ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪಿಸಲಾಗಿದೆ. ಈ ಬಗ್ಗೆ ಸದನದ ಒಳಗೆ ಮತ್ತು ಹೊರಗೆ ವ್ಯಾಪಾಕ ಆಕ್ರೋಶ ವ್ಯಕ್ತವಾಗಿದ್ದು, ಸಚಿವರ ಅಭಿಮಾನಿಗಳು ಸುವರ್ಣಸೌಧದ ಮೊಗಸಾಲೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಸದನದಲ್ಲೆ ಅಶ್ಲೀಲವಾಗಿ
ಬಿಜೆಪಿಯ ಸಿ.ಟಿ. ರವಿ ಅವರ ಮಾತು ಕೇಳಿ ಲಕ್ಷ್ಮಿ ಹೆಬ್ಬಾಳ್ಕರ್ ಕೆಂಡಾಮಂಡಲವಾಗಿದ್ದು, ಇದರಿಂದ ತಮಗಾದ ಅವಮಾನ ತಡೆದುಕೊಳ್ಳಲಾಗದೇ ಕಣ್ಣಿರು ಹಾಕುತ್ತಾ ಪರಿಷತ್ತಿನಿಂದ ಹೊರಗೆ ಹೋಗಿದ್ದಾರೆ ಎಂದು ವರದಿಯಾಗಿದೆ. ಹೆಬ್ಬಾಳ್ಕರ್ ಮಾತಿಗೆ ಕಾಂಗ್ರೆಸ್ ಸದಸ್ಯರು ಧ್ವನಿ ಗೂಡಿಸಿದ್ದು, ಹತ್ತು ಬಾರಿ ಅಸಂವಿಧಾನಿಕ ಪದ ಬಳಸಿದ್ದಾರೆ ಎಂದು ಹೆಬ್ಬಾಳ್ಕರ್ ಆರೋಪ ಮಾಡಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರೆಲ್ಲರೂ ಸದನದಲ್ಲಿ ಕಿಡಿ ಕಾರಿದ್ದಾರೆ. ಸಹ ಸದಸ್ಯರನ್ನು ಕರೆತಂದು ಲಕ್ಷ್ಮಿ ಹೆಬ್ಬಾಳ್ಕರ್ ಸಭಾಪತಿ ಹೊರಟ್ಟಿ ಅವರಿಗೆ ದೂರು ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
‘ಸಂಸತ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ. ಈ ವಿಷಯದ ಚರ್ಚೆಗೆ ಅವಕಾಶ ನೀಡಬೇಕು’ ಎಂದು ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಎಲ್ಲ ಸದಸ್ಯರು ಅಂಬೇಡ್ಕರ್ ಭಾವಚಿತ್ರ ಹಿಡಿದುಕೊಂಡು ಪಟ್ಟು ಹಿಡಿದರು. ಈ ವೇಳೆ ಪ್ರತಿಯಾಗಿ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿ.ಟಿ. ರವಿ ಸೇರಿದಂತೆ ಬಿಜೆಪಿ ಸದಸ್ಯರು ಕೂಡಾ ಅಂಬೇಡ್ಕರ್ ಭಾವಚಿತ್ರ ಹಿಡಿದುಕೊಂಡು ‘ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್’ ಎಂದು ಘೋಷಣೆ ಕೂಗಿದ್ದಾರೆ. ಸದನದಲ್ಲೆ ಅಶ್ಲೀಲವಾಗಿ
ಸದನದಲ್ಲಿ ಕೋಲಾಹಲ ಉಂಟಾದಾಗ ಕಲಾಪವನ್ನು ಸಭಾಪತಿ ಬಸವರಾಜ ಹೊರಟ್ಟಿ ಮುಂದೂಡಿದ್ದಾರೆ. ಕಲಾಪ ಮುಂದೂಡಿಕೆಯಾದರೂ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಸದನದ ಒಳಗೆ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದರು. ಈ ಗದ್ದಲದ ಮಧ್ಯೆ ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದರು. ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಭಾಪತಿಗೆ ದೂರು ನೀಡಿದ ಬಳಿಕ ಸಭಾಪತಿ, ಆಡಿಯೊ ವಿಡಿಯೊ ಪರಿಶೀಲನೆಗೆ ಸೂಚನೆ ನೀಡಿದ್ದಾರೆ.
ಆ ರೀತಿಯ ಪದ ಬಳಸಿಲ್ಲ: ಸಿ ಟಿ ರವಿ
ಈ ಬಗ್ಗೆ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ ಸಿ.ಟಿ ರವಿ, “‘ಲಕ್ಷ್ಮಿ ಹೆಬ್ಬಾಳ್ಳರಗೆ ನಾನು ಆಕ್ಷೇಪಾರ್ಹ ಪದ ಬಳಸಿಲ್ಲ. ನಾನು ಪದ ಬಳಸಿದ ದಾಖಲೆ ಇದ್ದರೇ ತೆಗೆಯಿರಿ. ನಾನು ಆ ರೀತಿಯ ಪದ ಬಳಸಿಲ್ಲ. ನಾನು ಕಪೋಲ ಕಲ್ಪಿತ ಹೇಳಿಕೆಗಳಿಗೆ ಉತ್ತರ ನೀಡಲ್ಲ” ಎಂದು ಹೇಳಿದ್ದಾರೆ.
ಕ್ರಿಮಿನಲ್ ಅಪರಾಧ: ಸಿಎಂ ಸಿದ್ದರಾಮಯ್ಯ
“ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು , ಅದು ಕ್ರಿಮಿನಲ್ ಅಪರಾಧವಾಗಿದೆ. ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಧಾನ ಪರಿಷತ್ ಸಭಾಪತಿಯವರಿಗೆ ದೂರು ನೀಡಿದ್ದಾರೆ. ಪೊಲೀಸ್ ಠಾಣೆಗೂ ದೂರು ನೀಡಲು ಹೋಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಏಯ್.. ಧೈರ್ಯವಿದ್ರೆ ಹೊರಗಡೆ ಬಾ: ಸಿ.ಟಿ.ರವಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಫ್ಯಾನ್ಸ್ ಅವಾಜ್ – 'ಅದೇನ್ ಮಾಡ್ತಾರೆ ಮಾಡ್ಲಿ ಬಿಡ್ರಿ' ಎಂದು ಸವಾಲ್ ಹಾಕಿದ ಸಿ.ಟಿ.ರವಿ#CTRavi #LakshmiHebbalkar #Belagavi #CongressWorkers #WinterSession #BJP pic.twitter.com/FTypYW0AWx
— PublicTV (@publictvnews) December 19, 2024
ಈ ನಡುವೆ ಬೆಳಗಾವಿಯ ಸುವರ್ಣ ಸೌಧದ ಮೊಗಸಾಲೆಯಲ್ಲಿ ವಿಧಾನಪರಿಷತ್ನ ಕಾರಿಡಾರ್ನಲ್ಲಿ ಹೋಗುತ್ತಿರುವಾಗ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಗಲಿಗರು ಏಕಾಏಕಿ ಸಿಟಿ ರವಿಗೆ ಅಡ್ಡ ಹಾಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ನೂರಾರು ಬೆಂಬಲಿಗರು ಘೋಷಣೆ ಕೂಗಿ ಸಿಟಿ ರವಿ ಮೇಲೆ ಮುಗಿಬಿದ್ದಿದ್ದು, ಹಲ್ಲೆಗೆ ಯತ್ನ ನಡೆದಿದೆ ಎಂದು ತಿಳಿದುಬಂದಿದೆ. ಕೂಡಲೇ ಮಾರ್ಷಲ್ಗಳು, ಕಾರಿಡಾರ್ ಗೇಟ್ ಬಂದ್ ಮಾಡಿದ್ದು, ಸಿಟಿ ರವಿ ಅಪಾಯದಿಂದ ಪಾರಾಗಿದ್ದಾರೆ ಎಂದು ಟಿವಿ9 ವರದಿ ಮಾಡಿದೆ.
ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಯು, ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸಿಟಿ ರವಿ ಮೇಲೆ ಹಲ್ಲೆ ಮಾಡಿದ್ದು, ಸುವರ್ಣ ಸೌಧದಲ್ಲಿ ಭಾರೀ ಭದ್ರತಾ ಲೋಪ ಕಂಡುಬಂದಿದೆ ಎಂದು ತಿಳಿಸಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಎರಡನೇ ಬಾರಿಗೆ ಹಲ್ಲೆಗೆ ಯತ್ನ ಮಾಡಿದ್ದು, ಸುರ್ಣ ಸೌಧದ ವಿಐಪಿ ಗೇಟಿನ ಬಳಿ ಕಾರಿನಿಂದ ಇಳಿದಾಗ ಹಲ್ಲೆ ಯತ್ನದಿಂದ ತಪ್ಪಿಸಿಕೊಂಡು ಒಳಗೆ ಹೋದ ಸಿ.ಟಿ. ರವಿ ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ವರದಿ ಹೇಳಿದೆ.


