ಬಿಜೆಪಿ ನಾಯಕನೊಬ್ಬ ಕೆಲಸ ಕೊಡಿಸುವ ನೆಪದಲ್ಲಿ ದೆಹಲಿ ಮೂಲದ ಮಹಿಳೆಯೊಬ್ಬರ ಕರೆಸಿ ಗನ್ ತೋರಿಸಿ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಆರೋಪಿಯ ವಿರುದ್ಧ ಬಿಎನ್‌ಎಸ್ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ವರದಿ ಹೇಳಿದ್ದು, ಆದರೆ ವರದಿಯು ಆರೋಪಿಯ ಹೆಸರನ್ನು ಬಹಿರಂಗಪಡಿಸಿಲ್ಲ. ಉತ್ತರ ಪ್ರದೇಶ
“ಆರೋಪಿಯ ವಿರುದ್ಧ ಬಿಎನ್‌ಎಸ್ ಸೆಕ್ಷನ್ 64 (1) (ಅತ್ಯಾಚಾರ) ಮತ್ತು 351 (3) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮಹಿಳೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ, ಅವರ ಹೇಳಿಕೆ ದಾಖಲಿಸಿ ತನಿಖೆ ನಡೆಸಲಾಗುವುದು” ಎಂದು ಹೈವೇ ಪೊಲೀಸ್ ಠಾಣೆಯ ಎಸ್‌ಎಚ್‌ಒ ಆನಂದ್ ಕುಮಾರ್ ತಿಳಿಸಿದ್ದಾರೆ.. ಉತ್ತರ ಪ್ರದೇಶ
ಬಿಜೆಪಿಯ ಕಿಸಾನ್ ಮೋರ್ಚಾದ ಮಾಜಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಮತ್ತು ಅಖಿಲ ಭಾರತೀಯ ಕ್ಷತ್ರಿಯ ಮಹಾಸಭಾದ ನಾಯಕರಾಗಿರುವ ಆರೋಪಿಯು ತನ್ನ ವಿರುದ್ಧದ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. “ನನ್ನ ವಿರುದ್ಧ ಹೊರಿಸಲಾದ ಎಲ್ಲಾ ಆರೋಪಗಳು ಆಧಾರರಹಿತವಾಗಿದ್ದು, ನನ್ನ ಪ್ರತಿಷ್ಠೆಗೆ ಕಳಂಕ ತರುವ ಪ್ರಯತ್ನ ಇದಾಗಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಸಂತ್ರಸ್ತ ಮಹಿಳೆ ದೆಹಲಿಯಲ್ಲಿ ನೆಲೆಸಿದ್ದು, ಅವರು ನೀಡಿದ ದೂರಿನಲ್ಲಿ, ಬಿಜೆಪಿ ಮುಖಂಡ ತನಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದು, ನಾಲ್ಕು ವರ್ಷದಿಂದ ಇಬ್ಬರು ಆನ್‌ಲೈನ್ ಮೂಲಕವೇ ಸಂಪರ್ಕ ಹೊಂದಿದ್ದಾಗಿ ಹೇಳಿದ್ದಾರೆ. “ಆರೋಪಿಯು ಎನ್‌ಜಿಒ ನಡೆಸುತ್ತಿದ್ದಾನೆ. ಸೆಪ್ಟಂಬರ್‌ನಲ್ಲಿ ನಾವು ಎನ್‌ಜಿಒ ಸಂಬಂಧಿತ ವಿಚಾರದಲ್ಲಿ ಸಂಪರ್ಕಿಸಿದ್ದೆವು. ಸೆಪ್ಟೆಂಬರ್ 14ರಂದು ಉದ್ಯೋಗ ನೀಡುವ ನೆಪದಲ್ಲಿ ನನ್ನನ್ನು ಮಥುರಾಗೆ ಕರೆದನು. ನಾನು ನನ್ನ ಸ್ನೇಹಿತನೊಂದಿಗೆ ನರಹೌಲಿ ಪ್ರದೇಶ ತಲುಪಿದೆ. ಅಲ್ಲಿಂದ ಆರೋಪಿ ಮತ್ತು ಆತನ ಸಹಚರರು ನಮ್ಮನ್ನು ಕರೆದೊಯ್ದರು” ಎಂದು ಮಹಿಳೆ ತಿಳಿಸಿದ್ದಾರೆ.
“ಅಲ್ಲಿ ಕೋಣೆಯೊಂದಕ್ಕೆ ಕರೆದೊಯ್ದು ಗನ್ ತೋರಿಸಿ ಅತ್ಯಾಚಾರ ಮಾಡಿದ್ದಾರೆ. ಜೊತೆಗೆ ಮುಂದಿನ ಬಾರಿ ಸ್ನೇಹಿತನೊಂದಿಗೆ ಬರದೆ ಒಬ್ಬಳೇ ಬರಬೇಕು ಎಂದು ಸೂಚಿಸಿದ್ದಾರೆ” ಎಂದು ಮಹಿಳೆ ಹೇಳಿದ್ದಾರೆ. ಮಹಿಳೆ ಘಟನೆ ನಡೆದ ಮರುದಿನವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಆರೋಪಿಗೆ ಹೆಚ್ಚು ಪ್ರಭಾವ ಇರುವ ಕಾರಣ ಪೊಲೀಸರು ದೂರನ್ನು ನಿರ್ಲಕ್ಷಿಸಿದ್ದಾರೆ ಎಂದು ಅವರು ದೂರಿದ್ದಾರೆ.
ಇದರ ನಂತರ ಮಹಿಳೆ ನಿರಂತರವಾಗಿ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸುವಂತೆ ಒತ್ತಾಯಿಸಿದ್ದರು. ಅಂತಿಮವಾಗಿ ಅಪರಾಧ ನಡೆದು ಮೂರು ತಿಂಗಳ ಬಳಿಕ ಶುಕ್ರವಾರ ಮಥುರಾದ ಹೆದ್ದಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾರೆ. ಉತ್ತರ ಪ್ರದೇಶ
ಇದನ್ನೂ ಓದಿ: Explainer | ಹೈಕೋರ್ಟ್ ನ್ಯಾಯಾಧೀಶರನ್ನು ಹುದ್ದೆಯಿಂದ ಕೆಳಗಿಳಿಸುವುದು ಸಾಧ್ಯವೆ?
Explainer | ಹೈಕೋರ್ಟ್ ನ್ಯಾಯಾಧೀಶರನ್ನು ಹುದ್ದೆಯಿಂದ ಕೆಳಗಿಳಿಸುವುದು ಸಾಧ್ಯನಾ?


