Homeಕರ್ನಾಟಕಬೆಂಗಳೂರು ಟೆಕ್ಕಿ ಆತ್ಮಹತ್ಯೆ ಪ್ರಕರಣ: ಕಿರುಕುಳ ಆರೋಪ ನಿರಾಕರಿಸಿದ ಮೃತ ಅತುಲ್ ಪತ್ನಿ

ಬೆಂಗಳೂರು ಟೆಕ್ಕಿ ಆತ್ಮಹತ್ಯೆ ಪ್ರಕರಣ: ಕಿರುಕುಳ ಆರೋಪ ನಿರಾಕರಿಸಿದ ಮೃತ ಅತುಲ್ ಪತ್ನಿ

- Advertisement -
- Advertisement -

ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಪತ್ನಿ ನಿಕಿತಾ ಸಿಂಘಾನಿಯಾ, ಪೊಲೀಸ್ ವಿಚಾರಣೆ ವೇಳೆ ಕಿರುಕುಳದ ಆರೋಪವನ್ನು ನಿರಾಕರಿಸಿದ್ದಾರೆ.

ನಿಕಿತಾ ಮತ್ತು ಅವರ ಕುಟುಂಬದ ವಿರುದ್ಧ ಕಿರುಕುಳ-ಸುಲಿಗೆ ಆರೋಪದ ವೀಡಿಯೊ ಜೊತೆಗೆ, 48 ಪುಟಗಳ ಡೆತ್‌ನೋಟ್ ಬರೆದಿಟ್ಟಿದ್ದ 34 ವರ್ಷದ ಸುಭಾಷ್ ಡಿಸೆಂಬರ್ 9 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಸುಮಾರು ಮೂರು ವರ್ಷಗಳಿಂದ ಪತಿಯಿಂದ ದೂರವಾಗಿ ಬದುಕುತ್ತಿದ್ದೇನೆ ಎಂದು ನಿಕಿತಾ ಅವರು ತನಿಖಾಧಿಕಾರಿಗಳ ಮುಂದೆ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. “ನಾನು ಹಣಕ್ಕಾಗಿ ಕಿರುಕುಳ ನೀಡಿದರೆ, ನಾನು ಅವನಿಂದ ಏಕೆ ದೂರ ಉಳಿಯುತ್ತೇನೆ” ಎಂದು ಪ್ರಶ್ನಿಸಿರುವ ನಿಕಿತಾ, ತಮ್ಮ ಮದುವೆಯ ಸಮಯದಲ್ಲಿ ಕಿರುಕುಳಕ್ಕೊಳಗಾದವರು ನಾನೆ ಎಂದು ಆರೋಪಿಸಿದ್ದಾರ ಎಂದು ತಿಳಿದುಬಂದಿದೆ. 2022 ರಲ್ಲಿ ಅತುಲ್ ವರದಕ್ಷಿಣೆ ಸಂಬಂಧಿತ ಕಿರುಕುಳ ಮತ್ತು ಹಲ್ಲೆಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದರು.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ನಿಕಿತಾ ಸಿಂಘಾನಿಯಾ (29), ಆಕೆಯ ತಾಯಿ ನಿಶಾ (54) ಮತ್ತು ಸಹೋದರ ಅನುರಾಗ್ (27) ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನಿಕಿತಾ ಅವರನ್ನು ಗುರುಗ್ರಾಮ್‌ನ ಹಾಂಗ್‌ಕಾಂಗ್ ಬಜಾರ್ ರಸ್ತೆಯ ಬಳಿ ಬಂಧಿಸಿದ್ದರೆ, ಆಕೆಯ ತಾಯಿ ಮತ್ತು ಸಹೋದರನನ್ನು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಿಂದ ಕರೆದೊಯ್ಯಲಾಯಿತು. ಮೂವರನ್ನೂ ಬೆಂಗಳೂರಿಗೆ ತರಲಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅವರ ಬಂಧನದ ನಂತರ, ಅತುಲ್ ಸುಭಾಷ್ ಅವರ ತಂದೆ ಮತ್ತು ಸಹೋದರ ಸುಭಾಷ್ ಅವರು, 4 ವರ್ಷದ ಮಗನ ಯೋಗಕ್ಷೇಮದ ಬಗ್ಗೆ ಕಳವಳ ವ್ಯಕ್ತಪಡಿಸಿ, ಆತ ಇರುವ ಸ್ಥಳ ತಿಳಿದಿಲ್ಲ ಎಂದು ಹೇಳಿದ್ದಾರೆ.

ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದ್ದು, ನಿಕಿತಾ ಮತ್ತು ಅವರ ಕುಟುಂಬದ ವಿರುದ್ಧ ಆರೋಪ ಸಾಬೀತಾದರೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಉಪ ಪೊಲೀಸ್ ಆಯುಕ್ತ (ವೈಟ್‌ಫೀಲ್ಡ್) ಶಿವಕುಮಾರ್ ಗುಣಾರೆ ತಿಳಿಸಿದ್ದಾರೆ.

ಅತುಲ್‌ನ ಕೈಬರಹದ ಮತ್ತು ಡಿಜಿಟಲ್ ಆತ್ಮಹತ್ಯೆ ನೋಟ್, ಆತನ ಎಲೆಕ್ಟ್ರಾನಿಕ್ ಸಾಧನಗಳನ್ನು ಸಾಕ್ಷ್ಯವಾಗಿ ತೆಗೆದುಕೊಂಡು ವಿಧಿವಿಜ್ಞಾನ ವಿಶ್ಲೇಷಣೆಗೆ ಕಳುಹಿಸಲಾಗಿದೆ. ಪೊಲೀಸರು ಕಾಣೆಯಾದ ಸಾಕ್ಷ್ಯದ ಬಗ್ಗೆ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಎಲ್ಲಾ ದಾಖಲೆಗಳು ಸುರಕ್ಷಿತವಾಗಿವೆ ಮತ್ತು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಒತ್ತಿ ಹೇಳಿದರು.

ವರದಕ್ಷಿಣೆ ಕಿರುಕುಳ ಹಾಗೂ ಹಲ್ಲೆ ಆರೋಪ ಮಾಡಿದ್ದನಿಕಿತಾ ಸಿಂಘಾನಿಯಾ,  2022 ರಲ್ಲಿ ಪೊಲೀಸ್ ದೂರು ನೀಡಿದ್ದರು. ಅತುಲ್ ಸುಭಾಷ್ ತನ್ನನ್ನು ಥಳಿಸುತ್ತಿದ್ದರು ಮತ್ತು ಪತಿ-ಪತ್ನಿ ಸಂಬಂಧವನ್ನು ಮೃಗದಂತೆ ಪರಿಗಣಿಸಲು ಪ್ರಾರಂಭಿಸಿದರು ಎಂದು ಆರೋಪಿಸಿದ್ದಾರೆ. ಮದುವೆಯ ಉಡುಗೊರೆಗಳ ಬಗ್ಗೆ ಅತೃಪ್ತಿ ಮತ್ತು ಹೆಚ್ಚುವರಿ 10 ಲಕ್ಷ ರೂ. ಸೇರಿದಂತೆ ಅತ್ತೆಯ ಬೇಡಿಕೆಗಳು ತನ್ನ ತಂದೆಯ ಆರೋಗ್ಯ ಕ್ಷೀಣಿಸಲು ಮತ್ತು ಅಂತಿಮವಾಗಿ ಸಾವಿಗೆ ಕಾರಣವಾಗಿವೆ ಎಂದು ನಿಕಿತಾ ಆರೋಪಿಸಿದ್ದಾರೆ.

ಕುಟುಂಬ ವರದಕ್ಷಿಣೆಗಾಗಿ ಒತ್ತಾಯಿಸಿದ ಆಘಾತದಿಂದ ತನ್ನ ತಂದೆ ನಿಧನರಾದರು ಎಂಬ ನಿಕಿತಾ ಅವರ ಹೇಳಿಕೆ ಸುಳ್ಳು ಎಂದು ಸುಭಾಷ್ ತಮ್ಮ ಆತ್ಮಹತ್ಯೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ನಿಕಿತಾ ಅವರ ತಂದೆ ಹೃದಯ ಸಂಬಂಧಿ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ; ಬೆಂಗಳೂರು ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ: ಪತ್ನಿ ನಿಕಿತಾ, ಆಕೆಯ ತಾಯಿ-ಸಹೋದರನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....