ತೆಲಂಗಾಣದ ಖಮ್ಮಂ ಪಟ್ಟಣದ ದಾನವಾಯಿಗುಡೆಂನಲ್ಲಿರುವ ಬಿಸಿ ಕಲ್ಯಾಣ ಹಾಸ್ಟೆಲ್‌ನಲ್ಲಿ ವಾಸಿಸುತ್ತಿರುವ 10 ನೇ ತರಗತಿ ವಿದ್ಯಾರ್ಥಿಯು ಕಾಲು ಮತ್ತು ತೋಳಿನ ಪಾರ್ಶ್ವವಾಯುವಿಗೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ. ವಿದ್ಯಾರ್ಥಿಯು ಇಲಿ ಕಚ್ಚಿದ ನಂತರ ನೀಡಲಾದ ಆಂಟಿ-ರೇಬೀಸ್ ಲಸಿಕೆಯ ಓವರ್ ಡೋಸ್‌ನಿಂದ ಈ ಸ್ಥಿತಿ ಉಂಟಾಗಿದೆ ಎಂದು ಹೇಳಲಾಗಿದೆ.
ಭಾನುವಾರ ರಾತ್ರಿ ನಡೆದ ಈ ಘಟನೆಯು ಹಾಸ್ಟೆಲ್‌ನಲ್ಲಿನ ವಿದ್ಯಾರ್ಥಿಗಳ ಪರಿಸ್ಥಿತಿ, ವೈದ್ಯಕೀಯ ನಿರ್ಲಕ್ಷ್ಯದ ಬಗ್ಗೆ ಕಳವಳ ಮೂಡಿಸಿದೆ. ಸರ್ಕಾರ ನಡೆಸುವ ವಸತಿ ಸೌಲಭ್ಯಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಆಡಳಿತ ವಿಫಲವಾಗಿದೆ ಎಂದು ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿವೆ.
ರಘುನಾಡಪಾಲೆಂ ಮಂಡಲದ ಸರ್ಕಾರಿ ಹಿಂದುಳಿದ ವರ್ಗಗಳ ಬಾಲಕಿಯರ ವಸತಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸಮುದ್ರ ಲಕ್ಷ್ಮೀ ಭವಾನಿ ಕೀರ್ತಿಗೆ ಅನೇಕ ಇಲಿಗಳ ಕಡಿತದ ನಂತರ ಆಂಟಿ ರೇಬಿಸ್ ಲಸಿಕೆ ಕೊಡಿಸಲಾಗಿತ್ತು. ಭಾನುವಾರ ರಾತ್ರಿ ಮತ್ತೆ ಆಕೆಗೆ ಮತ್ತ ಇಲಿ ಕಚ್ಚಿದ್ದು, ಹಾಸ್ಟೆಲ್ ಸಿಬ್ಬಂದಿ ತಾಯಿಗೆ ಮಾಹಿತಿ ನೀಡಿದ್ದಾರೆ. ಆಕೆಯ ಸ್ಥಿತಿ ಹದಗೆಟ್ಟ ನಂತರ ಉನ್ನತ ವೈದ್ಯಕೀಯ ಚಿಕಿತ್ಸೆಗಾಗಿ ಕೀರ್ತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೈದ್ಯಕೀಯ ಮೂಲಗಳ ಪ್ರಕಾರ, ಆಕೆಯ ಆರೋಗ್ಯ ಈಗ ಸ್ಥಿರವಾಗಿದೆ ಎಂದು ವರದಿಯಾಗಿದೆ. ಆದರೂ, ಈ ಘಟನೆಯು ಆಕ್ರೋಶವನ್ನು ಹುಟ್ಟುಹಾಕಿದೆ. ಹಾಸ್ಟೆಲ್ ನೈರ್ಮಲ್ಯ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಕಾಪಾಡುವಲ್ಲಿ ಮೇಲ್ವಿಚಾರಕರ ತೀವ್ರ ಲೋಪ ಕಂಡುಬಂದಿದೆ.
ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕ ಹರೀಶ್ ರಾವ್ ಅವರು ಎಕ್ಸ್ ಪೋಸ್ಟ್‌ನಲ್ಲಿ ಘಟನೆಯನ್ನು ದುರಂತ ಎಂದು ಕರೆದಿದ್ದಾರೆ. ವಿದ್ಯಾರ್ಥಿಗಳ ದುಃಸ್ಥಿತಿಗೆ ಕಾಂಗ್ರೆಸ್ ಸರ್ಕಾರವನ್ನು ದೂಷಿಸಿದ್ದಾರೆ. “ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.
ಘಟನೆಯನ್ನು ಜಿಲ್ಲಾ ಸಂಯೋಜಕಿ ಜ್ಯೋತಿರ್ಮಾಯಿ ದೃಢಪಡಿಸಿದ್ದು, ಇಲಿಗಳ ಹಾವಳಿ ಮತ್ತು ನಂತರದ ವೈದ್ಯಕೀಯ ಚಿಕಿತ್ಸೆಗೆ ಕಾರಣವಾದ ಸಂದರ್ಭಗಳ ಬಗ್ಗೆ ತನಿಖೆ ನಡೆಸಲು ಜಿಲ್ಲಾಧಿಕಾರಿ ಮುಝಮ್ಮಿಲ್ ಖಾನ್ ಅವರು ಇಲಾಖಾ ತನಿಖೆಗೆ ಆದೇಶಿಸಿದ್ದಾರೆ.
ಇದನ್ನೂ ಓದಿ; ಶಿಕ್ಷಕಿಯರ ಶೌಚಾಲಯದಲ್ಲಿ ಗುಪ್ತ ಕ್ಯಾಮೆರಾ: ಶಾಲೆಯ ನಿರ್ದೇಶಕನ ಬಂಧನ


