Homeಕರ್ನಾಟಕಮಂಡ್ಯ | ಮುಸ್ಲಿಂ ಯುವಕರನ್ನು ಸುತ್ತುವರೆದು 'ಜೈ ಶ್ರೀರಾಮ್' ಕೂಗುವಂತೆ ಒತ್ತಾಯಿಸಿದ ಬಜರಂಗದಳದ ದುಷ್ಕರ್ಮಿಗಳು

ಮಂಡ್ಯ | ಮುಸ್ಲಿಂ ಯುವಕರನ್ನು ಸುತ್ತುವರೆದು ‘ಜೈ ಶ್ರೀರಾಮ್’ ಕೂಗುವಂತೆ ಒತ್ತಾಯಿಸಿದ ಬಜರಂಗದಳದ ದುಷ್ಕರ್ಮಿಗಳು

- Advertisement -
- Advertisement -

ಬಿಜೆಪಿ ಮತ್ತು ಅದರ ಸಹಸಂಘಟನೆಗಳಾದ ಬಜರಂಗದಳದ ದುಷ್ಕರ್ಮಿಗಳು ಮೂವರು ಮುಸ್ಲಿಂ ಯುವಕರನ್ನು ಸುತ್ತುವರೆದು ‘ಜೈಶ್ರೀರಾಮ್’ ಹೇಳುವಂತೆ ಒತ್ತಾಯಿಸಿರುವ ಘಟನೆ ಮಂಡ್ಯದ ಸುಂಡಹಳ್ಳಿ ಪ್ರದೇಶದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದರೂ ಕರ್ನಾಟಕವು ಉತ್ತರ ಪ್ರದೇಶದಂತೆ ಆಗುತ್ತಿದೆ ಎಂದು ಸಾರ್ವಜನಿಕವಾಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಮಂಡ್ಯ

ಭಾನುವಾರ ಶ್ರೀರಂಗಪಟ್ಟಣದಲ್ಲಿ ನಡೆದ ಹನುಮ ಸಂಕೀರ್ತನ ಯಾತ್ರೆಗೆ ಹೊರಟಿದ್ದ ಬಿಜೆಪಿ ಸಂಘಟನೆಗಳ ಬೆಂಬಲಿಗ ಯುವಕರು ಈ ಕೃತ್ಯ ಎಸಗಿದ್ದಾರೆ. ಮಂಡ್ಯದ ಸುಂಡಹಳ್ಳಿ ಗ್ರಾಮದ ಬೆಂಗಳೂರು – ಮೈಸೂರು ಹೆದ್ದಾರಿಯ ಅಂಡರ್‌ಪಾಸ್‌ನ ಸರ್ವಿಸ್ ರಸ್ತೆಯ ಬಳಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಮೂವರು ಮುಸ್ಲಿಂ ಯುವಕರನ್ನು ತಡೆದು, ಅವರನ್ನು ಸುತ್ತುವರೆದು ‘ಜೈಶ್ರೀರಾಮ್’ ಎಂದು ಕೂಗುವಂತೆ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಬಗ್ಗೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. 8-10 ಅಪರಿಚಿತರು ಕೃತ್ಯ ಎಸಗಿದ್ದಾಗಿ ಎಫ್‌ಐಆರ್‌ ಉಲ್ಲೇಖಿಸಿದೆ. “ಯುವಕರನ್ನು ಮುಂದೆ ಹೋಗದಂತೆ ಅಡ್ಡಗಟ್ಟಿ ನಿಲ್ಲಿಸಿಕೊಂಡು ಅವಹೇಳನಕಾರಿಯಾಗಿ ನಿಂದಿಸಿ ಅವರ ಧಾರ್ಮಿಕ ಭಾವನೆಗೆ ದಕ್ಕೆ ಉಂಟುಮಾಡಿ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಿದ್ದಾರೆ” ಎಂದು ಎಫ್‌ಐಆರ್ ಹೇಳಿದೆ. ದುಷ್ಕರ್ಮಿಗಳ ವಿರುದ್ಧ ಬಿಎನ್‌ಎಸ್ ಅಡಿಯಲ್ಲಿ 189(2), 126(2), 196, 352, ರೆ.ವಿ. 190 ಪ್ರಕರಣ ದಾಖಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಮಂಡ್ಯ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರಸೂಲ್ ಸಾಬ್ ಗೌಂಡಿ ಅವರು, ಘಟನೆಗೆ ಸಂಬಂಧಪಟ್ಟಂತೆ ಮೂವರು ವ್ಯಕ್ತಿಗಳನ್ನು ಗುರುತಿಸಿದ್ದು ಅವರು ಮತ್ತು ತಂಡದ ಮೇಲೆ ಎಫ್‌ಐಆರ್‌ ದಾಖಲು ಮಾಡಿದ್ದೇವೆ. ಉಳಿದವರನ್ನು ಕಂಡುಹಿಡಿಯಲು ತಂಡ ರಚನೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಮಂಡ್ಯ

