲುದಾರರು ಡಮಾಸ್ಕಸ್, ಟಾರ್ಟಸ್, ಲಟಾಕಿಯಾ ಮತ್ತು ರಕ್ಕಾ ನಗರಗಳ ವ್ಯಾಪ್ತಿಯಲ್ಲಿ ಮಾತ್ರ ಸೀಮಿತ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಒಸಿಹೆಚ್‌ಎ ಹೇಳಿದೆ.

ಸಿರಿಯಾದ ವಾಯುವ್ಯದಲ್ಲಿ ಪರಿಸ್ಥಿತಿಯನ್ನು ವಿಶ್ವ ಸಂಸ್ಥೆಯು ಸೂಕ್ಷ್ಮವಾಗಿ ಗಮನಿಸುತ್ತಿದೆ. ಹಿಟ್ಟು ಮತ್ತು ಇಂಧನದ ಕೊರತೆಯಿಂದ ಅಲೆಪ್ಪೊ ನಗರದಲ್ಲಿ ಬೇಕರಿಗಳನ್ನು ಮುಚ್ಚಲಾಗಿದೆ ಎಂದು ಒಸಿಹೆಚ್‌ಎ ಕಚೇರಿ ತಿಳಿಸಿದೆ.

ಸೀಮಿತ ತರಕಾರಿ ಪೂರೈಕೆ ಇದೆ. ಅಲೆಪ್ಪೋದ ಸುತ್ತ ಮುತ್ತಲಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಕಡಿತದ ವರದಿಯಾಗಿದೆ. ಇಂಧನ ಬೆಲೆಯೂ ಹೆಚ್ಚಾಗಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅಲೆಪ್ಪೊ ಗವರ್ನರೇಟ್‌ನ ಟಿಶ್ರೀನ್ ಅಣೆಕಟ್ಟಿನ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಮಂಗಳವಾರದಿಂದ ವಿದ್ಯುತ್ ಕಡಿತ ಉಂಟಾಗಿದೆ. ಇದರಿಂದ ಪ್ರಮುಖ ನಗರಗಳಾದ ಮೆನ್‌ಬಿಜ್ ಮತ್ತು ಕೊಬಾನಿ ಸೇರಿದಂತೆ ವಿವಿಧ ಪ್ರದೇಶಗಳ 400,000 ಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದೆ. ನೀರು ಮತ್ತು ಇತರ ಪ್ರಮುಖ ಸೇವೆಗಳಿಗೆ ಸಮಸ್ಯೆಯಾಗಿದೆ.

ಸವಾಲುಗಳ ಹೊರತಾಗಿಯೂ, ಭದ್ರತೆಯನ್ನು ನೋಡಿಕೊಂಡು ವಿಶ್ವಸಂಸ್ಥೆ ಮತ್ತು ಅದರ ಪಾಲುದಾರರು ವಾಯುವ್ಯ ಸಿರಿಯಾದಲ್ಲಿ 700,000 ಕ್ಕೂ ಹೆಚ್ಚು ಜನರಿಗೆ ಆಹಾರವನ್ನು ಒದಗಿಸಿದ್ದಾರೆ.

ಒಸಿಹೆಚ್‌ಎ ಪ್ರಕಾರ, ಈಶಾನ್ಯ ಸಿರಿಯಾದಲ್ಲಿ ಮಾನವೀಯ ಸೇವೆಯು ಸವಾಲಾಗಿ ಪರಿಣಮಿಸಿದೆ. ಅಲ್ಲಿನ ರಕ್ಕಾ, ತಬ್ಕಾ, ಹಸ್ಸಾಕೆ ಮತ್ತು ಡೆರಿಕ್ ನಗರಗಳ ಚೆಕ್‌ಪೋಸ್ಟ್‌ಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಅಲ್ಲಿ ದರೋಡೆಯ ಕುರಿತು ವರದಿಯಾಗಿದೆ. 40,000ಕ್ಕೂ ಹೆಚ್ಚು ಸ್ಥಳಾಂತರಗೊಂಡ ಜನರು ಸುಮಾರು 200 ಸಮುದಾಯ ಕೇಂದ್ರಗಳಲ್ಲಿ ತಂಗಿದ್ದಾರೆ.

ಮಾನವೀಯ ಸಂಸ್ಥೆಗಳು ಮಕ್ಕಳು ಮತ್ತು ವಯಸ್ಕರಿಗೆ ಆಹಾರ, ನೈರ್ಮಲ್ಯ ಕಿಟ್‌ಗಳು, ನಗದು ಮತ್ತು ಮಾನಸಿಕ ಸಾಮಾಜಿಕ ಬೆಂಬಲವನ್ನು ನೀಡುತ್ತಿವೆ.

ಸಿರಿಯಾದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಕುರಿತು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕಳವಳ ವ್ಯಕ್ತಪಡಿಸಿದ್ದಾರೆ. ದೇಶದಾದ್ಯಂತ ಹಿಂಸಾಚಾರವನ್ನು ಕೊನೆಗೊಳಿಸುವಂತೆ ಅವರು ಕೋರಿದ್ದಾರೆ.

ಸಿರಿಯಾದ ಮೇಲೆ ಇಸ್ರೇಲ್‌ ನಡೆಸುತ್ತಿರುವ ಸರಣಿ ವೈಮಾನಿಕ ದಾಳಿಗಳ ಬಗ್ಗೆ ಆಂಟೋನಿಯೊ ಗುಟೆರೆಸ್ ಹೆಚ್ಚಿನ ಕಳವಳ ವ್ಯಕ್ತಪಡಿಸಿದ್ದು, ಹಿಂಸಾಚಾರ ಕೊನೆಗೊಳಿಸುವ ಅಗತ್ಯತೆಯನ್ನು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ : ವಿದೇಶಗಳಲ್ಲಿ ಭಾರತೀಯರ ಮೇಲಿನ ದಾಳಿ ಹೆಚ್ಚಳ – ರಾಜ್ಯಸಭೆಗೆ ಕೇಂದ್ರ ಸರ್ಕಾರ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...