ವೃಕ್ಷಮಾತೆ ಎಂದೇ ಜನಪ್ರಿಯತೆ ಪಡೆದುಕೊಂಡಿದ್ದ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸಿಯಾಗಿರುವ ತುಳಸಿ ಗೌಡ ಅವರು ಸೋಮವಾರ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 87 ವರ್ಷ ವಯಸ್ಸಾಗಿತ್ತು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ
ತಮ್ಮ ಇಳಿ ವಯಸ್ಸಿನಲ್ಲಿಯೂ ಪರಿಸರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ತುಳಸಿ ಗೌಡ, ಸಾಲು ಸಾಲು ಗಿಡ ನೆಟ್ಟು ಪೋಷಿಸಿದ್ದಾರೆ. ತುಳಸಿ ಗೌಡ ಅವರ ಪರಿಸರ ಕಾಳಜಿಗಾಗಿ 2020 ರಲ್ಲಿ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಅವರು ತಮ್ಮ ಜೀವನದಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟಿದ್ದರು ಎಂದು ವರದಿಯಾಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದ ಅವರು, ಮನೆಯಲ್ಲಿ ತೀರಾ ಬಡತನವಿದ್ದೂ ಕುಟುಂಬಕ್ಕಾಗಿ ಕೂಲಿ ಕೆಲಸವನ್ನು ಮಾಡುತ್ತಲೇ ಹಸಿರು ಕ್ರಾಂತಿ ಮಾಡಿದ್ದರು. ಮೃತ ತುಳಸಿ ಗೌಡ ಅವರು ಸುಬ್ರಾಯ ಮತ್ತು ಸೋನಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಅವರ ಗೌರವಾರ್ಥವಾಗಿ 2023ರ ದೆಹಲಿಯ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಕರ್ನಾಟಕದ ಸ್ಥಬ್ಧ ಚಿತ್ರದಲ್ಲಿ ಅವರ ಪ್ರತಿಕೃತಿಯನ್ನು, ಸೂಲಗಿತ್ತಿ ನರಸಮ್ಮ ಮತ್ತು ಸಾಲು ಮರದ ತಿಮ್ಮಕ್ಕ ಅವರೊಂದಿಗೆ ಪ್ರದರ್ಶಿಸಲಾಗಿತ್ತು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ
ಕರ್ನಾಟಕದ ಎಲೆಮರೆಯ ಮಹಿಳಾ ಸಾಧಕರ ಪ್ರತೀಕವಾಗಿ ಸೂಲಗಿತ್ತಿ ನರಸಮ್ಮ,ವೃಕ್ಷ ಮಾತೆ ತುಳಸಿ ಗೌಡ ಹಾಲಕ್ಕಿ ಹಾಗೂ ಸಾಲು ಮರದ ತಿಮ್ಮಕ್ಕರನ್ನೊಳಗೊಂಡ "ನಾರಿ ಶಕ್ತಿ" ಸ್ತಬ್ಧ ಚಿತ್ರ ನವ ದೆಹಲಿಯ ಕರ್ತವ್ಯ ಪಥದಲ್ಲಿ ವಿಜೃಂಭಿಸಿದೆ.#RepublicDay #74thRepublicDay #KartavyaPath pic.twitter.com/sGcX5YnPr7
— Basavaraj S Bommai (@BSBommai) January 26, 2023
ಇದನ್ನೂ ಓದಿ: ತಮಿಳುನಾಡು| ದೇವಸ್ಥಾನದ ಮಂಟಪ ಪ್ರವೇಶಿಸದಂತೆ ಇಳಯರಾಜ ಅವರನ್ನು ತಡೆದ ಸಿಬ್ಬಂದಿ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ


