Homeಮುಖಪುಟಅಮಿತ್ ಶಾ ಹೇಳಿಕೆ ಬಿಜೆಪಿಯ ಹಳೆಯ ಮನಸ್ಥಿತಿಯ ಪ್ರತಿಬಿಂಬ - ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಅಂಬೇಡ್ಕರ್

ಅಮಿತ್ ಶಾ ಹೇಳಿಕೆ ಬಿಜೆಪಿಯ ಹಳೆಯ ಮನಸ್ಥಿತಿಯ ಪ್ರತಿಬಿಂಬ – ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಅಂಬೇಡ್ಕರ್

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನದ ಪಿತಾಮಹನ ಕುರಿತು ನೀಡಿರುವ ಹೇಳಿಕೆಯು ಬಿಜೆಪಿಯ ಅದೇ ಹಳೆಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಬುಧವಾರ ಆರೋಪಿಸಿದ್ದಾರೆ. “ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣ” ಎಂಬ ಎರಡು ದಿನಗಳ ಚರ್ಚೆಯ ಮುಕ್ತಾಯದಲ್ಲಿ ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈ ವೇಳೆ ಅಮಿತ್ ಶಾ ಅವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದರು. ಅಮಿತ್ ಶಾ ಹೇಳಿಕೆ

ರಾಜ್ಯಸಭೆಯಲ್ಲಿ ಮಾತನಾಡಿದ್ದ ಅಮಿತ್ ಶಾ ಅವರು, “ಅಭಿ ಏಕ್ ಫ್ಯಾಶನ್ ಹೋ ಗಯಾ ಹೈ – ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್. ಇತ್ನಾ ನಾಮ್ ಅಗರ್ ಭಗವಾನ್ ಕಾ ಲೇತೆ ತೋ ಸಾತ್ ಜನ್ಮೋನ್ ತಕ್ ಸ್ವರ್ಗ್ ಮಿಲ್ ಜಾತಾ” (ಈ ಒಂದು ಫ್ಯಾಶನ್ ಆಗಿ ಹೋಗಿದೆ. ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್… ಇಷ್ಟು ಬಾರಿ ಭಗವಂತನ ಹೆಸರನ್ನು ಹೇಳಿದ್ದರೆ, ಏಳು ಜನ್ಮಕ್ಕೂ ಸ್ವರ್ಗ ಸಿಗುತ್ತಿತ್ತು) ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬಿಜೆಪಿ ಅಸ್ತಿತ್ವಕ್ಕೆ ಬರುವ ಮೊದಲು, ಅದರ ಪೂರ್ವಜರಾದ ಜನಸಂಘ ಮತ್ತು ಆರೆಸ್ಸೆಸ್ ಸಂವಿಧಾನವನ್ನು ಅಂಗೀಕರಿಸುವಾಗ ಬಾಬಾಸಾಹೇಬ್ ಅವರನ್ನು ವಿರೋಧಿಸಿದ್ದವು” ಎಂದು ವಂಚಿತ್ ಬಹುಜನ ಅಘಾಡಿ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಪುಣೆಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಅಮಿತ್ ಶಾ ಅವರ ಹೇಳಿಕೆಯು ಬಿಜೆಪಿಯ ಅದೇ ಹಳೆಯ ಮನಸ್ಥಿತಿಯನ್ನು ಮುನ್ನೆಲೆಗೆ ತಂದಿದೆ ಎಂದು ಅವರು ಹೇಳಿದ್ದಾರೆ.

ಅವರ ಹೇಳಿಕೆಯಲ್ಲಿ ಹೊಸದೇನೂ ಇಲ್ಲ, ಅವರಿಗೆ ತಮ್ಮ ಹಳೆಯ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಾಧ್ಯವಾಗುತ್ತಿಲ್ಲ. ಅದು ಕಾಂಗ್ರೆಸ್‌ನಿಂದಾಗಿ ಅಲ್ಲ, ಬದಲಾಗಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಕಾರಣದಿಂದ ಅವರಿಗೆ ಅದು ಸಾಧ್ಯವಾಗುತ್ತಿಲ್ಲ ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ. ಅಮಿತ್ ಶಾ ಹೇಳಿಕೆ

ಇದೇ ವೇಳೆ, ಪರ್ಭಾನಿ ನಗರದಲ್ಲಿ ನಡೆದ ಸಂವಿಧಾನದ ಪ್ರತಿಕೃತಿಯನ್ನು ಅವಮಾನಿಸಿದ ಪ್ರಕರಣದ ವೇಳೆ ಭುಗಿಲೆದ್ದ ಹಿಂಸಾಚಾರದಲ್ಲಿ ಬಂಧಿತನಾಗಿ, ನ್ಯಾಯಾಂಗ ಬಂಧನದಲ್ಲಿದ್ದಾಗ ಮರಣ ಹೊಂದಿದ ಸೋಮನಾಥ ಸೂರ್ಯವಂಶಿಯ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಪ್ರಕಾಶ್ ಅಂಬೇಡ್ಕರ್ ಒತ್ತಾಯಿಸಿದ್ದಾರೆ.

