Homeಮುಖಪುಟಮಹಾರಾಷ್ಟ್ರ | ಸಚಿವ ಸ್ಥಾನ ಸಿಗದ್ದಕ್ಕೆ ಬೇಸರ : ಪಕ್ಷದ ಹುದ್ದೆಗಳಿಗೆ ಶಿವಸೇನೆ ಶಾಸಕ ರಾಜೀನಾಮೆ

ಮಹಾರಾಷ್ಟ್ರ | ಸಚಿವ ಸ್ಥಾನ ಸಿಗದ್ದಕ್ಕೆ ಬೇಸರ : ಪಕ್ಷದ ಹುದ್ದೆಗಳಿಗೆ ಶಿವಸೇನೆ ಶಾಸಕ ರಾಜೀನಾಮೆ

- Advertisement -
- Advertisement -

ಭಾನುವಾರ (ಡಿ.15) ವಿಸ್ತರಣೆಗೊಂಡ ಮಹಾರಾಷ್ಟ್ರದ ‘ಮಹಾಯುತಿ’ ಸರ್ಕಾರದ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿರುವುದ್ದ ಬೇಸರಗೊಂಡಿರುವ ಶಿವಸೇನೆಯ ಭಂಡಾರ ಶಾಸಕ ನರೇಂದ್ರ ಭೋಂಡೇಕರ್ ಪಕ್ಷದ ಎಲ್ಲ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.

ಈ ಹಿಂದೆ ಶಿವಸೇನೆಯ ಉಪನಾಯಕ ಮತ್ತು ಪೂರ್ವ ವಿದರ್ಭದ ಸಮನ್ವಯಕಾರರಾಗಿ ಸೇವೆ ಸಲ್ಲಿಸಿದ್ದ ಭೋಂಡೇಕರ್, ಪಕ್ಷದ ನಾಯಕತ್ವದಿಂದ ತಮಗೆ ಸಂಪುಟ ಸ್ಥಾನ ನೀಡುವ ಭರವಸೆ ನೀಡಲಾಗಿತ್ತು. ಆದರೆ ಸಂಪುಟ ವಿಸ್ತರಣೆ ವೇಳೆ ಕೈಬಿಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾನುವಾರ ಭಂಡಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಭೋಂಡೇಕರ್, ತನ್ನನ್ನು ಜಿಲ್ಲಾ ಉಸ್ತುವಾರಿ ಸಚಿವನಾಗಿ ನೇಮಿಸುವ ವಿಶ್ವಾಸ ವ್ಯಕ್ತಪಡಿಸಿದ್ದರು. ಈ ಹಿಂದೆಯೆಲ್ಲ ಜಿಲ್ಲಾ ಉಸ್ತುವಾರಿ ಹುದ್ದೆ ಹೊರಗಿನವರಿಗೆ ದೊರೆತಿದೆ. ಈ ಬಾರಿ ತನಗೆ ದೊರೆತರೆ ಜಿಲ್ಲೆಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದಿದ್ದರು.

ಈ ಬಾರಿಯ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ದ 38 ಸಾವಿರ ಮತಗಳ ಅಂತರದಿಂದ ಭೋಂಡೇಕರ್ ಗೆಲುವು ಸಾಧಿಸಿದ್ದರು.

ಭಾನುವಾರ ವಿಸ್ತರಣೆಗೊಂಡ ಮಹಾರಾಷ್ಟ್ರ ಸರ್ಕಾರದ ಸಚಿವ ಸಂಪುಟಕ್ಕೆ 39 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬಾರಿ 19 ಹೊಸ ಮುಖಗಳಿಗೆ ಸಂಪುಟದಲ್ಲಿ ಅವಕಾಶ ನೀಡಲಾಗಿದೆ. ಮಹಾಯುತಿ ಮೈತ್ರಿಕೂಟದ ಪ್ರಮುಖ ಪಕ್ಷ ಅತಿ ಹೆಚ್ಚು (19) ಸಚಿವ ಸ್ಥಾನಗಳನ್ನು ಪಡೆದುಕೊಂಡಿದೆ. ಶಿವಸೇನೆ (ಶಿಂದೆ ಬಣ) ಮತ್ತು ಎನ್‌ಸಿಪಿ(ಅಜಿತ್ ಪವಾರ್ ಬಣ)ಗೆ ಕ್ರಮವಾಗಿ 11 ಮತ್ತು 9 ಸಚಿವ ಸ್ಥಾನಗಳು ದೊರೆತಿವೆ.

ಸಚಿವ ಸ್ಥಾನ ಸಿಗುವ ಖಾತ್ರಿಯಿಂದಲೇ ನಾನು ಶಿವಸೇನೆ ಸೇರಿದ್ದೇನೆ. ಮುಖ್ಯಮಂತ್ರಿ ಏಕನಾಥ್ ಶಿಂದೆ ಆ ಖಾತ್ರಿ ನೀಡಿದ್ದರು. ನಾನು ಸ್ವತಂತ್ರ ಶಾಸಕನಾಗಿದ್ದಾಗಲೂ ಶಿಂದೆ ಅವರನ್ನು ಬೆಂಬಲಿಸಿದ್ದೆ. ಸಂಪುಟ ವಿಸ್ತರಣೆಯ ಆರಂಭದಲ್ಲಿ ನನ್ನ ಹೆಸರು ಸಚಿವ ಸ್ಥಾನದ ಪಟ್ಟಿಯಲ್ಲಿ ಇತ್ತು. ಆದರೆ, ಅಂತಿಮ ಹಂತದಲ್ಲಿ ಕೈ ಬಿಡಲಾಗಿದೆ ಎಂದು ಭೋಂಡೇಕರ್ ಹೇಳಿದ್ದಾರೆ.

“ನಾನು ಶಿವಸೇನೆಯ ಸಾಮಾನ್ಯ ಸದಸ್ಯನಾಗಿ ಮುಂದುವರೆಯುತ್ತೇನೆ. ಪಕ್ಷದ ಯಾವುದೇ ಹುದ್ದೆಗಳು ಬೇಡ. ಸ್ಥಳೀಯ ನಾಯಕರು ಜಿಲ್ಲೆಯ ನಾಯಕತ್ವ ವಹಿಸಿಕೊಂಡರೆ ಅಭಿವೃದ್ದಿಯಾಗಲಿದೆ” ಎಂದು ಭೋಂಡೇಕರ್ ತಿಳಿಸಿದ್ದಾರೆ.

ಇದನ್ನೂ ಓದಿ : ಅವಿಶ್ವಾಸ ಗೊತ್ತುವಳಿ ಮಂಡನೆಯ ನಡುವೆಯೇ ಇಂದು ರಾಜ್ಯಸಭೆಯಲ್ಲಿ ಸಂವಿಧಾನ ಕುರಿತು ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...