Homeಕರ್ನಾಟಕಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ : ಮಂಡ್ಯದಲ್ಲಿ ಕುರಿ, ಕೋಳಿ ಸಂಗ್ರಹಕ್ಕೆ ಚಾಲನೆ

ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ : ಮಂಡ್ಯದಲ್ಲಿ ಕುರಿ, ಕೋಳಿ ಸಂಗ್ರಹಕ್ಕೆ ಚಾಲನೆ

- Advertisement -
- Advertisement -

ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಿರುವುದನ್ನು ವಿರೋಧಿಸಿ ‘ಮನೆಗೊಂದು ಕೋಳಿ, ಊರಿಗೊಂದು ಕುರಿ’ ಸಂಗ್ರಹ ಅಭಿಯಾನಕ್ಕೆ ಇಂದು (ಡಿ.19) ಚಾಲನೆ ನೀಡಲಾಗಿದೆ.

‘ಅಂದು ವಿಚಾರ ಕ್ರಾಂತಿ, ಇಂದು ಆಹಾರ ಕ್ರಾಂತಿ’ ಎಂಬ ಘೋಷಣೆಯಡಿ ಮಂಡ್ಯದ ಹಳೆ ಬೂದನೂರಿನಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರವಿ ಅವರು ಕೋಳಿ ಸಂಗ್ರಹಕ್ಕೆ ಚಾಲನೆ ನೀಡಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಕರುನಾಡು ಸೇವಕರ ಸಂಘಟನೆಯ ಎಂ.ಬಿ.ನಾಗಣ್ಣಗೌಡ ಅವರು, “ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ಬಡಿಸಲು ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಕುರಿ, ಕೋಳಿ ಸಂಗ್ರಹಿಸುವಂತೆ ಕರೆ ನೀಡಿದ್ದೇವೆ. ಸಾಹಿತ್ಯ ಸಮ್ಮೇಳನ ನಡೆಯುವ ಸ್ಥಳದಿಂದ 1 ಕಿ.ಮೀ ದೂರದಲ್ಲಿರುವ ಮಂಡ್ಯದ ಹಳೆ ಬೂದನೂರಿನಲ್ಲಿ ಕುರಿ, ಕೋಳಿ ಸಂಗ್ರಹ ಪ್ರಾರಂಭಿಸಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯದಾದ್ಯಂತ ಸಮಾನ ಮನಸ್ಕರು ಕುರಿ, ಕೋಳಿ ಕೊಡುತ್ತೇವೆ ಎಂದು ಮುಂದೆ ಬಂದಿದ್ದಾರೆ. ಸುಮಾರು 5-6 ಟನ್ ಕೋಳಿ ಸಂಗ್ರಹವಾಗುವ ನಿರೀಕ್ಷೆಯಿದೆ. ಇದರಿಂದ 50 ಸಾವಿರದಿಂದ 1 ಲಕ್ಷ ಜನರಿಗೆ ಮಾಂಸಾಹಾರ ನೀಡಬಹುದು ಎಂದು ತಿಳಿಸಿದ್ದಾರೆ.

ಸರ್ಕಾರದವರು ಸಾಹಿತ್ಯ ಸಮ್ಮೇಳನದ ಆಹಾರ ಸಮಿತಿ ಮೂಲಕ ಮಾಂಸಾಹಾರ ನೀಡಲು ಮುಂದೆ ಬಂದರೆ ನಾವು ಸಂಗ್ರಹಿಸಿರುವ ಸಾಮಾಗ್ರಿಗಳನ್ನು ಅವರಿಗೆ ನೀಡುತ್ತೇವೆ. ಇಲ್ಲದಿದ್ದರೆ ನಾವೇ ಮಾಂಸಾಹಾರ ತಯಾರಿಸಿ ಸಾಹಿತ್ಯ ಸಮ್ಮೇಳನದ ಮೈದಾನದಲ್ಲೇ ವಿತರಿಸುತ್ತೇವೆ ಎಂದು .ನಾಗಣ್ಣಗೌಡ ಹೇಳಿದ್ದಾರೆ.

ಇದನ್ನೂ ಓದಿ : “ಲೈಂಗಿಕ ಕಿರುಕುಳ ನೀಡಿರುವುದನ್ನು ಸ್ವತಃ ಯಡಿಯೂರಪ್ಪ ಒಪ್ಪಿದ್ದಾರೆ” : ಹೈಕೋರ್ಟ್‌ನಲ್ಲಿ ಸರ್ಕಾರದ ವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...