ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಯಿಂದ ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸೋತ ವಾರಗಳ ನಂತರ ಎನ್‌ಸಿಪಿ-ಎಸ್‌ಪಿ ಮುಖ್ಯಸ್ಥ ಶರದ್ ಪವಾರ್ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ. ಆದರೆ, ಭೇಟಿಯ ವೇಳೆ ಅವರು ರಾಜ್ಯದ ರೈತರಿಬ್ಬರನ್ನು ಮೋದಿಗೆ ಭೇಟಿ ಮಾಡಿಸಿದ್ದಾಗಿ ವರದಿ ಹೇಳಿವೆ. ಪ್ರಧಾನಿ ಮೋದಿಯನ್ನು
ಶರದ್ ಪವಾರ್ ಅವರು ಪಶ್ಚಿಮ ಮಹಾರಾಷ್ಟ್ರದ ಫಾಲ್ತಾನ್‌ನ ಇಬ್ಬರು ರೈತರೊಂದಿಗೆ ಸಂಸತ್ತಿನ ಅವರ ಕಚೇರಿಯಲ್ಲಿ ಪ್ರಧಾನಿಯನ್ನು ಭೇಟಿ ಮಾಡಿದ್ದಾರೆ. ದಾಳಿಂಬೆ ಬೆಳೆಯುವ ರೈತರ ಸಮಸ್ಯೆಗೆ ಸಂಬಂಧಿಸಿದಂತೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ. ಈ ವೇಳೆ ಅವರು ರೈತರ ಜಮೀನಿನಲ್ಲಿ ಬೆಳೆದ ದಾಳಿಂಬೆ ಪೆಟ್ಟಿಗೆಯನ್ನು ಅವರಿಗೆ ನೀಡಿದ್ದಾಗಿ ವರದಿ ಹೇಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
#WATCH | Delhi: NCP-SCP chief Sharad Pawar met PM Narendra Modi today in the Parliament regarding pomegranate issue of farmers.
Visuals as he leaves from the Parliament. pic.twitter.com/5diMYHVCno
— ANI (@ANI) December 18, 2024
ಇತ್ತೀಚೆಗಷ್ಟೆ, ಶರದ್ ಪವಾರ್ ಅವರು ಫೆಬ್ರವರಿಯಲ್ಲಿ ರಾಷ್ಟ್ರ ರಾಜಧಾನಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ನಡೆಯಲಿರುವ 98 ನೇ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲು ಆಹ್ವಾನಿಸಿ ಪ್ರಧಾನಿಗೆ ಪತ್ರ ಬರೆದಿದ್ದರು. ಆದರೆ, ಈ ಭೇಟಿಯಲ್ಲಿಅವರು ಸಾಹಿತ್ಯ ಸಮ್ಮೇಳನದ ವಿಷಯವನ್ನು ಪ್ರಸ್ತಾಪಿಸಿಲ್ಲ ಎಂದು ಪವಾರ್ ಪ್ರಧಾನಿ ಭೇಟಿಯ ನಂತರ ಹೇಳಿದ್ದಾರೆ. ಪ್ರಧಾನಿ ಮೋದಿಯನ್ನು
ಕಳೆದ ತಿಂಗಳು ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಎನ್‌ಸಿಪಿ(ಎಸ್‌ಪಿ)-ಶಿವಸೇನೆ(ಯುಬಿಟಿ)ಯ ಎಂವಿಎ ಮೈತ್ರಿಕೂಟವು ಬಿಜೆಪಿ-ಶಿವಸೇನೆ-ಎನ್‌ಸಿಪಿಯ ಮಹಾಯುತಿ ಮೈತ್ರಿಕೂಟದ ವಿರುದ್ಧ ಹೀನಾಯ ಸೋಲನ್ನು ಎದುರಿಸಿತ್ತು. 288 ಸದಸ್ಯರ ವಿಧಾನಸಭೆಯಲ್ಲಿ ಮಹಾಯುತಿ 235 ಸ್ಥಾನಗಳನ್ನು ಗೆದ್ದರೆ, ಎಂವಿಎ 46ಕ್ಕೆ ಸೀಮಿತವಾಯಿತು.
ಇದನ್ನೂ ಓದಿ: ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ
ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ


