Homeಮುಖಪುಟಆಸ್ಕರ್ ಪ್ರಶಸ್ತಿ ರೇಸ್‌ನಿಂದ ಹೊರಬಿದ್ದ ಭಾರತೀಯ ಚಿತ್ರ 'ಲಾಪತಾ ಲೇಡೀಸ್'

ಆಸ್ಕರ್ ಪ್ರಶಸ್ತಿ ರೇಸ್‌ನಿಂದ ಹೊರಬಿದ್ದ ಭಾರತೀಯ ಚಿತ್ರ ‘ಲಾಪತಾ ಲೇಡೀಸ್’

- Advertisement -
- Advertisement -

ಬಹು ನಿರೀಕ್ಷಿತ ಆಸ್ಕರ್ 2025ರ ಪಶಸ್ತಿ ರೇಸ್‌ನಿಂದ ಭಾರತದಿಂದ ಅಧಿಕೃತ ಪ್ರವೇಶ ಪಡೆದಿದ್ದ ‘ಲಾಪತಾ ಲೇಡೀಸ್’ ಸಿನಿಮಾ ಹೊರ ಬಿದ್ದಿದೆ.

97ನೇ ಅಕಾಡೆಮಿ ಅವಾರ್ಡ್ಸ್‌ನ ‘ಬೆಸ್ಟ್‌ ಇಂಟರ್‌ನ್ಯಾಷನಲ್ ಫೀಚರ್’ ವಿಭಾಗದಲ್ಲಿ ಲಾಪತಾ ಲೇಡೀಸ್ ಸ್ಪರ್ಧಿಸಿತ್ತು. ಮಂಗಳವಾರ (ಡಿ.17) ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಆ್ಯಂಡ್‌ ಸೈನ್ಸ್‌ (ಎಎಂಪಿಎಸ್‌) ಶಾರ್ಟ್‌ ಲಿಸ್ಟ್‌ ಮಾಡುವಾಗ ಹೊರಗುಳಿದಿದೆ.

ಬಾಲಿವುಡ್ ನಟ ಅಮೀರ್ ಖಾನ್ ನಿರ್ಮಿಸಿದ ಮತ್ತು ಅವರ ಮಾಜಿ ಪತ್ನಿ ಕಿರಣ್ ರಾವ್ ನಿರ್ದೇಶಿಸಿದ ಹಿಂದಿ ಚಿತ್ರ ಲಾಪತಾ ಲೇಡೀಸ್, ಇಬ್ಬರು ನವ ವಿವಾಹಿತ ಹೆಣ್ಣು ಮಕ್ಕಳು ತಮ್ಮ ಗಂಡನ ಮನೆಗೆ ರೈಲಿನಲ್ಲಿ ಪ್ರಯಾಣಿಸುವಾಗ ಆಕಸ್ಮಿಕವಾಗಿ ಸ್ಥಳಗಳನ್ನು ಬದಲಾಯಿಸುವ ಕಥೆಯೊಂದಿಗೆ ಸಾಗುತ್ತದೆ.

ಈ ಚಿತ್ರದಲ್ಲಿ ಪ್ರತಿಭಾ ರಂತ, ಸ್ಪರ್ಶ ಶ್ರೀವಾಸ್ತವ ಮತ್ತು ನಿತಾಂಶಿ ಗೋಯೆಲ್ ನಟಿಸಿದ್ದಾರೆ. ಇದು ಭಾರತದಲ್ಲಿ 1 ಮಾರ್ಚ್ 2024 ರಂದು ಬಿಡುಗಡೆಯಾಯಿತು ಮತ್ತು ಏಪ್ರಿಲ್‌ನಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್‌ಗೆ ಲಭ್ಯವಾಯಿತು.

ಲಾಪತಾ ಲೇಡೀಸ್ ಚಿತ್ರ ಆಸ್ಕರ್ ಪ್ರಶಸ್ತಿಯ ಅಂತಿಮ 15ರ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದೆ ಎಂದು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆ್ಯಂಡ್‌ ಸೈನ್ಸ್‌ ತಿಳಿಸಿದೆ.

ಆದರೆ, ಬ್ರಿಟನ್-ಭಾರತ ಮೂಲದ ನಿರ್ಮಾಪಕಿ ಸಂಧ್ಯಾ ಸೂರಿ ಅವರ’ ಸಂತೋಷ್‌’ ಪ್ರಶಸ್ತಿ ರೇಸ್‌ನಲ್ಲಿ ಕಾಣಿಸಿಕೊಂಡಿದೆ. ಬ್ರಿಟನ್ ದೇಶವನ್ನು ಪ್ರತಿನಿಧಿಸುವ ಈ ಹಿಂದಿ ಚಿತ್ರದಲ್ಲಿ ಭಾರತೀಯರಾದ ಶಹಾನಾ ಗೋಸ್ವಾಮಿ ಮತ್ತು ಸುನೀತಾ ರಾಜ್‌ವರ್ ನಟಿಸಿದ್ದಾರೆ.

