Homeಮುಖಪುಟಲೋಕಸಭೆ: ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ ಪ್ರಾತಿನಿಧ್ಯದ ಮಸೂದೆ ಚರ್ಚೆ

ಲೋಕಸಭೆ: ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ ಪ್ರಾತಿನಿಧ್ಯದ ಮಸೂದೆ ಚರ್ಚೆ

- Advertisement -
- Advertisement -

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ಪ್ರಾತಿನಿಧ್ಯದ ಮಸೂದೆಯ ಕುರಿತು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ  ಮಾತನಾಡಿದರು.

ಮಂಗಳವಾರ ಲೋಕಸಭೆಯಲ್ಲಿ ಚರ್ಚೆ ಮುಂದುವರಿದಾಗ, ಹಲವಾರು ವಿರೋಧ ಪಕ್ಷದ ಸಂಸದರು ದೇಶಾದ್ಯಂತ 2021 ರ ಜನಗಣತಿಯನ್ನು ನಡೆಸುವ ಅಗತ್ಯವನ್ನು ಒತ್ತಿ ಹೇಳಿದರು. ಈ ಜನಗಣತಿ ಇತಿಹಾಸದಲ್ಲೇ ಪ್ರಥಮ ಬಾರಿ ಸಾಕಷ್ಟು ಸಮಯದಿಂದ ವಿಳಂಬವಾಗಿದೆ. ಇನ್ನೂ ಮುಂದೆಯೂ ಜನಗಣತಿ ಪ್ರಾರಂಭವಾಗುವ ಯಾವುದೇ “ಸೂಚನೆಗಳು” ಇಲ್ಲದ ಕಾರಣ ಸಮಯಕ್ಕೆ ಮಿತಿ ಹಾಕುವ (ಗಡಿ ನಿರ್ಧರಿಸುವಿಕೆ) ಸಾಮರ್ಥ್ಯ ಕೇಂದ್ರಕ್ಕೆ ಇದೆಯೇ ಎಂದು ಕೆಲವರು ಅನುಮಾನಿಸಿದರು.

ಗೋವಾ ವಿಧಾನಸಭೆ ಕ್ಷೇತ್ರಗಳಲ್ಲಿ ಪರಿಶಿಷ್ಟ ಪಂಗಡಗಳ ಪ್ರಾತಿನಿಧ್ಯವನ್ನು ಮರುಸಂಘಟಿಸುವ ಕುರಿತು ಕಾನೂನು ಸಚಿವ ಅರ್ಜುನ್ ರಾಮ್ ಮಾಘವಾಲ್ ಅವರು ಈ ವರ್ಷದ ಆಗಸ್ಟ್‌ನಲ್ಲಿ ಮಂಡಿಸಿದ ಗೋವಾ ರಾಜ್ಯ ಮಸೂದೆ-2024 ಅನ್ನು ಲೋಕಸಭೆಯಲ್ಲಿ ಮತ್ತೆ ಚರ್ಚಿಸಲಾಯಿತು.

ಈ ಕಾಯ್ದೆಯು ಜನಗಣತಿ ಆಯುಕ್ತರಿಗೆ ಗೋವಾದಲ್ಲಿ ST (ಪರಿಶಿಷ್ಟ ಪಂಗಡ) ಜನಸಂಖ್ಯೆಯನ್ನು “ನಿರ್ಧರಿಸಲು ಅಥವಾ ಅಂದಾಜು ಮಾಡಲು” ಅಧಿಕಾರ ನೀಡುತ್ತದೆ ಮತ್ತು ಇದು ಚುನಾವಣಾ ಆಯೋಗಕ್ಕೆ (EC) ಗೋವಾ ವಿಧಾನಸಭೆಗಳಲ್ಲಿ ಸ್ಥಾನಗಳನ್ನು ಮರುಸಂಘಟಿಸಲು ಸಹಾಯ ಮಾಡುತ್ತದೆ ಮತ್ತು ಅದಕ್ಕೆ ಅನುಗುಣವಾಗಿ ST ಗಳಿಗೆ ಸ್ಥಾನಗಳನ್ನು ಹಂಚುತ್ತದೆ.

ಗೋವಾದಲ್ಲಿ ST ಜನಸಂಖ್ಯೆಯು 2001ರ ಜನಗಣತಿ ಅಂಕಿಅಂಶಗಳನ್ನು  2011 ರ ಜನಗಣತಿಗೆ ಹೋಲಿಸಿದರೆ ಗಮನಾರ್ಹವಾಗಿ ಹೆಚ್ಚಾಗಿದೆ.

2001ರ ಜನಗಣತಿಯ ಪ್ರಕಾರ ಗೋವಾದಲ್ಲಿ 566 ST ಜನಸಂಖ್ಯೆ ದಾಖಲಾಗಿತ್ತು ಮತ್ತು 2011ರ ಜನಗಣತಿಯಲ್ಲಿ  1,49,275 ಆಗಿದೆ. ST ಜನಸಂಖ್ಯೆಯಲ್ಲಿನ ಈ ಹೆಚ್ಚಳಕ್ಕೆ ಗಮನಾರ್ಹ ಕಾರಣವೆಂದರೆ ಮೂರು ಹೊಸ ಸಮುದಾಯಗಳು ಅಂದರೆ ಕುಂಬಿ, ಗೌಡ ಮತ್ತು ವೆಲಿಪ್  ಗಳು 2003ರಲ್ಲಿ ಗೋವಾದ ST ಪಟ್ಟಿಗೆ ಸೇರಿಸಿದ್ದಾಗಿದೆ.

