Homeಮುಖಪುಟ‘ಒಂದು ದೇಶ - ಒಂದು ಚುನಾವಣೆ’ ಮಸೂದೆ ಮಂಡನೆಗೆ ಗೈರಾದ ಬಿಜೆಪಿ ಸಂಸದರಿಗೆ ಪಕ್ಷದಿಂದ ನೋಟಿಸ್...

‘ಒಂದು ದೇಶ – ಒಂದು ಚುನಾವಣೆ’ ಮಸೂದೆ ಮಂಡನೆಗೆ ಗೈರಾದ ಬಿಜೆಪಿ ಸಂಸದರಿಗೆ ಪಕ್ಷದಿಂದ ನೋಟಿಸ್ ಸಾಧ್ಯತೆ

- Advertisement -
- Advertisement -

‘ಒಂದು ದೇಶ – ಒಂದು ಚುನಾವಣೆ’ ಮಸೂದೆಗಳನ್ನು ಮಂಡಿಸುವ ವೇಳೆ ಸಂಸತ್ತಿಗೆ ಗೈರುಹಾಜರಾಗಿದ್ದ ಬಿಜೆಪಿಯ ಸಂಸದರಿಗೆ ಪಕ್ಷವು ನೋಟಿಸ್ ಕಳುಹಿಸಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ಹಿಂದೂ ವರದಿ ಮಾಡಿದೆ.  ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸಲು ಅನುವು ಮಾಡಿಕೊಡುವ ಮಸೂದೆಗಳನ್ನು ಮಂಡಿಸಲು ಮಂಗಳವಾರ ಮತದಾನ ನಡೆದಾಗ ಬಿಜೆಪಿಯ ಹಲವಾರು ಸಂಸದರು ಸಂಸತ್ತಿಗೆ ಗೈರುಹಾಜರಾಗಿದ್ದರು. ಹಾಗಾಗಿ ಪಕ್ಷವು ತಮ್ಮ ಸದಸ್ಯರು ಯಾಕೆ ಗೈರಾಗಿದ್ದರು ಎಂಬುದನ್ನು ವಿವರಿಸುವಂತೆ ಕಳುಹಿಸಲಿದೆ.

ಪಕ್ಷವು ತನ್ನ ಲೋಕಸಭಾ ಸಂಸದರಿಗೆ ಮೂರು ಸಾಲಿನ ವಿಪ್ ಕಳುಹಿಸಿದ್ದು, ಮಂಗಳವಾರ ಸದನಕ್ಕೆ ಹಾಜರಾಗುವಂತೆ ಹೇಳಿತ್ತು. ಆದರೆ, ಇದರ ಹೊರತಾಗಿಯೂ 20 ಕ್ಕೂ ಹೆಚ್ಚು ಬಿಜೆಪಿ ಸಂಸದರು ಸಂವಿಧಾನದ ನೂರಾ ಇಪ್ಪತ್ತೊಂಬತ್ತನೇ ತಿದ್ದುಪಡಿ ಮಸೂದೆ-2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನು ತಿದ್ದುಪಡಿ ಮಸೂದೆ – 2024 ರ ಮತದಾನದ ವೇಳೆ ಗೈರುಹಾಜರಾಗಿದ್ದರು. ಒಂದು ದೇಶ – ಒಂದು ಚುನಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದಾಗ್ಯೂ, ಕೆಲವು ಕೇಂದ್ರ ಸಚಿವರು ಮತ್ತು ಸಂಸದರು ಅಧಿಕೃತ ಕಾರ್ಯಕ್ರಮಗಳು ಮೊದಲೇ ನಿಗದಿಪಡಿಸಿದ್ದರು, ಹಾಗಾಗಿ ತಾವು ಅಂದು ಸದನದಲ್ಲಿ ಇರುವುದಿಲ್ಲ ಎಂದು ಬಿಜೆಪಿಯ ಸದನದ ವ್ಯವಸ್ಥಾಪಕರಿಗೆ ತಿಳಿಸಿದ್ದರು ಎಂದು ವರದಿಯಾಗಿದೆ. ಒಟ್ಟು 461 ಮತಗಳಲ್ಲಿ 269 ಸಂಸದರು ವಿಧೇಯಕಗಳನ್ನು ಮಂಡಿಸುವ ಪರವಾಗಿ ಮತ ಚಲಾಯಿಸಿದರೆ, ವಿಪಕ್ಷಗಳ 198 ಸಂಸದರು ಪ್ರಸ್ತಾವನೆಯ ವಿರುದ್ಧವಾಗಿ ಮತ ಚಲಾಯಿಸಿದ್ದರು.

ಮಸೂದೆಗಳನ್ನು ಮಂಡಿಸಲು ಸರಳ ಬಹುಮತದ ಅಗತ್ಯವಿದ್ದರೂ, ಸಂವಿಧಾನ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲು 307 ಸಂಸದರ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ. ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯು ಮಾಡಿದ ಶಿಫಾರಸುಗಳನ್ನು ಅನುಸರಿಸಿ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾಪವನ್ನು ಮಾಡಲಾಗಿದೆ.

ಏಕಕಾಲದ ಚುನಾವಣೆಯ 100 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಒಟ್ಟುಗೂಡಿಸುವ ಮೊದಲು ರಾಷ್ಟ್ರೀಯ ಮತ್ತು ರಾಜ್ಯ ಚುನಾವಣೆಗಳಿಂದ ಪ್ರಾರಂಭಿಸಿ ಹಂತ ಹಂತದ ವಿಧಾನವನ್ನು ಸಮಿತಿಯು ಸೂಚಿಸಿತ್ತಿ. ಸಂಸತ್ತಿನಲ್ಲಿ ಮಸೂದೆಗಳು ಅಂಗೀಕಾರಗೊಂಡರೂ, ಏಕಕಾಲಿಕ ಚುನಾವಣೆಗಳ ಅನುಷ್ಠಾನಕ್ಕೆ ಕಾಲಮಿತಿ ಸ್ಪಷ್ಟ ಹೇಳಲಾಗಿಲ್ಲ.

ಮಂಗಳವಾರ, ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಸೂದೆಗಳ ಪರಿಚಯದ ವೇಳೆ ನಡೆದ ಮತದಾನವು ಸಾಂವಿಧಾನಿಕ ತಿದ್ದುಪಡಿಯನ್ನು ಅಂಗೀಕರಿಸಲು ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತವನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ತೋರಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...