Homeಮುಖಪುಟಲೋಕಸಭೆಯಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ' ಮಂಡನೆ ಸಾಧ್ಯತೆ : ಸಂಸದರಿಗೆ ವಿಪ್ ಜಾರಿ...

ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ’ ಮಂಡನೆ ಸಾಧ್ಯತೆ : ಸಂಸದರಿಗೆ ವಿಪ್ ಜಾರಿ ಮಾಡಿದ ಬಿಜೆಪಿ, ಕಾಂಗ್ರೆಸ್

- Advertisement -
- Advertisement -

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಅನುವಾಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರುವ ಮಸೂದೆಯನ್ನು ಇಂದು (ಡಿ.17) ಲೋಕಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದ್ದು, ಉಭಯ ಸದನಗಳ ಜಂಟಿ ಸಂಸದೀಯ ಸಮಿತಿಗೆ ಶಿಫಾರಸು ಮಾಡಬಹುದು.

‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಎಂದು ಕರೆಯಲ್ಪಡುವ ಸಂವಿಧಾನದ (129 ತಿದ್ದುಪಡಿ) ಮಸೂದೆ- 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಮಂಡಿಸುವ ನಿರೀಕ್ಷೆಯಿದೆ ಎಂದು ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮಸೂದೆ ಮಂಡನೆ ಬಳಿಕ, ಅದರ ಕುರಿತು ವಿಸ್ಕೃತ ಚರ್ಚೆ ನಡೆಸಲು ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ವಹಿಸುವಂತೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಚಿವ ಮೇಘವಾಲ್ ಮನವಿ ಮಾಡಲಿದ್ದಾರೆ.

ವಿವಿಧ ಪಕ್ಷಗಳ ಸಂಸದರ ಸಂಖ್ಯಾಬಲದ ಆಧಾರದ ಮೇಲೆ ಜಂಟಿ ಸಂಸದೀಯ ಸಮಿತಿಯನ್ನು (ಜೆಪಿಸಿ) ರಚಿಸಲಾಗುತ್ತದೆ. ದೊಡ್ಡ ಪಕ್ಷ ಬಿಜೆಪಿಗೆ ಅಧ್ಯಕ್ಷ ಸ್ಥಾನ ಸಿಗಲಿದ್ದು, ಹೆಚ್ಚಿನ ಪ್ರಾತಿನಿಧ್ಯವೂ ದೊರೆಯಲಿದೆ.

ಕಳೆದ ವಾರ ಈ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು. ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿ ಈ ಬಗ್ಗೆ ಅಧ್ಯಯನ ನಡೆಸಿ ಸರ್ಕಾರಕ್ಕೆ ವಿಸ್ಕೃತ ವರದಿ ನೀಡಿದೆ.

ಸಂಸದರಿಗೆ ವಿಪ್ ಜಾರಿ

‘ಒಂದು ದೇಶ ಒಂದು ಚುನಾವಣೆ’ ಮಸೂದೆ ಮಂಡನೆ ಸಾಧ್ಯತೆ ಹಿನ್ನೆಲೆ ಬಿಜೆಪಿ, ಕಾಂಗ್ರೆಸ್, ಶಿವಸೇನೆ ಸೇರಿದಂತೆ ಪ್ರಮುಖ ಪಕ್ಷಗಳು ತಮ್ಮ ಸಂಸದರಿಗೆ ಕಡ್ಡಾಯವಾಗಿ ಸದನಕ್ಕೆ ಹಾಜರಾಗುವಂತೆ ವಿಪ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : 21 ನಕಲಿ ವಿಶ್ವವಿದ್ಯಾಲಯಗಳನ್ನು ಪಟ್ಟಿ ಮಾಡಿದ ಕೇಂದ್ರ ಸರ್ಕಾರ; ಅಗ್ರ ಸ್ಥಾನದಲ್ಲಿ ದೆಹಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...