ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್ ಅವರಿಗೆ ಕರ್ಕರ್ಡೂಮಾ ಕೋರ್ಟ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜ್‌ಪೈ ಅವರು ಬುಧವಾರ ಕುಟುಂಬ ವಿವಾಹದಲ್ಲಿ ಪಾಲ್ಗೊಳ್ಳಲು ಏಳು ದಿನಗಳ ಮಧ್ಯಂತರ ಜಾಮೀನಿಗೆ ಅನುಮತಿ ನೀಡಿದ್ದಾರೆ. 2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ಪಿತೂರಿಗೆ ಸಂಬಂಧಿಸಿದ ಯುಎಪಿಎ ಪ್ರಕರಣದಲ್ಲಿ ಅವರು ಕಳೆದ ನಾಲ್ಕು ವರ್ಷಗಳಿಂದ ಜೈಲಿನಲ್ಲಿ ಇದ್ದಾರೆ.
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪಿತೂರಿ, ಗಲಭೆ ಮತ್ತು ಇತರ ಅಪರಾಧಗಳ ಆರೋಪ ಹೊರಿಸಲಾದ ಖಾಲಿದ್ ಸೆಪ್ಟೆಂಬರ್ 2020 ರಿಂದ ಬಂಧನದಲ್ಲಿದ್ದಾರೆ. ಅವರ ಹಿಂದಿನ ಜಾಮೀನು ಅರ್ಜಿಗಳನ್ನು ಮಾರ್ಚ್ 2022 ರಲ್ಲಿ ವಿಚಾರಣಾ ನ್ಯಾಯಾಲಯ ಮತ್ತು ಅಕ್ಟೋಬರ್ 2022 ರಲ್ಲಿ ಹೈಕೋರ್ಟ್ ತಿರಸ್ಕರಿಸಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಇದರ ನಂತರ, ಉಮರ್ ಖಾಲಿದ್ ಅವರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಸುಪ್ರಿಂಕೋರ್ಟ್ ಮೇ 2023 ರಲ್ಲಿ ಪ್ರತಿಕ್ರಿಯೆ ನೀಡುವಂತೆ ದೆಹಲಿ ಪೊಲೀಸರಿಗೆ ನಿರ್ದೇಶಿಸಿತು. ಆದಾಗ್ಯೂ, ಹಲವು ಮುಂದೂಡಿಕೆಗಳ ನಂತರ, ಬದಲಾದ ಸಂದರ್ಭಗಳನ್ನು ಉಲ್ಲೇಖಿಸಿ ಉಮರ್ ಖಾಲಿದ್ ತನ್ನ ಅರ್ಜಿಗಳನ್ನು ಹಿಂತೆಗೆದುಕೊಂಡರು ಮತ್ತು ಹೊಸ ಮೇಲ್ಮನವಿಯನ್ನು ಸಲ್ಲಿಸಿದ್ದರು. ಹೋರಾಟಗಾರ ಉಮರ್
ದೆಹಲಿ ಪೊಲೀಸ್ ವಿಶೇಷ ಘಟಕದಿಂದ ಎಫ್‌ಐಆರ್ 59/2020 ನಂತೆ ದಾಖಲಿಸಲಾದ ಪ್ರಕರಣವು ಭಾರತೀಯ ದಂಡ ಸಂಹಿತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 ರ ಅಡಿಯಲ್ಲಿ ಆರೋಪಗಳನ್ನು ಉಮರ್ ಖಾಲಿದ್ ವಿರುದ್ಧ ಹೊರಿಸಲಾಗಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿ ಎಎಪಿ ನಾಯಕ ತಾಹಿರ್ ಹುಸೇನ್, ಖಾಲಿದ್ ಸೈಫಿ, ಇಶ್ರತ್ ಜಹಾನ್, ಮೀರನ್ ಹೈದರ್ ಮತ್ತು ಇತರರು ಇದ್ದಾರೆ.
ಇದನ್ನೂ ಓದಿ: ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ
ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ


