Homeಮುಖಪುಟ9.5 ಲಕ್ಷ ಸಿಎಪಿಎಫ್‌ ಸಿಬ್ಬಂದಿಯಲ್ಲಿ ರಜೆಗಳ ಲಾಭ ಪಡೆದಿದ್ದು 42 ಸಾವಿರ ಮಂದಿ - ಕೇಂದ್ರ...

9.5 ಲಕ್ಷ ಸಿಎಪಿಎಫ್‌ ಸಿಬ್ಬಂದಿಯಲ್ಲಿ ರಜೆಗಳ ಲಾಭ ಪಡೆದಿದ್ದು 42 ಸಾವಿರ ಮಂದಿ – ಕೇಂದ್ರ ಸರ್ಕಾರ ಮಾಹಿತಿ

- Advertisement -
- Advertisement -

ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು (CAPFs) ಮತ್ತು ಅಸ್ಸಾಂ ರೈಫಲ್ಸ್‌ನ ಸಿಬ್ಬಂದಿ ಪಡೆಯಬೇಕಿದ್ದ 100 ದಿನಗಳ ರಜೆಯಲ್ಲಿ 2020 ಮತ್ತು 2024ರ (ಅಕ್ಟೋಬರ್ ವರೆಗೆ) ನಡುವೆ ಈ ಪಡೆಗಳಲ್ಲಿರುವ 9.5 ಲಕ್ಷ ಸಿಬ್ಬಂದಿಗಳ ಪೈಕಿ ಕೇವಲ 42,000 ಸಿಬ್ಬಂದಿಗಳು ಮಾತ್ರವೇ 100 ದಿನಗಳ ರಜೆಯ ಲಾಭ ಪಡೆದಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ (MHA) ಮಾಹಿತಿ ನೀಡಿದೆ. 9.5 ಲಕ್ಷ ಸಿಎಪಿಎಫ್‌ ಸಿಬ್ಬಂದಿಯಲ್ಲಿ

ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ ಆತ್ಮಹತ್ಯೆಗಳು ಮತ್ತು ಸ್ವಯಂನಿವೃತ್ತಿಯನ್ನು ಕಡಿಮೆ ಮಾಡುವ ಮತ್ತು ಸಿಬ್ಬಂದಿಗಳು ತಮ್ಮ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಲು ಅವಕಾಶ ಮಾಡಿಕೊಡುವ ಉದ್ದೇಶದಿಂದ 100 ದಿನಗಳ ರಜೆ ನೀತಿಯನ್ನು ಘೋಷಿಸಲಾಗಿತ್ತು. ಆದಾಗ್ಯೂ, ತೀರಾ ಕಡಿಮೆ ಸಿಬ್ಬಂದಿ ಈ ನೀತಿಯಡಿ ರಜೆ ಪಡೆದಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ. 9.5 ಲಕ್ಷ ಸಿಎಪಿಎಫ್‌ ಸಿಬ್ಬಂದಿಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಸತ್ತಿನಲ್ಲಿ ಗೃಹ ಸಚಿವಾಲಯದ ನೀಡಿದ ಮಾಹಿತಿಯಂತೆ, ಕಳೆದ ನಾಲ್ಕು ವರ್ಷಗಳಲ್ಲಿ ಸಿಆರ್‌ಪಿಎಫ್‌ನ ಒಟ್ಟು 2,245 ಸಿಬ್ಬಂದಿಗಳು ಮಾತ್ರವೇ 100 ದಿನಗಳ ರಜೆ ಪಡೆದುಕೊಂಡಿದ್ದಾರೆ. ಆದಾಗ್ಯೂ, 2024ರಲ್ಲಿ ಕೇವಲ 71 ಮಂದಿ ಮಾತ್ರವೇ ರಜೆ ಮೇಲೆ ತಮ್ಮೂರಿಗೆ ಹೋಗಲು ಸಾಧ್ಯವಾಗಿದೆ ಎಂದು ಸಚಿವಾಲಯ ಹೇಳಿದೆ.

ಜೊತೆಗೆ, ಗಡಿ ಭದ್ರತಾ ಪಡೆಯಲ್ಲಿ (BSF) ಒಟ್ಟು 21,733 ಸಿಬ್ಬಂದಿ 100 ದಿನ ರಜೆಯನ್ನು ತೆಗೆದುಕೊಂಡಿದ್ದರೆ, ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ (ITBP) ಪಡೆಯ 1,472 ಸಿಬ್ಬಂದಿ, ಸಶಸ್ತ್ರ ಸೀಮಾ ಬಲ್‌ನ (SSB) 6,142 ಸಿಬ್ಬಂದಿ ಹಾಗೂ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್‌ನ (CISF) 8,838 ಸಿಬ್ಬಂದಿ ಈ ರಜೆಗಳನ್ನು ಪಡೆದಿದ್ದಾರೆ ಎಂದು ಸರ್ಕಾರ ಹೇಳಿದೆ.

ಇದಲ್ಲದೆ, ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕಾರ್ಯನಿರ್ವಹಿಸುವ ಮತ್ತು ಮಣಿಪುರದಲ್ಲಿ ನಿಯೋಜಿಸಲಾದ ಅಸ್ಸಾಂ ರೈಫಲ್ಸ್‌ನ 2,367 ಸಿಬ್ಬಂದಿಗಳು 100 ದಿನಗಳ ರಜೆ ಪಡೆದಿದ್ದು, ಒಟ್ಟಾರೆಯಾಗಿ, 42,797 ಸಿಬ್ಬಂದಿಗಳು ರಜೆಯ ಉಪಯೋಗ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಸದನದಲ್ಲಿ ಹೇಳಿದೆ.

ಇದನ್ನೂ ಓದಿ: ಪ್ರಧಾನಿಗೆ ಸಂವಿಧಾನದ ವಿಧಿಗಳ ಪಾಠ ಮಾಡಬೇಕು – ಸಂಸದ ಅಸಾದುದ್ದೀನ್ ಓವೈಸಿ

ಪ್ರಧಾನಿಗೆ ಸಂವಿಧಾನದ ವಿಧಿಗಳ ಪಾಠ ಮಾಡಬೇಕು – ಸಂಸದ ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. No such types of orders for avail compulsory 100 days leave till now. I am availed 60 days EL&15days C/L with 2 RH , 4 GH & 06 Sundays as prefix and Suffix Total-87 days. How I am availed 100 days leave? Please provide if any orders issued for compulsory avail 100 days leave by MHA to CAPF Jawans. Regards.

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...