ಆಸ್ಕರ್ ಪ್ರಶಸ್ತಿಗಾಗಿ 85 ದೇಶಗಳು ತಮ್ಮ ಚಿತ್ರಗಳನ್ನು ಅಧಿಕೃತ ನಾಮನಿರ್ದೇಶನ ಮಾಡಿತ್ತು. ಈ ಪೈಕಿ ನೀಕ್ಯಾಪ್ (ಐರ್ಲೆಂಡ್), ಐ ಐ ಆ್ಯಮ್ ಸ್ಟಿಲ್ ಹಿಯರ್ (ಬ್ರೆಝಿಲ್), ಹೌ ಟು ಮೇಕ್ ಮಿಲಿಯನ್ಸ್ ಬಿಫೋರ್ ಗ್ರಾಂಡ್‌ಮ ಡೈಸ್ (ಥೈಲ್ಯಾಂಡ್), ಯೂನಿವರ್ಸಲ್ ಲಾಂಗ್ವೆಜ್ (ಕೆನಡಾ), ಅರ್ಮಂಡ್ (ನಾರ್ವೆ), ಟಚ್‌ (ಐಸ್‌ಲ್ಯಾಂಡ್), ದಿ ಗರ್ಲ್ ವಿಥ್ ದಿ ನೀಡ್ಲ್ (ಡೆನ್ಮಾರ್ಕ್), ದಹೋಮಿ (ಸೆನೆಗಲ್), ದಿ ಸೀಡ್ ಆಫ್ ಸೇಕ್ರೆಡ್ ಪಿಗ್ (ಜರ್ಮನಿ), ವೇವ್ಸ್ (ಜೆಕ್ ಗಣರಾಜ್ಯ), ಫ್ಲೋ (ಲಾಟ್ವಿಯಾ), ಫ್ರಂ ಗ್ರೌಂಡ್ ಝೀರೋ (ಪ್ಯಾಲೆಸ್ಟೈನ್), ಸಂತೋಷ್ (ಯುಕೆ) ಮತ್ತು ವೆರ್ಮಿಲಿಯೋ (ಇಟಲಿ) ಟಾಪ್ 15 ರಲ್ಲಿ ಸ್ಥಾನ ಪಡೆದಿವೆ ಎಂದು ಎಎಂಪಿಎಸ್‌ ತಿಳಿಸಿದೆ.

‘ಲಾಪತಾ ಲೇಡೀಸ್’ ಈ ವರ್ಷ ಆಸ್ಕರ್ ರೇಸ್‌ನಿಂದ ಹೊರಬಿದ್ದರೂ, ‘ಬೆಸ್ಟ್‌ ಲೈವ್-ಆಕ್ಷನ್ ಶಾರ್ಟ್‌ ಮೂವಿ’ ವಿಭಾಗಕ್ಕೆ ನಾಮನಿರ್ದೇಶನಗೊಂಡ ಗುನೀತ್ ಮೊಂಗಾ ಅವರ ಚಲನಚಿತ್ರ ‘ಅನುಜಾ’ ಮುಂದಿನ ಸುತ್ತಿಗೆ ಶಾರ್ಟ್‌ ಲಿಸ್ಟ್ ಅಗಿದೆ. ಅನುಜಾ ಭಾರತದಲ್ಲಿ ಗಾರ್ಮೆಂಟ್ ಉದ್ಯಮದಲ್ಲಿ ಕೆಲಸ ಮಾಡುವ ಮಕ್ಕಳ ಜೀವನದ ಸುತ್ತ ಸುತ್ತುತ್ತದೆ.

ಗುನೀತ್ ಮೊಂಗಾ ಅವರ ‘ದಿ ಎಲಿಫೆಂಟ್ ವಿಸ್ಪರರ್ಸ್’ ಅತ್ಯುತ್ತಮ ಸಾಕ್ಷ್ಯಚಿತ್ರ ಕಿರು ವಿಭಾಗದಲ್ಲಿ 2023ರಲ್ಲಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿರುವುದನ್ನು ಗಮನಾರ್ಹ.

ಇದನ್ನೂ ಓದಿ : Explainer | ಒಂದು ದೇಶ, ಒಂದು ಚುನಾವಣೆ : ಕೇಂದ್ರದ ಮಸೂದೆಯಲ್ಲಿ ಏನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...