ಅಮಾಯಕ ಮುಸ್ಲಿಂ ಯುವಕರನ್ನು ಸುತ್ತುವರೆದು ಜೈಶ್ರೀರಾಮ್ ಎಂದು ಹೇಳಲು ಒತ್ತಾಯಿಸಿದ ಗೂಂಡಾಗಳನ್ನು ತಕ್ಷಣವೆ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಮಂಡ್ಯ ಜಿಲ್ಲಾ ಸಿಪಿಐ(ಎಂ) ಆಗ್ರಹಿಸಿದ್ದು, ಸಂಘಪರಿವಾರದ ಇಂತಹ ಆಚರಣೆಗಳಿಗೆ ಸರ್ಕಾರ ಅವಕಾಶ ನೀಡಬಾರದು ಎಂದು ಪಕ್ಷವು ಹೇಳಿದೆ.

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಿಪಿಐ(ಎಂ) ಮಂಡ್ಯ ಜಿಲ್ಲಾ ಕಾರ್ಯದರ್ಶಿ ಟಿ.ಎಲ್. ಕೃಷ್ಣೇಗೌಡ ಅವರು, “ಯುಪಿ ಮಾದರಿಯಲ್ಲಿ ಕರ್ನಾಟಕವನ್ನು ಮಾಡಲು ಹೊರಟಿರುವ ಸಂಘಪರಿವಾರದ ಆಚರಣೆಗಳಿಗೆ ರಾಜ್ಯ ಸರ್ಕಾರ ಯಾವುದೆ ಅವಕಾಶ ನೀಡಬಾರದು. ಸರ್ಕಾರ ಅವಕಾಶ ಕೊಟ್ಟಿರುವುದಕ್ಕಾಗಿಯೆ ಅದನ್ನು ದುರುಪಯೋಗಪಡಿಸಿಕೊಂಡು ಈ ರೀತಿಯಾಗಿ ಗೂಂಡಾಗಿರಿ ಮಾಡಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸಂಘ ಪರಿವಾರದ ಹುನುಮ ಮಾಲೆಗೆ ಅವಕಾಶ ಕೊಡುತ್ತಾ ಇರುವುದರಿಂದ ಅವರು ಗೂಂಡಾಗಿರಿಗೆ ಇಳಿದಿದ್ದಾರೆ. ಈ ಬಗ್ಗೆ ಈಗಾಗಲೆ ಸಿಪಿಐ(ಎಂ) ಎಚ್ಚರಿಸಿದ್ದು, ಸರ್ಕಾರ ಅವಕಾಶ ಕೊಟ್ಟಿರುವುಕ್ಕಾಗೆ ಅವರು ಪುಂಡಾಟ ಮೆರೆಯುತ್ತಿದ್ದಾರೆ. ಆದ್ದರಿಂದ ಮುಂದಿನ ವರ್ಷದಿಂದ ಇಂತಹ ಹನುಮ ಮಾಲೆ ಯಾತ್ರೆಯನ್ನು ಸರ್ಕಾರ ರಾಜ್ಯದಾದ್ಯಂತ ನಿಷೇಧಿಸಬೇಕು” ಎಂದು ಕೃಷ್ಣೇಗೌಡ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

ಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...