ರಾಜ್ಯಸಭೆಯಲ್ಲಿ ಮಾತನಾಡುವ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿದೆ.
ಇಂದು (ಡಿ.18) ಸಂಸತ್ತಿನ ಬಳಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸಂಸದರು, ಅಮಿತ್ ಶಾ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಮತ್ತು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
BJP-RSS and their political ancestors stood for Manusmriti and against the Constitution of India.
They opposed the National Flag — Tiranga and they opposed Ashok Chakra.
They burnt the copies of the Constitution at Ramleela Maidan.
When their ploy of “400 Paar” and changing… pic.twitter.com/1QsvsH0iit
— Mallikarjun Kharge (@kharge) December 18, 2024
ಮಾಧ್ಯಮಗಳೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಅಮಿತ್ ಶಾ ಅವರ ರಾಜೀನಾಮೆಗೆ ನಾವು ಒತ್ತಾಯಿಸುತ್ತಿದ್ದೇವೆ. ಅವರು ದೇಶದ ಕ್ಷಮೆ ಕೇಳಬೇಕು” ಎಂದು ಹೇಳಿದರು.
We demand Home Minister Amit Shah’s resignation.
बाबासाहेब डॉ आंबेडकर जी का अपमान,
नहीं सहेगा हिन्दुस्तान ! pic.twitter.com/jqiNajLOrc— Mallikarjun Kharge (@kharge) December 18, 2024
ಕಾಂಗ್ರೆಸ್ ಸಂಸದ ನೀರಜ್ ಡಾಂಗಿ ಮಾತನಾಡಿ, “ತನ್ನ ಹೇಳಿಕೆಗೆ ಸಂಬಂಧಿಸಿದಂತೆ ಅಮಿತ್ ಶಾ ಕ್ಷಮೆ ಯಾಚಿಸಬೇಕು” ಎಂದು ಒತ್ತಾಯಿಸಿದರು. ಅಂಬೇಡ್ಕರ್ ಹೆಸರು ಬಳಸುವುದು ಫ್ಯಾಷನ್ ಆಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಈ ಮೂಲಕ ಬಾಬಾ ಸಾಹೇಬರು ಮತ್ತು ದೇಶದ ದಲಿತರಿಗೆ ಅವಮಾನ ಮಾಡಿದ್ದಾರೆ. ವಂಚಿತ ಮತ್ತು ಶೋಷಿತ ವರ್ಗದವರನ್ನು ಅವಮಾನಿಸಿದ್ದಾರೆ. ಇದೇ ವರ್ಗ ಅವರನ್ನು 240ರಿಂದ 40ಕ್ಕೆ ಇಳಿಸಲಿದೆ. ಅಮಿತ್ ಶಾ ತನ್ನ ಹೇಳಿಕೆ ಮೂಲಕ ಬಿಜೆಪಿ ನಾಯಕರಿಗೆ ಯಾವ ರೀತಿಯ ಚಿಂತನೆ ಇದೆ ಎಂದು ಇಡೀ ದೇಶಕ್ಕೆ ತಿಳಿಸಿದ್ದಾರೆ ಎಂದರು.
“ಅಮಿತ್ ಶಾ ಅವರು ಸಾರ್ವಜನಿಕವಾಗಿ ಮತ್ತು ಸದನದಲ್ಲಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ನಾನು ಒತ್ತಾಯಿಸುತ್ತೇನೆ ಎಂದು ಹೇಳಿದರು. ಅಂಬೇಡ್ಕರ್ ಅವರ ಬಗ್ಗೆ ಹೇಳಿಕೆ ನೀಡುವ ಮೂಲಕ ಸಾಂವಿಧಾನಿಕ ಹುದ್ದೆ ಹೊಂದುವ ಅರ್ಹತೆಯನ್ನು ಅಮಿತ್ ಶಾ ಕಳೆದುಕೊಂಡಿದ್ದಾರೆ. ಅವರು ಗೃಹ ಸಚಿವರ ಹುದ್ದೆಗೆ ರಾಜೀನಾಮೆ ನೀಡಲೇಬೇಕು” ಎಂದು ಆಗ್ರಹಿಸಿದರು.
ಸಂವಿಧಾನದ ಮೇಲಿನ ಚರ್ಚೆಯ ವೇಳೆ ರಾಜ್ಯಸಭೆಯಲ್ಲಿ ಅಮಿತ್ ನೀಡಿರುವ ಹೇಳಿಕೆಯು ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರಿಗೆ ಅಂಬೇಡ್ಕರ್ ಮೇಲೆ ‘ಅಸಾಧಾರಣ ದ್ವೇಷ’ ಇದೆ ಎಂಬುವುದನ್ನು ತೋರಿಸಿದೆ. ಅಮಿತ್ ಶಾ ಕ್ಷಮೆಯಾಚಿಸಲೇಬೇಕು ಎಂದು ಕಾಂಗ್ರೆಸ್‌ನ ಇತರ ನಾಯಕರೂ ಹೇಳಿದ್ದಾರೆ.
