Homeಮುಖಪುಟಅಮಿತ್ ಶಾ ಹೇಳಿಕೆ ವಿರೋಧಿಸಿ ಪ್ರತಿಭಟನೆ; ಅಂಬೇಡ್ಕರ್‌ ಚಿತ್ರಗಳಿಂದ ಕಂಗೊಳಿಸಿದ ಸುವರ್ಣ ವಿಧಾನಸೌಧ

ಅಮಿತ್ ಶಾ ಹೇಳಿಕೆ ವಿರೋಧಿಸಿ ಪ್ರತಿಭಟನೆ; ಅಂಬೇಡ್ಕರ್‌ ಚಿತ್ರಗಳಿಂದ ಕಂಗೊಳಿಸಿದ ಸುವರ್ಣ ವಿಧಾನಸೌಧ

- Advertisement -
- Advertisement -

ರಾಜ್ಯಸಭೆಯಲ್ಲಿ ಮಾತನಾಡುವಾಗ ಅಂಬೇಡ್ಕರ್‌ ಅವರನ್ನು ಅಪಮಾನಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿರುವ ಕರ್ನಾಟಕ ಕಾಂಗ್ರೆಸ್‌ ಶಾಸಕರು, ಸಚಿವರು ಸುವರ್ಣಸೌಧದಲ್ಲಿ ಅಂಬೇಡ್ಕರ್ ಭಾವಚಿತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಬಳಿಕ ಅಂಬೇಡ್ಕರ್‌ ಚಿತ್ರವನ್ನು ವಿಧಾನಸಭೆಯ ತಮ್ಮ ಟೇಬಲ್‌ಗಳಲ್ಲಿ ಇರಿಸಲಾಗಿದ್ದು, ಸದನದ ತುಂಬ ಅಂಬೇಡ್ಕರ್‌ ಚಿತ್ರಗಳು ಕಂಗೊಳಿಸಿವೆ. ಅಂಬೇಡ್ಕರ್ ಅವರನ್ನು ಅಪಮಾನಿಸಿದ ಅಮಿತ್ ಶಾ ವಿರುದ್ಧ ಕಾಂಗ್ರೆಸ್‌ ಶಾಸಕರು ಘೋಷಣೆ ಕೂಗಿದ್ದಾರೆ. ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ.

ಕಾಂಗ್ರೆಸ್ಸಿಗರು ಅಂಬೇಡ್ಕರ್ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದರೆ, ಅಮಿತ್ ಶಾ ಅವರನ್ನು ಸಮರ್ಥಿಸಿಕೊಂಡ ಬಿಜೆಪಿ-ಜೆಡಿಎಸ್‌ ಶಾಸಕರು ಸದನದಿಂದ ಹೊರ ಹೋಗಿದ್ದಾರೆ. ಅಂಬೇಡ್ಕರ್ ವಿರುದ್ಧದ ಬಿಜೆಪಿ ನಿಲುವನ್ನು ಜೆಡಿಎಸ್‌ ಕೂಡ ಬೆಂಬಲಿಸಿದ್ದು, ಆಕ್ರೋಶಕ್ಕೆ ಗುರಿಯಾಗಿದೆ.

ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ: ಡಿ ಕೆ ಶಿವಕುಮಾರ್

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರು ಹೇಳುವ ಬದಲು ದೇವರ ನಾಮ ಜಪ ಮಾಡಿದ್ದರೆ ಮುಕ್ತಿ ದೊರೆಯುತ್ತಿತ್ತು ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಪ್ರಜಾಪ್ರಭುತ್ವಕ್ಕೆ ಮಾಡಿರುವ ಅಪಮಾನ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಂಬೇಡ್ಕರ್ ವಿರೋಧಿ ಹೇಳಿಕೆ ಖಂಡಿಸಿ ಬೆಳಗಾವಿ ಸುವರ್ಣ ವಿಧಾನಸೌಧದ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.

“ಅಂಬೇಡ್ಕರ್ ಹಾಗೂ ಸಂವಿಧಾನವನ್ನು ನಾವುಗಳು ಪ್ರತಿಪಾದನೆ ಮಾಡದೆ ಮತ್ತಿನ್ಯಾರು ಮಾಡಲು ಸಾಧ್ಯ? ಅಂಬೇಡ್ಕರ್ ನಮಗೆ ಸಂವಿಧಾನ ಕೊಟ್ಟವರು, ಅವರಿಗೆ ಗೌರವ ಕೊಡುವುದು ನಮ್ಮ ಕರ್ತವ್ಯ. ಬಸವಣ್ಣ ಅವರ ಕಾಯಕವೇ ಕೈಲಾಸ ತತ್ವದಲ್ಲಿ ನಾವೆಲ್ಲರೂ ನಂಬಿಕೆ ಇಟ್ಟಿರುವವರು” ಎಂದರು.

ಇದನ್ನೂ ಓದಿ; ಕಿಚ್ಚು ಹಚ್ಚಿದ ಅಮಿತ್ ಶಾ ಹೇಳಿಕೆ | ಸಂಸತ್‌ ಬಳಿ ಭಾರೀ ಪ್ರತಿಭಟನೆ ; ಇಂಡಿಯಾ-ಬಿಜೆಪಿ ಮುಖಾಮುಖಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...