ಈ ನಡುವೆ, ಅಂಬೇಡ್ಕರ್ ಅವರನ್ನು ಅವಮಾನ ಮಾಡಿರುವ ಅಮಿತ್ ಶಾ ಅವರು ತಮ್ಮ ಕೃತ್ಯಕ್ಕೆ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಇಂಡಿಯಾ ಒಕ್ಕೂಟದ ಹಲವಾರು ಸಂಸದರು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಮಿತ್ ಶಾ ಅವರು ಸಾರ್ವಜನಿಕವಾಗಿ ಮತ್ತು ಸಂಸತ್ತಿನಲ್ಲಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

“ಪರ್ಭಾನಿಯಲ್ಲಿ ನಡೆದ ಹಿಂಸಾಚಾರವು ಗೋದ್ರಾದಂತಹ ಪರಿಸ್ಥಿತಿಯನ್ನು ಸೃಷ್ಟಿಸುವ ಪ್ರಯತ್ನವಾಗಿದೆ” ಎಂದು ಅವರು ಆರೋಪಿಸಿದ್ದಾರೆ. ಈ ಹಿಂಸಾಚಾರವು ಇಬ್ಬರು ಮರಾಠ ನಾಯಕರ ನಡುವಿನ ವಿವಾದದ ಪರಿಣಾಮವಾಗಿದೆ ಎಂದು ಅವರು ಹೇಳಿದ್ದು, ಅಪರಾಧಿಗಳನ್ನು ಬಹಿರಂಗಪಡಿಸಲು ಸತ್ಯಶೋಧನಾ ಸಮಿತಿಯನ್ನು ರಚಿಸುವುದಾಗಿ ಘೋಷಿಸಿದ್ದಾರೆ.

ಲೋಕಸಭೆಯಲ್ಲಿ ಏಕಕಾಲಕ್ಕೆ ಚುನಾವಣೆಗೆ ಕಾರ್ಯವಿಧಾನವನ್ನು ಪರಿಚಯಿಸುವ ಮಸೂದೆಗಳ ಅಂಗೀಕಾರವು ರಾಜಕೀಯ ಪಕ್ಷಗಳ ಅಂತ್ಯವನ್ನು ಅರ್ಥೈಸುತ್ತದೆ ಎಂದು ಅವರು ಹೇಳಿದ್ದಾರೆ. “ಕಾಂಗ್ರೆಸ್‌ಗೆ ಈ ಮಸೂದೆಗಳ ಬಗ್ಗೆ ಗಟ್ಟಿ ನಿಲುವು ತೆಗೆದುಕೊಳ್ಳಲು ಕೇವಲ ಐದರಿಂದ ಆರು ದಿನಗಳು ಮಾತ್ರ ಇವೆ. ನಿಲುವು ತೆಗೆದುಕೊಳ್ಳಲು ವಿಫಲವಾದರೆ ಮತ್ತು ಮಸೂದೆಗಳ ಅಂಗೀಕಾರವಾದರೆ ರಾಜಕೀಯ ಪಕ್ಷಗಳ ಅಂತ್ಯ ಎಂದರ್ಥ. ಶರದ್ ಪವಾರ್ ನೇತೃತ್ವದ ಎನ್‌ಸಿಪಿಯ ನಿಲುವು ಇದರಲ್ಲಿ ನಿರ್ಣಾಯಕವಾಗಿದೆ” ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ಗೆ ಅವಮಾನ | ಅಮಿತ್ ಶಾ ವಿರುದ್ಧ ಟಿಎಂಸಿಯಿಂದ ಹಕ್ಕುಚ್ಯುತಿ ನೋಟಿಸ್

ಅಂಬೇಡ್ಕರ್‌ಗೆ ಅವಮಾನ | ಅಮಿತ್ ಶಾ ವಿರುದ್ಧ ಟಿಎಂಸಿಯಿಂದ ಹಕ್ಕುಚ್ಯುತಿ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...