ಸಂಭಾಲ್ ಹಿಂಸಾಚಾರದಲ್ಲಿ ದಾಖಲಾಗಿರುವ ಪ್ರಕರಣದ ಬಂಧನದಿಂದ ರಕ್ಷಣೆ ಕೋರಿ ಸಮಾಜವಾದಿ ನಾಯಕ ಮತ್ತು ಸಂಭಾಲ್ ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಅವರು ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ನವೆಂಬರ್ 24 ರಂದು ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವೇಳೆ ಸಂಭಾಲ್‌ನಲ್ಲಿ ಭುಗಿಲೆದ್ದ ಹಿಂಸಾಚಾರಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಹಿಂಸಾಚಾರದಲ್ಲಿ ಐದು ಮುಸ್ಲಿಮರು ಪ್ರಾಣ ಕಳೆದುಕೊಂಡಿದ್ದರು ಮತ್ತು ಅನೇಕ ಪೊಲೀಸರು ಗಾಯಗೊಂಡಿದ್ದರು. ಸಂಭಾಲ್ ಹಿಂಸಾಚಾರ
ಬಂಧನದಿಂದ ರಕ್ಷಣೆ ಕೋರಿ ಮಾಡಿದ ಮನವಿಯ ಜೊತೆಗೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಜಿಯಾ ಅವರು ಒತ್ತಾಯಿಸಿದ್ದಾರೆ. ಸಂಭಾಲ್ ಹಿಂಸಾಚಾರ ಪ್ರಕರಣದಲ್ಲಿ, ಶಾಹಿ ಜಾಮಾ ಮಸೀದಿಯಲ್ಲಿ ಸಮೀಕ್ಷೆ ವೇಳೆ ಹಿಂಸಾಚಾರಕ್ಕೆ ಅವರ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಆರೋಪಿಸಿ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ತನ್ನ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತ ಎಂದು ಬಾರ್ಕ್ ತನ್ನ ಅರ್ಜಿಯಲ್ಲಿ ವಾದಿಸಿದ್ದಾರೆ. ಹಿಂಸಾಚಾರದಲ್ಲಿ ತನ್ನ ಪಾತ್ರವನ್ನು ನಿರಾಕರಿಸಿರುವ ಅವರು, ಆಡಳಿತಾರೂಢ ಬಿಜೆಪಿ ತನ್ನ ವಿರುದ್ಧ “ಸೇಡು ತೀರಿಸಿಕೊಳ್ಳುತ್ತಿದೆ” ಎಂದು ಆರೋಪಿಸಿದ್ದು, ಸುಳ್ಳು ಆರೋಪಗಳ ಮೂಲಕ ಕಿರುಕುಳ ಮತ್ತು ಬೆದರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಹಿಂಸಾಚಾರ ಪ್ರಕರಣದಲ್ಲಿ, ಜಿಯಾ ಅವರನ್ನು ಹೊರತುಪಡಿಸಿ, ಯುಪಿ ಪೊಲೀಸರು ಸ್ಥಳೀಯ ಶಾಸಕ ಇಕ್ಬಾಲ್ ಮೆಹಮೂದ್ ಅವರ ಪುತ್ರ ಸೊಹೈಲ್ ಇಕ್ಬಾಲ್ ಅವರನ್ನು ಹೆಸರಿಸಿದ್ದಾರೆ. ಹಿಂಸಾಚಾರಕ್ಕೆ ಕೆಲವೇ ದಿನಗಳ ಮೊದಲು ಶಾಹಿ ಜಾಮಾ ಮಸೀದಿಗೆ ಭೇಟಿ ನೀಡಿದ್ದ ಜಿಯಾ ಅವರು, ಅಲ್ಲಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಹೇಳಿಕೆಯನ್ನು ನಿರಾಕರಿಸಿರುವ ಸಂಸದ ಜಿಯಾ ಅವರು ಘಟನೆ ಮತ್ತು ಸಮೀಕ್ಷೆಯ ವೇಳೆ ತಾನು ಬೆಂಗಳೂರಿನಲ್ಲಿದ್ದೆ ಎಂದು ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ
ಸಮುದಾಯದ ಸದಸ್ಯರನ್ನು ಸಮಾಧಾನಪಡಿಸಲು ಸಂಭಾಲ್‌ಗೆ ಮರಳಲು ಉದ್ದೇಶಿಸಿದ್ದೆ. ಆದರೆ ತನ್ನ ವಿರುದ್ಧದ ಎಫ್‌ಐಆರ್ ಬಗ್ಗೆ ತಿಳಿದ ನಂತರ ದೆಹಲಿಯಲ್ಲಿ ಉಳಿಯಲು ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಜಿಯಾ ಅವೆರು ತಾನು ಫೋನ್ ಮೂಲಕ ಜನರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೆ ಎಂದು ಹೇಳಿದ್ದಾರೆ.
ನವೆಂಬರ್ 19 ರಂದು, ಸಂಭಾಲ್‌ನ ಸಿವಿಲ್ ನ್ಯಾಯಾಲಯವು ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ಅವಕಾಶ ನೀಡಿತ್ತು. ಮಸೀದಿಯು ಹರಿಹರ ದೇವಾಲಯವಾಗಿತ್ತು ಎಂದು ಪ್ರತಿಪಾದಿಸಿ ವಕೀಲ ಹರಿಶಂಕರ್ ಜೈನ್ ಮತ್ತು ಇತರ ಏಳು ಮಂದಿ ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ನ್ಯಾಯಾಲಯ ಈ ಆದೇಶ ನೀಡಿತ್ತು. ಅದಾಗಿ, ನವೆಂಬರ್ 24 ರಂದು ಮಸೀದಿಯ ಸಮೀಕ್ಷೆಯನ್ನು ವಿರೋಧಿಸಿ ಜನರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಹಿಂಸಾಚಾರ ನಡೆದಿತ್ತು.
ಕಲ್ಲು ತೂರಾಟ, ವಿಧ್ವಂಸಕ ಕೃತ್ಯಗಳು ಮತ್ತು ಬೆಂಕಿ ಹಚ್ಚುವಿಕೆಯ ನಡುವೆ ನಾಲ್ವರು ಸಾವನ್ನಪ್ಪಿದ್ದರು ಎಂದು ವರದಿಯಾಗಿತ್ತು. ಐದನೇ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಗಲಭೆಯಲ್ಲಿ ನಾಲ್ವರು ವ್ಯಕ್ತಿಗಳ ಸಾವಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ.
ಇದನ್ನೂ ಓದಿ: ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ : ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ : ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ


