“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮಿ ಅವರಿಗೆ ಬಿಜೆಪಿಯವರು ಸುಪಾರಿ ನೀಡಿದ್ದಾರೆ” ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು ದೂರಿದ್ದಾರೆ. ಮೃತ್ಯುಂಜಯ ಸ್ವಾಮಿಗೆ
ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮೈಸೂರಿನಲ್ಲಿ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಲಿಂಗಾಯತ ವಿರೋಧಿ ಎಂದು ಕರೆದಿರುವ ಕೂಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮಿ ಹೇಳಿಕೆ ಖಂಡಿಸಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಶನಿವಾರ ಆಯೋಜಿಸಿದ್ದ ದುಂಡು ಮೇಜಿನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಕೆಲವು ವರ್ಷಗಳ ಹಿಂದೆಯಷ್ಟೆ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದ ಸ್ವಾಮೀಜಿ ಈಗ ದ್ವೇಷ ಕಾರುತ್ತಿದ್ದಾರೆ. ಒಂದು ಸಮುದಾಯವನ್ನು ಸಿದ್ದರಾಮಯ್ಯ ವಿರುದ್ಧ ಎತ್ತಿಕಟ್ಟುವ ಷಡ್ಯಂತ್ರ ಸ್ವಾಮೀಜಿ ಅವರದ್ದಾಗಿದೆ. ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಅನುಸರಿಸುತ್ತಿದ್ದಾರೆ. ಹಿಂದುಳಿದ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸದ ಮೂಲಕ ಅಪನಂಬಿಕೆ ಸೃಷ್ಟಿಸುತ್ತಿದ್ದಾರೆ. ಸೌಹಾರ್ದ ಹಾಳಾಗಲೆಂದು ಕುಮ್ಮಕ್ಕು ಕೊಡುತ್ತಿದ್ದಾರೆ. ರಾಜಕೀಯ ಪುಢಾರಿ ರೀತಿ ಅವರು ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಬಿಜೆಪಿಯವರು, ಸಿದ್ದರಾಮಯ್ಯ ಅವರ ತಪ್ಪಿಲ್ಲದಿದ್ದರೂ ಮುಡಾ, ಮಹರ್ಷಿ ವಾಲ್ಮೀಕಿ ನಿಗಮದ ಹಗರಣವನ್ನು ಮುಂದಿಟ್ಟುಕೊಂಡು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಿದರು. ಆದರೆ, ಇದರಿಂದ ಪ್ರಯೋಜನ ಆಗದಿದ್ದಕ್ಕೆ ಸ್ವಾಮೀಜಿಯನ್ನು ಎತ್ತಿ ಕಟ್ಟಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ. ಮೃತ್ಯುಂಜಯ ಸ್ವಾಮಿಗೆ
“ಸ್ವಾಮೀಜಿ ಅವರಂತೆ ಮಾತನಾಡಲು ನಮಗೂ ಬರುತ್ತದೆ. ಆದರೆ, ಅದಕ್ಕೆ ಅವಕಾಶ ಕೊಡುವ ಕೆಲಸವನ್ನು ಅವರು ಮಾಡಬಾರದು. ಲಿಂಗಾಯತ ಪಂಚಮಸಾಲಿ ಸಮಾಜ ಎಲ್ಲ ರೀತಿಯಲ್ಲೂ ಮುಂದುವರಿದಿದೆ. ಅವರನ್ನು ಹಿಂದುಳಿದ ವರ್ಗ-2ಎಗೆ ಸೇರಿಸಲು ನಮ್ಮ ಪ್ರಬಲ ವಿರೋಧವಿದೆ. ಒಂದು ಜಾತಿಯ ಪರವಾಗಿ ಗುರುತಿಸಿಕೊಂಡರೆ ಅಂಥವರು ಸನ್ಯಾಸಿಯಾಗಲು ಯೋಗ್ಯರಲ್ಲ; ಹಗಲುವೇಷ ಹಾಕಿದವರು ಎನ್ನಬೇಕಾಗುತ್ತದೆ” ಎಂದು ಕೆ ಎಸ್ ಶಿವರಾಮು ಟೀಕಿಸಿದ್ದಾರೆ.
“ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂಬ ಜಾತಿವಾದಿಗಳ ಹುನ್ನಾರದ ಭಾಗವಾಗಿ ಷಡ್ಯಂತ್ರ ಮಾಡುತ್ತಿದ್ದಾರೆ. ಸಂಚು ರೂಪಿಸುತ್ತಿದ್ದಾರೆ. ಜಾತಿ ಮುಂದಿಟ್ಟುಕೊಂಡು ಅಶಾಂತಿ ಸೃಷ್ಟಿಸುತ್ತಿದ್ದಾರೆ” ಎಂದು ಅಹಿಂದ ಮುಖಂಡ ಶಿವಣ್ಣ ಹೇಳಿದ್ದಾರೆ.
ಇದನ್ನೂ ಓದಿ: ಪ್ರಧಾನಿಗೆ ಸಂವಿಧಾನದ ವಿಧಿಗಳ ಪಾಠ ಮಾಡಬೇಕು – ಸಂಸದ ಅಸಾದುದ್ದೀನ್ ಓವೈಸಿ
ಪ್ರಧಾನಿಗೆ ಸಂವಿಧಾನದ ವಿಧಿಗಳ ಪಾಠ ಮಾಡಬೇಕು – ಸಂಸದ ಅಸಾದುದ್ದೀನ್ ಓವೈಸಿ


