Homeಕರ್ನಾಟಕಹೆಂಡತಿ, ಮಾವನ ಕಿರುಕುಳ:  ಹೆಡ್‌ ಕಾನ್‌ಸ್ಟೆಬಲ್‌ ಆತ್ಮಹತ್ಯೆ

ಹೆಂಡತಿ, ಮಾವನ ಕಿರುಕುಳ:  ಹೆಡ್‌ ಕಾನ್‌ಸ್ಟೆಬಲ್‌ ಆತ್ಮಹತ್ಯೆ

- Advertisement -
- Advertisement -

ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್‌ ಆತ್ಮಹತ್ಯೆ ಪ್ರಕರಣ ಹಸಿರಾಗಿರುವಂತೆಯೇ ಇತ್ತ ಬೆಂಗಳೂರಿನಲ್ಲಿ  ಮತ್ತೊಂದು ಬಲಿಯಾದ ಘಟನೆ ವರದಿಯಾಗಿದೆ.

ಪತ್ನಿ, ಮಾವನ ಕಿರುಕುಳದಿಂದಾಗಿ ಹೆಡ್‌ ಕಾನ್‌ಸ್ಟೆಬಲ್‌ ಒಬ್ಬರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ.

ಮೃತರನ್ನು ಎಚ್‌ ಸಿ ತಿಪ್ಪಣ್ಣ (34) ಎಂದು ಗುರುತಿಸಲಾಗಿದೆ. ಬಿಜಾಪುರ ಜಿಲ್ಲೆ ಸಿಂದಗಿ ತಾಲೂಕಿನ ಹಂದಿಗನೂರು ಗ್ರಾಮದ ತಿಪ್ಪಣ್ಣ ಬೆಂಗಳೂರಿನ ನಾಗನಾತಪುರದ ಕೃಷ್ಣಪ್ಪ ಲೇಔಟ್​ನಲ್ಲಿ ವಾಸವಿದ್ದರು.  ಶುಕ್ರವಾರ ರಾತ್ರಿ ಹೀಲಲಿಗೆ ರೈಲ್ವೆ ಸ್ಟೇಷನ್‌ ಮತ್ತು ಕಾರ್ಮೆಲರಾಮ್‌ ಹೊಸಗುರು ರೈಲ್ವೇ ಗೇಟ್ ಮಧ್ಯದಲ್ಲಿ ರೈಲಿಗೆ ತಲೆಕೊಟ್ಟು ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ತಿಪ್ಪಣ್ಣ ಹುಳಿಮಾವು ಪೋಲಿಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಹೆಡ್‌ ಕಾನ್‌ಸ್ಟೆಬಲ್ ಡೆತ್‌ನೋಟ್ ಬರೆದಿಟ್ಟಿದ್ದು, ತನ್ನ ಸಾವಿಗೆ ಪತ್ನಿ ಮತ್ತು ಮಾವ ಕಾರಣ ಎಂದು ಹೇಳಿದ್ದಾರೆ. ಇಬ್ಬರೂ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ತಿಪ್ಪಣ್ಣ ಬೈಕ್‌ನಲ್ಲಿ ಶುಕ್ರವಾರ ರಾತ್ರಿ 10.45ರ ಸಮಯದಲ್ಲಿ ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣ ಬಳಿ ಬಂದಿದ್ದರು.

ಬಳಿಕ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾರೆ. ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ತಿಪ್ಪಣ್ಣ ತಂದೆ ದೂರು ನೀಡಿದ್ದು, ತನ್ನ ಮಗನಿಗೆ ನ್ಯಾಯ ಕೊಡಿಸುವಂತೆ ದೂರಿನಲ್ಲಿ ಕೋರಿದ್ದಾರೆ.

ಗುರುವಾರ ತಿಪ್ಪಣ್ಣ ತನ್ನ ಮಾವನಿಗೆ ಕರೆ ಮಾಡಿದಾಗ, ‘ನೀನು ಸತ್ತು ಹೋಗು, ನನ್ನ ಮಗಳು ಚೆನ್ನಾಗಿ ಇರುತ್ತಾಳೆ’ ಎಂದು ಹೇಳಿ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ತಿಪ್ಪಣ್ಣ ಉಲ್ಲೇಖಿಸಿದ್ದಾರೆ ಎಂದು ಹೇಳಲಾಗಿದೆ.

ಡೆತ್​ನೋಟ್ ಆಧರಿಸಿ ಹೆಂಡತಿ ಹಾಗೂ ಮಾವನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದು ಮೊದಲು ಅವರ ವೈವಾಹಿಕ ಜೀವನದ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ.

ಇದನ್ನೂ ಓದಿ….ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಹಾರ: ಮಂಡ್ಯ ಡಿಸಿ ಕಚೇರಿ ಎದುರು ಬಾಡೂಟ ಸೇವಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...