Homeಮುಖಪುಟಶಾಲೆಗೆ ಮಾಂಸಾಹಾರ ತಂದಿದ್ದಕ್ಕಾಗಿ ಶಾಲೆಯಿಂದ ಹೊರಹಾಕಲ್ಪಟ್ಟ ಮಕ್ಕಳ ಪರ ಆದೇಶ ನೀಡಿದ ಹೈಕೋರ್ಟ್

ಶಾಲೆಗೆ ಮಾಂಸಾಹಾರ ತಂದಿದ್ದಕ್ಕಾಗಿ ಶಾಲೆಯಿಂದ ಹೊರಹಾಕಲ್ಪಟ್ಟ ಮಕ್ಕಳ ಪರ ಆದೇಶ ನೀಡಿದ ಹೈಕೋರ್ಟ್

- Advertisement -
- Advertisement -

ಊಟದ ಬುತ್ತಿಯಲ್ಲಿ ಮಾಂಸಾಹಾರ ತಂದ ಆರೋಪದ ಮೇಲೆ ಶಾಲೆಯಿಂದ ಹೊರಹಾಕಲ್ಪಟ್ಟ ಮೂವರು ಅಪ್ರಾಪ್ತ ಮಕ್ಕಳ ನೆರವಿಗೆ ಅಲಹಾಬಾದ್ ಹೈಕೋರ್ಟ್ ಬಂದಿದ್ದು, ಎರಡು ವಾರಗಳಲ್ಲಿ ಅವರನ್ನು ಬೇರೆ ಶಾಲೆಗೆ ಸೇರಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದೆ. ಶಾಲೆಗೆ ಮಾಂಸಾಹಾರ

ಅಮ್ರೋಹಾದ ಸಬ್ರಾ ಮತ್ತು ಇತರ ಮೂವರು ಸಲ್ಲಿಸಿದ ರಿಟ್ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮತ್ತು ಎಸ್‌.ಸಿ. ಶರ್ಮಾ ಅವರನ್ನೊಳಗೊಂಡ ಪೀಠವು ಎರಡು ವಾರಗಳ ಅವಧಿಯಲ್ಲಿ ಈ ಮಕ್ಕಳನ್ನು ಸಿಬಿಎಸ್‌ಇಗೆ ಸಂಯೋಜಿತವಾಗಿರುವ ಬೇರೆ ಯಾವುದಾದರೂ ಶಾಲೆಗೆ ಸೇರಿಸುವಂತೆ ಅಮ್ರೋಹದ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ನಿರ್ದೇಶಿಸಿದೆ. ಈ ನ್ಯಾಯಾಲಯದ ಮುಂದೆ ಅನುಸರಣೆಯ ಅಫಿಡವಿಟ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮತ್ತು ಎಸ್‌.ಸಿ. ಶರ್ಮಾ ಅವರನ್ನೊಳಗೊಂಡ ಪೀಠವು ಎರಡು ವಾರಗಳ ಅವಧಿಯಲ್ಲಿ ಸಿಬಿಎಸ್‌ಇಗೆ ಸಂಯೋಜಿತವಾಗಿರುವ ಬೇರೆ ಯಾವುದಾದರೂ ಶಾಲೆಯಲ್ಲಿ ಮಕ್ಕಳನ್ನು ಸೇರಿಸುವಂತೆ ಅಮ್ರೋಹದ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ನಿರ್ದೇಶಿಸಿದೆ. ಜೊತೆಗೆ ನ್ಯಾಯಾಲಯದ ಮುಂದೆ ಅನುಸರಣೆಯ ಅಫಿಡವಿಟ್ ಅನ್ನು ಸಲ್ಲಿಸುವಂತೆ ಅದು ಆದೇಶಿಸಿದೆ. ಶಾಲೆಗೆ ಮಾಂಸಾಹಾರ

ಮಕ್ಕಳು ಶಾಲೆಯಲ್ಲಿ ಮಾಂಸಾಹಾರ ತಂದಿರುವುದಕ್ಕೆ ಆಕ್ಷೇಪಿಸಿ ಶಾಲೆಯ ಪ್ರಾಂಶುಪಾಲರು ಅವರನ್ನು ಹೊರ ಹಾಕಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಶಾಲೆಯ ನಡವಳಿಕೆಯಿಂದ ಮಕ್ಕಳ ಶಿಕ್ಷಣದ ಹಕ್ಕಿಗೆ ಧಕ್ಕೆಯಾಗಿದೆ ಎಂದು ಹೇಳಿದ್ದಾರೆ.

ಡಿಸೆಂಬರ್ 17 ರಂದು ತನ್ನ ಆದೇಶದಲ್ಲಿ, ಜನವರಿ 6, 2025 ರಂದು ನ್ಯಾಯಾಲಯವು ಅರ್ಜಿಯನ್ನು ಹೊಸದಾಗಿ ವಿಚಾರಣೆಗೆ ಒಳಪಡಿಸುತ್ತದೆ ಎಂದು ಹೇಳಿದೆ. ಜೊತೆಗೆ,”ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮ್ರೋಹಾ ಅವರು ಯಾವುದೇ ಅಫಿಡವಿಟ್ ಸಲ್ಲಿಸದಿದ್ದಲ್ಲಿ, ಅವರು ಮುಂದಿನ ದಿನಾಂಕದಂದು ಖುದ್ದಾಗಿ ಹಾಜರಾಗಬೇಕು” ಎಂದು ಹೇಳಿದೆ.

ಇದನ್ನೂ ಓದಿ: ಅಂಬೇಡ್ಕರ್‌ಗೆ ಅವಮಾನ| ‘ಅಮಿತ್ ಶಾಗೆ ಹುಚ್ಚು ಹಿಡಿದಿದೆ, ಅವರು ರಾಜಕೀಯ ತ್ಯಜಿಸಬೇಕು’ ಎಂದ ಲಾಲು ಪ್ರಸಾದ್

ಅಂಬೇಡ್ಕರ್‌ಗೆ ಅವಮಾನ| ‘ಅಮಿತ್ ಶಾಗೆ ಹುಚ್ಚು ಹಿಡಿದಿದೆ, ಅವರು ರಾಜಕೀಯ ತ್ಯಜಿಸಬೇಕು’ ಎಂದ ಲಾಲು ಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...