“ಮನುಸ್ಮೃತಿಯಲ್ಲಿ ನಂಬಿಕೆ ಇರುವವರು ಅಂಬೇಡ್ಕರ್ ಅವರ ಜೊತೆ ಭಿನ್ನಾಭಿಪ್ರಾಯ ಹೊಂದಿರುವುದು ನಿಜ” ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯಸಭೆಯಲ್ಲಿ ಅಮಿತ್ ಶಾ ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್, ” ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೇಲೆ ಭಾರೀ ದ್ವೇಷವಿದೆ ಎಂಬುವುದನ್ನು ಇದು ತೋರಿಸುತ್ತದೆ” ಎಂದಿದ್ದಾರೆ.
"अभी एक फैशन हो गया है- अंबेडकर, अंबेडकर, अंबेडकर, अंबेडकर, अंबेडकर..
इतना नाम अगर भगवान का लेते तो सात जन्मों तक स्वर्ग मिल जाता."
अमित शाह ने बेहद घृणित बात की है.
इस बात से जाहिर होता है कि BJP और RSS के नेताओं के मन में बाबा साहेब अंबेडकर जी को लेकर बहुत नफरत है.
नफरत… pic.twitter.com/UMvMAq43O8
— Jairam Ramesh (@Jairam_Ramesh) December 17, 2024
“ಬಾಬಾ ಸಾಹೇಬರ ಹೆಸರು ಕೇಳಿದರೆ ಕೆರಳುವಷ್ಟು ದ್ವೇಷ ಬಿಜೆಪಿ ನಾಯಕರಿಗಿದೆ. ಇವರ ಪೂರ್ವಜರು ಬಾಬಾ ಸಾಹೇಬರ ಪ್ರತಿಕೃತಿಯನ್ನು ಸುಟ್ಟು ಹಾಕಿದರು. ಬಾಬಾ ಸಾಹೇಬರು ನೀಡಿದ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತಾನಾಡುತ್ತಿದ್ದರು. ಯಾವಾಗ ಜನರು ಇವರಿಗೆ ತಕ್ಕ ಪಾಠ ಕಲಿಸಿದರೋ, ಈಗ ಬಾಬಾ ಸಾಹೇಬರ ಹೆಸರು ಹೇಳುವವರ ವಿರುದ್ದ ದ್ವೇಷ ಕಾರುತ್ತಿದ್ದಾರೆ. ಇದು ನಾಚಿಕೆಗೇಡು, ಅಮಿತ್ ಶಾ ದೇಶದ ಕ್ಷಮೆ ಯಾಚಿಸಬೇಕು” ಎಂದು ಜೈರಾಮ್ ರಮೇಶ್ ಒತ್ತಾಯಿಸಿದ್ದಾರೆ.
ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣದ ಕುರಿತ ಎರಡು ದಿನಗಳ ಚರ್ಚೆಯನ್ನು ಮುಕ್ತಾಯಗೊಳಿಸಿ ಮಂಗಳವಾರ (ಡಿ.17) ಸಂಸತ್ತಿನಲ್ಲಿ ಮಾತನಾಡಿದ ಅಮಿತ್ ಶಾ, “ಕಾಂಗ್ರೆಸ್ ತುಷ್ಠೀಕರಣ ರಾಜಕಾರಣವನ್ನು ಮುಂದುವರೆಸಿಕೊಂಡು ಬಂದಿದೆ. ಈಗ ಮುಸ್ಲಿಮರಿಗೆ ಮೀಸಲಾತಿ ಒದಗಿಸಲು ಮೀಸಲಾತಿ ಮಿತಿ ಶೇ.50 ಅನ್ನು ತೆಗೆಯಲು ಬಯಸಿದೆ” ಎಂದಿದ್ದಾರೆ.
ಕಾಂಗ್ರೆಸ್ ಮುಸ್ಲಿಂ ವೈಯಕ್ತಿಕ ಕಾನೂನನ್ನು ಬೆಂಬಲಿಸುತ್ತದೆಯೇ? ಎಂದು ಪ್ರಶ್ನಿಸಿದ ಅಮಿತ್ ಶಾ, ಪಕ್ಷವು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಯಾವತ್ತೂ ಕೆಲಸ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ಬಿಜೆಪಿ ಈಗಾಗಲೇ ಉತ್ತರಾಖಂಡದಲ್ಲಿ ಸಮಾನ ನಾಗರಿಕ ಸಂಹಿತೆ (ಏಕರೂಪ ನಾಗರಿಕ ಸಂಹಿತೆ) ಜಾರಿಗೆ ತಂದಿದ್ದು, ಎಲ್ಲಾ ರಾಜ್ಯಗಳಲ್ಲಿ ಅದನ್ನು ಜಾರಿಗೊಳಿಸಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಇದೇ ವೇಳೆ, “ಅಂಬೇಡ್ಕರ್, ಅಂಬೇಡ್ಕರ್ ಎಂದು ಹೇಳುವುದು ಈಗ ಫ್ಯಾಷನ್ ಆಗಿಬಿಟ್ಟಿದೆ, ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಏಳು ಜನ್ಮದವರೆಗೂ ಸ್ವರ್ಗ ಸಿಗುತಿತ್ತು” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನೂ ಓದಿ : ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ


