Homeಅಂತರಾಷ್ಟ್ರೀಯಬಾಂಗ್ಲಾದೇಶ | ನಿಷೇಧಿತ ಉಲ್ಫಾ ಸಂಘಟನೆಯ ಮುಖ್ಯಸ್ಥನ ಶಿಕ್ಷೆ ಕಡಿತಗೊಳಿಸಿದ ಕೋರ್ಟ್

ಬಾಂಗ್ಲಾದೇಶ | ನಿಷೇಧಿತ ಉಲ್ಫಾ ಸಂಘಟನೆಯ ಮುಖ್ಯಸ್ಥನ ಶಿಕ್ಷೆ ಕಡಿತಗೊಳಿಸಿದ ಕೋರ್ಟ್

- Advertisement -
- Advertisement -

ಬಾಂಗ್ಲಾದೇಶದ ಸುಪ್ರೀಂ ಕೋರ್ಟ್‌ನ ಹೈಕೋರ್ಟ್ ಪೀಠವು 2004 ರ ಶಸ್ತ್ರಾಸ್ತ್ರ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧಿತ ಸಂಘಟನೆಯಾದ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್(ಉಲ್ಫಾ) ಮುಖ್ಯಸ್ಥ ಪರೇಶ್ ಬರುವಾ ಅವರ ಮರಣದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಬುಧವಾರ ಪರಿವರ್ತಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಬಾಂಗ್ಲಾದೇಶ

ನ್ಯಾಯಮೂರ್ತಿಗಳಾದ ಮುಸ್ತಫಾ ಜಮಾನ್ ಇಸ್ಲಾಂ ಮತ್ತು ನಸ್ರೀನ್ ಅಕ್ಟರ್ ಅವರನ್ನೊಳಗೊಂಡ ಪೀಠವು ಮಾಜಿ ಸಚಿವ ಲುಟ್‌ಫೊಝಮಾನ್ ಬಾಬರ್ ಮತ್ತು ಇತರ ಐವರನ್ನು ದೋಷಮುಕ್ತಗೊಳಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಬಾಂಗ್ಲಾದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಏಪ್ರಿಲ್ 1, 2004 ರಂದು ಬಾಂಗ್ಲಾದೇಶ ಪೊಲೀಸರು 4,930 ಬಂದೂಕುಗಳು, 27,020 ಗ್ರೆನೇಡ್‌ಗಳು, 840 ರಾಕೆಟ್ ಲಾಂಚರ್‌ಗಳು, 300 ರಾಕೆಟ್‌ಗಳು, 2,000 ಗ್ರೆನೇಡ್ ಉಡಾವಣಾ ಟ್ಯೂಬ್‌ಗಳು, 6,392 ಪಿಸ್ತೂಲ್‌ಗಳು ಮತ್ತು 1.14 ಮಿಲಿಯನ್ ಬುಲೆಟ್‌ಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಈ ತೀರ್ಪು ನೀಡಿದೆ.

ಚಿತ್ತಗಾಂಗ್‌ನ ಜೆಟ್ಟಿಯಲ್ಲಿ ಎರಡು ದೋಣಿಗಳಿಂದ ಟ್ರಕ್‌ಗಳಿಗೆ ಲೋಡ್ ಮಾಡುತ್ತಿದ್ದಾಗ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಅವುಗಳನ್ನು ಚೀನಾದಲ್ಲಿ ತಯಾರಿಸಲಾಗಿದ್ದು ಮತ್ತು ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್‌ಗೆ ರವಾನಿಸಲಾಗುತ್ತಿತ್ತು ಎಂದು ತನಿಖೆಯು ಬಹಿರಂಗಪಡಿಸಿತ್ತು.

ಜನವರಿ 2014 ರಲ್ಲಿ, ಚಿತ್ತಗಾಂಗ್‌ನ ವಿಶೇಷ ನ್ಯಾಯಾಲಯವು ಬರುವಾ ಮತ್ತು ಇತರ 13 ಜನರಿಗೆ ಮರಣದಂಡನೆ ವಿಧಿಸಿತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್ ಅನ್ನು ಭಾರತದಲ್ಲಿ 1990 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ಅಡಿಯಲ್ಲಿ ನಿಷೇಧಿಸಲಾಗಿದೆ.

1979 ರಿಂದ, ಸಶಸ್ತ್ರ ಹೋರಾಟದ ಮೂಲಕ ಸ್ಥಳೀಯ ಅಸ್ಸಾಮಿ ಜನರಿಗೆ ಅಸ್ಸಾಂನ ಸಾರ್ವಭೌಮ ರಾಷ್ಟ್ರವನ್ನು ರಚಿಸಲು ಈ ಗುಂಪು ಪ್ರಯತ್ನಿಸುತ್ತಿದೆ. ಚೀನಾದಲ್ಲಿದ್ದಾರೆ ಎಂದು ನಂಬಲಾದ ಬರುವಾ ರಾಷ್ಟ್ರೀಯ ತನಿಖಾ ಸಂಸ್ಥೆಯ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

1971ರ ಬಾಂಗ್ಲಾದೇಶ ವಿಮೋಚನಾ ಯುದ್ಧದ ಸಮಯದಲ್ಲಿ ದುಷ್ಕೃತ್ಯಗಳಲ್ಲಿ ಪಾತ್ರವಹಿಸಿದ್ದಾರೆ ಎಂದು ಜಮಾತ್-ಎ-ಇಸ್ಲಾಮಿ ಬಾಂಗ್ಲಾದೇಶದ ಮಾಜಿ ಮುಖ್ಯಸ್ಥ ಮತ್ತು ಪ್ರಕರಣದ ಆರೋಪಿ ಮತಿಯುರ್ ರೆಹಮಾನ್ ನಿಜಾಮಿಯನ್ನು 2016 ರಲ್ಲಿ ಗಲ್ಲಿಗೇರಿಸಲಾಗಿತ್ತು.

ಇದನ್ನೂ ಓದಿ: ನರಸಿಂಗಾನಂದ್ ವಿರುದ್ಧ FIR ದಾಖಲಿಸುವ ಬದಲು ಎಕ್ಸ್‌ನಲ್ಲಿ ಏಕೆ ಪೋಸ್ಟ್ ಮಾಡಿದಿರಿ? – ಆಲ್ಟ್‌ನ್ಯೂಸ್ ಜುಬೇರ್‌ಗೆ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...