ಒಟ್ಟಾರೆಯಾಗಿ ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಪ್ರತಿಪಕ್ಷ ಸಂಸದರಾದ ಪ್ರತಿಮಾ ಮೊಂಡಲ್ (ತೃಣಮೂಲ ಕಾಂಗ್ರೆಸ್), ಸುಪ್ರಿಯಾ ಸುಳೆ (ಎನ್‌ಸಿಪಿ[ಎಸ್‌ಪಿ]) ಮತ್ತು ಕಿರ್ಸನ್ ನಾಮ್‌ದೇವ್ (ಕಾಂಗ್ರೆಸ್) ಅವರು ದೇಶಾದ್ಯಂತ ಜನಗಣತಿ ನಡೆಸುವುದಕ್ಕೆ ಸಮಯದ ಮಿತಿ ಹಾಕುವ ಸರ್ಕಾರದ ಬದ್ಧತೆಯನ್ನು ಪ್ರಶ್ನಿಸಿದರು. ಕೇಂದ್ರವು 2021ರ ಜನಗಣತಿಯ ಬಗ್ಗೆ ಮೌನವಾಗಿದೆ, ಅದು ಇನ್ನೂ ಪ್ರಾರಂಭಿಸಬೇಕಿದೆ ಎಂದರು.

2029ರ ಒಳಗೆ ಮುಂದಿನ ಜನಗಣತಿ ನಡೆಸಿ, ಮಹಿಳೆಯರಿಗೆ ಮೀಸಲಾತಿ ಜಾರಿಗೊಳಿಸುವ ಬದ್ಧತೆಯನ್ನು ಸರಕಾರ ತೋರಬೇಕೆಂದು ಸುಳೆ ಕೋರಿದರು.

ಜನಗಣತಿ ಕಾರ್ಯಕ್ಕೆ ಸುಮಾರು ₹ 12,000 ಕೋಟಿ ಬೇಕಾಗುತ್ತದೆ ಎಂದು ಹಿಂದಿನ ದಾಖಲೆಗಳು ಹೇಳುತ್ತಿವೆ. ಆದರೆ ಈ ಬಾರಿ ಸದನದಲ್ಲಿ ಅಂಗೀಕಾರವಾದ ಅನುದಾನವು ಕೇವಲ 1,000 ಕೋಟಿ ರೂ. ಬಜೆಟ್ ಮಾತ್ರ ತೋರಿಸಿದೆ ಎಂದು ಸುಳೆ ತಿಳಿಸಿದರು.

ಅವರ ಸಹೋದ್ಯೋಗಿ ಕಿರ್ಸಾನ್ ನಾಮದೇವ್ ಅವರು ಇದೇ ಅಭಿಪ್ರಾಯವನ್ನು ಪ್ರತಿಧ್ವನಿಸುತ್ತಾ, “150 ವರ್ಷಗಳಲ್ಲೇ ಮೊದಲ ಬಾರಿಗೆ, ಈ ದೇಶದಲ್ಲಿ ಜನಗಣತಿ ವಿಳಂಬವಾಗುತ್ತಿದೆ” ಎಂದು ಹೇಳಿದರು.

ತಮ್ಮ ಪಕ್ಷವು ಗೋವಾದ ಪರಿಶಿಷ್ಟ ಬುಡಕಟ್ಟುಗಳನ್ನು ಮಾತ್ರ ಬೆಂಬಲಿಸುವುದಿಲ್ಲ. ದೇಶದ ಎಲ್ಲಾ ಜನರನ್ನು ಬೆಂಬಲಿಸುತ್ತದೆ, ನಮ್ಮ ಪಕ್ಷವು ರಾಷ್ಟ್ರವ್ಯಾಪಿ ಜಾತಿಗಣತಿಗೆ ಮತ್ತಷ್ಟು ಒತ್ತು ನೀಡುತ್ತದೆ ಎಂದು ನಾಮದೇವ್ ಹೇಳಿದರು.

ಏತನ್ಮಧ್ಯೆ, ಆಡಳಿತಾರೂಢ ಮೈತ್ರಿಕೂಟದ ಹಲವಾರು ಸಂಸದರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶಾದ್ಯಂತ ಆದಿವಾಸಿಗಳ ಉನ್ನತಿಗಾಗಿ ಅದರ ಬದ್ಧತೆಯ ಪರವಾಗಿ ಮಾತನಾಡಿದರು.

ಇದನ್ನೂ ಓದಿ….ರಾಜ್ಯಸಭೆಯಲ್ಲಿ ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ; ಅಮಿತ್ ಶಾ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...